ಟಾಟಾ ಟಿಯಾಗೋ ಮತ್ತು ಟಿಗೋರ್ ಸಿಎನ್ಜಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಟಿಯಾಗೋ ಮತ್ತು ಟಿಗೋರ್ ಸಿಎನ್ಜಿ ಆವೃತ್ತಿಗಳಲ್ಲಿ ಹೊಸದಾಗಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಿದೆ.
ಸಿಎನ್ಜಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಟಿಯಾಗೋ ಮತ್ತು ಟಿಗೋರ್ ಸಿಎನ್ಜಿ ಮಾದರಿಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಕಾರುಗಳು ಎಕ್ಸ್ ಶೋರೂಂ ಪ್ರಕಾರ ರೂ. 7.90 ಲಕ್ಷದಿಂದ ರೂ. 9.55 ಲಕ್ಷ ಬೆಲೆ ಹೊಂದಿವೆ.
ಟಿಯಾಗೋ ಮತ್ತು ಟಿಗೋರ್ ಸಿಎನ್ಜಿ ಮಾದರಿಗಳಲ್ಲಿ ಈ ಹಿಂದೆ ಮ್ಯಾನುವಲ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದ ಇದೇ ಮೊದಲ ಬಾರಿಗೆ ಆಟೋಮ್ಯಾಟಿಕ್ ಮಾದರಿಗಳನ್ನು ಪರಿಚಯಿಸಲಾಗಿದ್ದು, ಆಟೋಮ್ಯಾಟಿಕ್ ಮಾದರಿಗಳು ಮ್ಯಾನುವಲ್ ಗಿಂತಲೂ ರೂ. 55 ಸಾವಿರದಿಂದ ರೂ. 60 ಸಾವಿರದಷ್ಟು ದುಬಾರಿಯಾಗಿವೆ.
ಇದನ್ನೂ ಓದಿ: ಹೆದ್ದಾರಿಯಲ್ಲಿ ಕಡ್ಡಾಯವಾಗಿರುವ FASTag KYC ಮಾಡುವುದು ಹೇಗೆ?
ಹೊಸ ಆವೃತ್ತಿಗಳ ಬಿಡುಗಡೆಯೊಂದಿಗೆ ಸಿಎನ್ಜಿ ಕಾರುಗಳಲ್ಲಿ ಮೊಟ್ಟ ಮೊದಲ ಬಾರಿಗೆ ಆಟೋಮ್ಯಾಟಿಕ್ ಆವೃತ್ತಿ ಬಿಡುಗಡೆ ಮಾಡಿದ ಹೆಗ್ಗಳಿಕೆ ಟಾಟಾ ಮೋಟಾರ್ಸ್ ಪಾಲಾಗಿದ್ದು, ಹೊಸ ಆಟೋಮ್ಯಾಟಿಕ್ ಆವೃತ್ತಿ 5-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಟ್ರಾಫಿಕ್ ದಟ್ಟಣೆಗಳಲ್ಲೂ ಸುಲಭ ಸಂಚಾರಕ್ಕೆ ಸಹಕಾರಿಯಾಗಿವೆ. ಟ್ರಾಫಿಕ್ ದಟ್ಟಣೆಯಿರುವ ನಗರಗಳಲ್ಲಿ ಕಾರು ಮಾಲೀಕರು ಹೆಚ್ಚಾಗಿ ಆಟೋಮ್ಯಾಟಿಕ್ ಆವೃತ್ತಿಗಳ ಬಳಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಗ್ರಾಹಕರ ಆದ್ಯತೆಗೆ ಅನುಗುಣವಾಗಿ ಟಾಟಾ ಮೋಟಾರ್ಸ್ ಕಂಪನಿಯು ಟಿಯಾಗೋ ಮತ್ತು ಟಿಗೋರ್ ಸಿಎನ್ಜಿ ಎಎಂಟಿ ಅಭಿವೃದ್ದಿ ಪಡಿಸಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಸಿಎನ್ಜಿ ಕಾರುಗಳ ಮಾರಾಟವು ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಉತ್ಪಾದನಾ ಕಂಪನಿಗಳು ಹಲವಾರು ಹೊಸ ಕಾರು ಮಾದರಿಗಳಲ್ಲಿ ಇದೀಗ ಸಿಎನ್ಜಿ ಆವೃತ್ತಿಗಳನ್ನು ಮಾರಾಟ ಮಾಡುತ್ತಿವೆ. ದುಬಾರಿ ಇಂಧನಗಳ ದರ ಮತ್ತು ನಿರ್ವಹಣಾ ವೆಚ್ಚ ಹೆಚ್ಚಳ ಪರಿಣಾಮ ಹೊಸ ಕಾರುಗಳ ಖರೀದಿದಾರರು ಪೆಟ್ರೋಲ್ ಮತ್ತು ಡೀಸೆಲ್ ಕಾರು ಮಾದರಿಗಳಿಗೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ಮತ್ತು ಸಿಎನ್ ಜಿ ಕಾರುಗಳನ್ನು ಖರೀದಿಸುತ್ತಿದ್ದಾರೆ.
ಇದನ್ನೂ ಓದಿ: ಕಾಮೆಟ್ ಮತ್ತು ಜೆಡ್ಎಸ್ ಇವಿ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ ಎಂಜಿ ಮೋಟಾರ್
ಪರಿಸರ ಸ್ನೇಹಿ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳಿಗೆ ಸದ್ಯ ಉತ್ತಮ ಬೇಡಿಕೆಯಿದ್ದರೂ ಬೆಲೆ ತುಸು ದುಬಾರಿಯಾಗಿದ್ದು, ದುಬಾರಿ ಬೆಲೆ ಹಿನ್ನಲೆ ಹಲವು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಿಎನ್ಜಿ ಮಾದರಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಸಿಎನ್ ಜಿ ಕಾರುಗಳು ಸದ್ಯ ಎಂಟ್ರಿ ಲೆವಲ್ ಕಾರುಗಳಲ್ಲಿ ಮಾತ್ರವಲ್ಲದೆ ಮಧ್ಯಮ ಗಾತ್ರದ ಎಸ್ ಯುವಿ ಮತ್ತು ಎಂಪಿವಿ ಕಾರುಗಳಲ್ಲೂ ಸಹ ಮಾರಾಟಗೊಳ್ಳುತ್ತಿದ್ದು, ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.
Published On - 1:40 pm, Thu, 8 February 24