Tata Safari facelift: ಐಷಾರಾಮಿ ಸೌಲಭ್ಯಗಳೊಂದಿಗೆ ಟಾಟಾ ಸಫಾರಿ ಫೇಸ್‌ಲಿಫ್ಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಸಫಾರಿ ಫೇಸ್‌ಲಿಫ್ಟ್ ಎಸ್ ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

Tata Safari facelift: ಐಷಾರಾಮಿ ಸೌಲಭ್ಯಗಳೊಂದಿಗೆ ಟಾಟಾ ಸಫಾರಿ ಫೇಸ್‌ಲಿಫ್ಟ್ ಬಿಡುಗಡೆ
ಟಾಟಾ ಸಫಾರಿ ಫೇಸ್‌ಲಿಫ್ಟ್ ಬಿಡುಗಡೆ
Praveen Sannamani

Updated on: Oct 17, 2023 | 7:01 PM

ಟಾಟಾ ಮೋಟಾರ್ಸ್(Tata Motors) ತನ್ನ ಬಹುನೀರಿಕ್ಷಿತ ಸಫಾರಿ ಫೇಸ್‌ಲಿಫ್ಟ್(Safari  Facelift) ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25.49 ಲಕ್ಷ ಬೆಲೆ ಹೊಂದಿದೆ. ಹೊಸ ಸಫಾರಿ ಎಸ್ ಯುವಿ ಮಾದರಿಯು ಫೀಚರ್ಸ್ ಗಳಿಗೆ ಅನುಗುಣವಾಗಿ ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಅಕಾಂಪ್ಲಿಶ್ಡ್ ಎನ್ನುವ ನಾಲ್ಕು ವೆರಿಯೆಂಟ್ ಗಳನ್ನು ಹೊಂದಿದ್ದು, ಗಮನಾರ್ಹವಾದ ನವೀಕರಣದೊಂದಿಗೆ ಭರ್ಜರಿ ಫೀಚರ್ಸ್ ಗಳನ್ನು ಪಡೆದುಕೊಂಡಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಸಫಾರಿ ಫೇಸ್‌ಲಿಫ್ಟ್ ಕಾರು ಮಾದರಿಯು ಬಲಿಷ್ಠ ವಿನ್ಯಾಸದೊಂದಿಗೆ ಮತ್ತಷ್ಟು ಸ್ಪೋರ್ಟಿಯಾಗಿ ಮಿಂಚುತ್ತಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಸ್ಪ್ಲಿಟ್ ಗ್ರೀಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಸಂಪೂರ್ಣ ಆಯತಾಕಾರದ ಎಲ್ಇಡಿ ಟೈಲ್ ಲೈಟ್ ಬಾರ್, ಮುಂಭಾಗ ಮತ್ತು ಹಿಂಬದಿಯಲ್ಲಿ ಮರುವಿನ್ಯಾಸಗೊಳಿಸಲಾದ ಬಂಪರ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಹೊಸ ವಿನ್ಯಾಸದ 19 ಇಂಚಿನ ಅಲಾಯ್ ವ್ಹೀಲ್ ಗಳು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

ಹಾಗೆಯೇ ಹೊಸ ಸಫಾರಿ ಕಾರಿನ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರಿನಲ್ಲಿ ವಿಶೇಷವಾಗಿ ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಿದೆ. ಜೊತೆಗೆ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ಫ್ಲಕ್ಸ್ ವುಡ್ ಡ್ಯಾಶ್ ಬೋರ್ಡ್ ನೊಂದಿಗೆ 10.25-ಇಂಚು ಇಲ್ಲವೇ 12.3-ಇಂಚಿನ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ನೀಡಲಾಗಿದ್ದು, ಸ್ಪೋರ್ಟಿ ಡ್ರೈವ್ ಅನುಭವಕ್ಕಾಗಿ ಲೆದರ್ ಪ್ಯಾಡಿಂಗ್ ಜೊತೆಗೆ ಕಾಂಟ್ರಾಸ್ಟ್ ಸ್ವೀಚ್ ಮತ್ತು ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಮೂರು ಡ್ರೈವ್ ಮೋಡ್ ಗಳನ್ನು ಹೊಂದಿದೆ.

ಇದನ್ನೂ ಓದಿ: ADAS ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

Tata Safari facelift (10)

ಹೊಸ ಸಫಾರಿ ಕಾರಿನಲ್ಲಿ ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಬೆಂಬಲಿಸುವ 10.25 ಇಂಚಿನ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ನ್ಯಾವಿಗೇಷನ್ ಜೊತೆಗೆ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಮತ್ತೊಂದು ಆಕರ್ಷಕ ತಾಂತ್ರಿಕ ಅಂಶವೆಂದರೆ ಆಟೋ ಆವೃತ್ತಿಗಳು ಏರ್ ಕ್ರಾಫ್ಟ್ ಸ್ಟೈಲ್ ಹೊಂದಿರುವ ಗೇರ್ ಲೀವರ್ ನೀಡಲಾಗಿದ್ದು, ಇನ್ನುಳಿದಂತೆ ಹೊಸ ಕಾರಿನಲ್ಲಿ ಟಾಟಾ ಮೋಟಾರ್ಸ್ ಲೊಗೊ ಬ್ಲ್ಯಾಕ್ ಲಿಟ್ ಹೊಂದಿರುವ ಫೋರ್ ಸ್ಪೋಕ್ ಸ್ಟೀರಿಂಗ್ ವ್ಹೀಲ್, 10-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, ಮುಂಭಾಗದಲ್ಲಿ ಮೆಮೊರಿ ಫಂಕ್ಷನ್ ಮತ್ತು ವೆಂಟಿಲೆಷನ್ ಹೊಂದಿರುವ ಒಂದನೇ ಮತ್ತು ಎರಡನೇ ಸಾಲಿನ ಆಸನಗಳು, ಪನೊರಮಿಕ್ ಸನ್ ರೂಫ್, ವೈರ್ ಲೇಸ್ ಚಾರ್ಜರ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

Tata Safari facelift (9)

 

ಎಂಜಿನ್ ಮತ್ತು ಪರ್ಫಾಮೆನ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಫಾರಿ ಮತ್ತು ಹ್ಯಾರಿಯರ್ ನಲ್ಲಿ ಈ ಹಿಂದಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 170 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ ಹೊಸ ಸಫಾರಿ ಕಾರಿನ ಇಂಧನ ದಕ್ಷತೆ ಕೂಡಾ ಸಾಕಷ್ಟು ಸುಧಾರಿಸಿದ್ದು,  ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಗೆ 16.30 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಆವೃತ್ತಿಯು 14.50 ಕಿ.ಮೀ ಮೈಲೇಜ್ ನೀಡಲಿದೆ.

ಇದನ್ನೂ ಓದಿ: ರೂ. 4 ಕೋಟಿ ಬೆಲೆಯ ಮರ್ಸಿಡಿಸ್-ಎಎಂಜಿ ಜಿ 63 ಗ್ರ್ಯಾಂಡ್ ಎಡಿಷನ್ ಬಿಡುಗಡೆ

Tata Safari facelift (7)

ಸುರಕ್ಷಾ ಸೌಲಭ್ಯಗಳು

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಫಾರಿ ಫೇಸ್‌ಲಿಫ್ಟ್ ಮಾದರಿಯಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ಮುಂದುವರಿಸಿದೆ. ಜೊತೆಗೆ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳನ್ನು ಮತ್ತು ಟಾಪ್ ಎಂಡ್ ಮಾದರಿಯಲ್ಲಿ 7 ಏರ್ ಬ್ಯಾಗ್ ಗಳ ಜೊತೆಗೆ ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.

Published On - 6:56 pm, Tue, 17 October 23

Follow Us