Best SUV Cars: 2022ರಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಎಸ್​ಯುವಿ ಕಾರುಗಳಿವು!

Year Ender 2022: ಈ ವರ್ಷ ಹಲವು ಹೊಸ ಎಸ್ ಯುವಿ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರುಗಳು ಸಂಪೂರ್ಣ ಮಾಹಿತಿ ಇಲ್ಲಿದೆ.

Best SUV Cars: 2022ರಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಎಸ್​ಯುವಿ ಕಾರುಗಳಿವು!
2022ರಲ್ಲಿ ಬಿಡುಗಡೆಯಾದ ಎಸ್​ಯುವಿ ಕಾರುಗಳು
Follow us
Praveen Sannamani
| Updated By: Digi Tech Desk

Updated on:Dec 23, 2022 | 8:56 PM

ಭಾರತದಲ್ಲಿ ಹೊಸ ಕಾರುಗಳ(New Cars) ಮಾರಾಟವು ಹೆಚ್ಚುತ್ತಿದ್ದು, ಹೊಸ ಕಾರುಗಳಲ್ಲಿ ಎಸ್ ಯುವಿ(SUV’s) ಮಾದರಿಗಳ ಮಾರಾಟವು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಕಂಪನಿಗಳು ಎಸ್ ಯುವಿ ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, 2022ರ ಅವಧಿಯಲ್ಲಿ ಹಲವು ಹೊಸ ಕಾರು ಮಾದರಿಗಳು ಬಿಡುಗಡೆಯಾಗಿವೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಸ್ ಯುವಿ ಮಾದರಿಗಳು ಭಾರೀ ಜನಪ್ರಿಯತೆ ಹೊಂದುತ್ತಿವೆ. ಕಾರು ಮಾರಾಟದಲ್ಲಿ ಕಳೆದ ಎರಡು ವರ್ಷಗಳಿಂದ ಎಸ್ ಯುವಿ ಕಾರುಗಳ ಮಾರಾಟ ಪ್ರಮಾಣವು ನಿರಂತರವಾಗಿ ಏರಿಕೆಯಾಗುತ್ತಿದ್ದು, ಹೊಸ ಕಾರುಗಳಲ್ಲಿ ಸಾಂಪ್ರಾದಾಯಿಕ ಮಾದರಿಗಳ ಜೊತೆಗೆ ಸಿಎನ್ ಜಿ ಮತ್ತು ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ.

ಮಹೀಂದ್ರಾ ಸ್ಕಾರ್ಪಿಯೋ ಎನ್

2022ರಲ್ಲಿ ಬಿಡುಗಡೆಯಾದ ಪ್ರಮುಖ ಎಸ್ ಯುವಿ ಕಾರುಗಳಲ್ಲಿ ಮಹೀಂದ್ರಾ ಹೊಸ ತಲೆಮಾರಿನ ಸ್ಕಾರ್ಪಿಯೋ ಎನ್ ಅಗ್ರಸ್ಥಾನದಲ್ಲಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿದ್ದು, ಇದು 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಹಲವಾರು ಆಕರ್ಷಕ ಫೀಚರ್ಸ್ ಹೊಂದಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.90 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನ ಜೊತೆಗೆ ಈ ಹಿಂದಿನ ತಲೆಮಾರಿನ ಆವೃತ್ತಿಯು ಸ್ಕಾರ್ಪಿಯೋ ಕ್ಲಾಸಿಕ್ ಹೆಸರಿನಲ್ಲಿ ಮಾರಾಟಗೊಳ್ಳುತ್ತಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ

ಹೊಸ ಎಸ್ ಯುವಿ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮತ್ತೊಂದು ಕಾರು ಮಾದರಿಯೆಂದರೆ ಅದು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ. ಇದು ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು 1.5 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆ ಹೊಂದಿದೆ. ಇದರೊಂದಿಗೆ ಹೊಸ ಕಾರು ಪ್ರಮುಖ ವೆರಿಯೆಂಟ್ ಗಳೊಂದಿಗೆ ಆರಂಭಿಕವಾಗಿ ರೂ. 10.45 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.65 ಲಕ್ಷ ಬೆಲೆ ಹೊಂದಿದ್ದು, ಇದು ಅತ್ಯುತ್ತಮ ಇಂಧನ ದಕ್ಷತೆಯೊಂದಿಗೆ 4×4 ವರ್ಷನ್ ನಲ್ಲೂ ಖರೀದಿಗೆ ಲಭ್ಯವಿದೆ.

ಟೊಯೊಟಾ ಹೈರೈಡರ್

ಹೊಸ ಟೊಯೊಟಾ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಒಂದೇ ಪ್ಲ್ಯಾಟ್ ನಲ್ಲಿ ನಿರ್ಮಾಣಗೊಂಡಿದ್ದು, ಈ ಎರಡು ಕಾರಿನಲ್ಲೂ ಬಹುತೇಕ ತಾಂತ್ರಿಕ ಅಂಶಗಳು ಒಂದೇ ರೀತಿಯಲ್ಲಿವೆ. ಹೈರೈಡರ್ ಮಾದರಿಯು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.48 ಲಕ್ಷದಿಂದ ರೂ. 18.99 ಲಕ್ಷ ಬೆಲೆ ಹೊಂದಿದ್ದು, ಇದು ಪ್ರತಿ ಲೀಟರ್ ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ನೀಡುತ್ತಿದೆ. ಜೊತೆಗೆ ಭಾರತದಲ್ಲಿ ಸಿಎನ್ ಜಿ ಕಾರುಗಳ ಮಾರಾಟ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲಿಯೇ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಜೊತೆಗೂಡಿ ಸಿಎನ್ ಜಿ ಗ್ರ್ಯಾಂಡ್ ವಿಟಾರಾ ಮತ್ತು ಹೈರೈಡರ್ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿವೆ.

ಸಿಟ್ರನ್ ಹೊಸ ಸಿ3

ಹೊಸ ಎಸ್ ಯುವಿ ಕಾರುಗಳ ವಿಭಾಗದಲ್ಲಿ ಗಮನಸೆಳೆದ ಮತ್ತೊಂದು ಕಾರು ಮಾದರಿಯೆಂದರೆ ಅದು ಸಿಟ್ರನ್ ಹೊಸ ಸಿ3. ಇದು ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು 1.2-ಲೀಟರ್ ಎನ್ಎ ಪೆಟ್ರೋಲ್ ಮತ್ತು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ಇದು ಮ್ಯಾನುವಲ್ ಆಯ್ಕೆಯಲ್ಲಿ ಮಾತ್ರ ಹೊಂದಿದ್ದು, ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.88 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.15 ಲಕ್ಷ ಬೆಲೆ ಹೊಂದಿದೆ.

ಬಿವೈಡಿ ಅಟ್ಟೊ 3 ಇವಿ

ಹೊಸ ಎಸ್ ಯುವಿ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳು ಕೂಡಾ ಗಮನಸೆಳೆಯತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಬಿವೈಡಿ ಹೊಸ ಅಟ್ಟೊ 3 ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಇದು 60.48 ಕೆವಿಹೆಚ್ ಬ್ಲೇಡ್ ಬ್ಯಾಟರಿ ಪ್ಯಾಕ್ ಜೋಡಿಸಲಾಗಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 521 ಕಿ.ಮೀ ಮೈಲೇಜ್ ನೀಡುತ್ತದೆ. ಜೊತೆಗೆ ಇದರಲ್ಲಿ ಎಡಿಎಎಸ್ ಸೌಲಭ್ಯ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ. ಇದು ಸದ್ಯ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 33.99 ಲಕ್ಷ ಬೆಲೆ ಹೊಂದಿದ್ದು, ದುಬಾರಿ ಬೆಲೆಯೊಂದಿಗೆ ಹಲವಾರು ಹೊಸ ಫೀಚರ್ಸ್ ಹೊಂದಿದೆ.

Published On - 8:39 pm, Fri, 23 December 22

ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ