Year Ender 2023: 2023ರಲ್ಲಿ ಬಿಡುಗಡೆಯಾಗಿರುವ ಟಾಪ್ 5 ಸಖತ್ ಫೀಚರ್ಸ್ ಬೈಕ್ ಗಳಿವು..

2023ರಲ್ಲಿ ಹಲವಾರು ಹೊಸ ವಾಹನಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ದ್ವಿಚಕ್ರ ವಾಹನಗಳ ವಿಭಾಗದಲ್ಲೂ ಭರ್ಜರಿ ಫೀಚರ್ಸ್ ಹೊಂದಿರುವ ವಿವಿಧ ಬೈಕ್ ಮಾದರಿಗಳು ಬಿಡುಗಡೆಯಾಗಿವೆ. ಹಾಗಾದ್ರೆ ಈ ವರ್ಷ ಬಿಡುಗಡೆಯಾದ ಪ್ರಮುಖ ಬೈಕ್ ಮಾದರಿಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

Year Ender 2023: 2023ರಲ್ಲಿ ಬಿಡುಗಡೆಯಾಗಿರುವ ಟಾಪ್ 5 ಸಖತ್ ಫೀಚರ್ಸ್ ಬೈಕ್ ಗಳಿವು..
ಟಾಪ್ 5 ಸಖತ್ ಫೀಚರ್ಸ್ ಬೈಕ್ ಗಳು
Follow us
Praveen Sannamani
|

Updated on: Dec 26, 2023 | 6:36 PM

ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನಗಳ(Two Wheelers) ವಿಭಾಗವು ಸಾಕಷ್ಟು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಗ್ರಾಹಕರ ಆದ್ಯತೆಗಳಿಗೆ ಅನುಗುಣವಾಗಿ ಈ ವರ್ಷದಲ್ಲಿ ಹಲವಾರು ಹೊಸ ಬೈಕ್ ಮಾದರಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಹೊಸ ಬೈಕ್ ಮಾದರಿಗಳು ಈ ಹಿಂದಿನ ಆವೃತ್ತಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಪರ್ಫಾಮೆನ್ಸ್ ನಲ್ಲಿ ಸಾಕಷ್ಟು ಗಮನಸೆಳೆಯುತ್ತಿವೆ.

ಕೆಟಿಎಂ 390 ಡ್ಯೂಕ್

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ 2023ರ ಕೆಟಿಎಂ 390 ಡ್ಯೂಕ್ ಬೈಕ್ ಮಾದರಿಯು ಹಳೆಯ ಮಾದರಿಗಿಂತಲೂ ರೂ. 12 ಸಾವಿರ ಬೆಲೆ ಹೆಚ್ಚಳದೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 3.10 ಲಕ್ಷ ಬೆಲೆ ಹೊಂದಿದೆ. ಶಾರ್ಪ್ ಎಡ್ಜ್ ಕಟಿಂಗ್ ವಿನ್ಯಾಸ ಹೊಂದಿರುವ ಹೊಸ ಬೈಕಿನಲ್ಲಿ 398.63 ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 46 ಹಾರ್ಸ್ ಪವರ್, 39 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಜೊತೆಗೆ ಹೊಸ ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್, ಕ್ವಿಕ್ ಶಿಫ್ಟರ್, ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು ಡಿಜಿಟಲ್ ಸ್ಪೀಡೋ ಮೀಟರ್ ಹಾಗೂ ಟ್ರಿಪ್ ಮೀಟರ್ ಜೋಡಣೆ ಹೊಂದಿದೆ.

ಇದನ್ನೂ ಓದಿ: ರೂ. 25 ಸಾವಿರ ಬೆಲೆ ಇಳಿಕೆಯೊಂದಿಗೆ ಹೊಸ ಕವಾಸಕಿ ಡಬ್ಲ್ಯೂ175 ಬೈಕ್ ಬಿಡುಗಡೆ

ರಾಯಲ್ ಎನ್ಫೀಲ್ಡ್ ಹಿಮಾಲಯನ್ 450

ಹೊಸ ಹಿಮಾಲಯನ್ 450 ಬೈಕ್ ಮಾದರಿಯು ಈ ಹಿಂದಿನ ಮಾದರಿಗಿಂತಲೂ ಹೆಚ್ಚು ಬಲಿಷ್ಠವಾದ ವಿನ್ಯಾಸದೊಂದಿಗೆ ಆಲ್ ಎಲ್ಇಡಿ ಲೈಟಿಂಗ್ಸ್ ಹೊಂದಿದ್ದು, ಹೊಸ ಟ್ವಿನ್-ಸ್ಪಾರ್ ಫ್ರೇಮ್ ಆಧರಿತ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 2.69 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಹಿಂದಿನ ಮಾದರಿಗಿಂತಲೂ ಇದು ರೂ. 54 ಸಾವಿರದಷ್ಟು ದುಬಾರಿ ಬೆಲೆಯೊಂದಿಗೆ ಸಾಕಷ್ಟು ಬದಲಾವಣೆಯೊಂದಿಗೆ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದೆ. ಹೊಸ ಬೈಕಿನಲ್ಲಿ 452 ಸಿಸಿ ಲಿಕ್ವಿಡ್ ಕೂಲ್ಡ್, DOHC ಸಿಂಗಲ್ ಸಿಲಿಂಡರ್ ಎಂಜಿನ್‌ ಜೋಡಿಸಲಾಗಿದ್ದು, ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 40 ಹಾರ್ಸ್ ಪವರ್ ಮತ್ತು 40 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಟ್ರಯಂಫ್ ಹೊಸ ಸ್ಪೀಡ್ 400, ಸ್ಕ್ರ್ಯಾಂಬ್ಲರ್ 400 ಎಕ್ಸ್

ಟ್ರಯಂಫ್ ಮೋಟಾರ್ ಸೈಕಲ್ ಕಂಪನಿಯ ಬಜಾಜ್ ಆಟೋ ಕಂಪನಿ ಜೊತೆಗೂಡಿ ಹೊಸ ಬೈಕ್ ಉತ್ಪಾದನಾ ಮಾದರಿಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಹೊಸ ಯೋಜನೆಯ ಭಾಗವಾಗಿ ಮೊದಲ ಹಂತದಲ್ಲಿ ಸ್ಪೀಡ್ 400, ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಬಿಡುಗಡೆ ಮಾಡಿದೆ. ದೆಹಲಿ ಎಕ್ಸ್ ಶೋರೂಂ ಪ್ರಕಾರ ಹೊಸ ಬೈಕ್ ಗಳು ರೂ 2.33 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಇವು ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್‌ಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿವೆ. ಹೊಸ ಬೈಕಿನಲ್ಲಿ 398 ಸಿಸಿ ಲಿಕ್ವಿಡ್ ಕೋಲ್ಡ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 39.5 ಹಾರ್ಸ್ ಪವರ್ ಉತ್ಪಾದಿಸುತ್ತವೆ.

ಹಾರ್ಲೆ ಡೇವಿಡ್ಸನ್ ಎಕ್ಸ್440

ಐಷಾರಾಮಿ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹಾರ್ಲೆ ಡೇವಿಡ್ಸನ್ ತನ್ನ ಬಹುನೀರಿಕ್ಷಿತ ಎಕ್ಸ್440(X440) ಬೈಕ್ ಮಾದರಿಯನ್ನು ಹೀರೋ ಮೊಟೋಕಾರ್ಪ್ ಜೊತೆಗಿನ ಸಹಭಾಗಿತ್ವ ಯೋಜನೆಯಡಿ ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 2.29 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಹೊಸ ಬೈಕಿನಲ್ಲಿ 440 ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೂಲ್ಡ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 27 ಹಾರ್ಸ್ ಪವರ್ ಮತ್ತು 38 ಎನ್ಎಂ ಟಾರ್ಕ್ ಉತ್ಪಾದನೆಗೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯುತ್ತಿದೆ.

ಇದನ್ನೂ ಓದಿ: ಆಕರ್ಷಕ ಬೆಲೆಯೊಂದಿಗೆ 150 ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಡಾಟ್ ಒನ್ ಇವಿ ಸ್ಕೂಟರ್ ಬಿಡುಗಡೆ

ಹೀರೋ ಕರಿಜ್ಮಾ ಎಕ್ಸ್ಎಂಆರ್

ಯುವಕರ ಹಾಟ್ ಫೇವರಿಟ್ ಬೈಕ್ ಮಾದರಿಯಾಗಿದ್ದ ಹೀರೋ ಕರಿಜ್ಮಾ ಬೈಕ್ ಇದೀಗ ಹೊಸ ಕರಿಜ್ಮಾ ಎಕ್ಸ್ಎಂಆರ್ ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1.80 ಲಕ್ಷ ಬೆಲೆ ಹೊಂದಿದೆ. ಹೊಸ ಬೈಕಿನಲ್ಲಿ ಅತ್ಯುತ್ತಮ ಪರ್ಫಾಮೆನ್ಸ್ ಗಾಗಿ ಸ್ಲಿಪ್ ಅಂಡ್ ಅಸಿಸ್ಟ್ ಕ್ಲಚ್ ನೀಡಲಾಗಿದ್ದು, ಇದರಲ್ಲಿ 210 ಸಿಸಿ ಸಿಂಗಲ್ ಸಿಲಿಂಡರ್ ಡಿಏಹೆಚ್ ಸಿ, ಲಿಕ್ವಿಡ್ ಕೂಲ್ಡ್ ಎಂಜಿನ್ ಜೋಡಣೆ ಮಾಡಲಾಗಿದೆ. ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 25.1 ಹಾರ್ಸ್ ಪವರ್ ಮತ್ತು 20.4 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಇದು ಹೆಚ್ಚಿನ ಮಟ್ಟದ ಸ್ಪೋರ್ಟಿ ವಿನ್ಯಾಸದೊಂದಿಗೆ ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್ ಮತ್ತು ರಿಯರ್ ವ್ಯೂ ಮಿರರ್‌ಗಳು ಹ್ಯಾಂಡಲ್‌ಬಾರ್‌ ಹೆಚ್ಚಿನ ಎತ್ತರದೊಂದಿಗೆ ಆಕರ್ಷಕ ನೋಟ ಹೊಂದಿದೆ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM