AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Safest Cars: ಕಡಿಮೆ ಬೆಲೆಗೆ 6 ಏರ್‌ಬ್ಯಾಗ್‌ ಗಳ ಸುರಕ್ಷತೆ ಹೊಂದಿರುವ ಕಾರುಗಳು!

ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಇತ್ತೀಚೆಗೆ ಆಟೋಮೊಬೈಲ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಇದರ ಪರಿಣಾಮ ಮಧ್ಯಮ ಗಾತ್ರದ ಹೊಸ ಕಾರುಗಳ ಸುರಕ್ಷತೆಯಲ್ಲಿ ಮಹತ್ವದ ಬದಲಾವಣೆಯಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ ಏರ್ ಬ್ಯಾಗ್ ಗಳ ಜೋಡಣೆ ಪ್ರಮುಖ ಪಾತ್ರವಹಿಸುತ್ತಿದೆ.

Safest Cars: ಕಡಿಮೆ ಬೆಲೆಗೆ 6 ಏರ್‌ಬ್ಯಾಗ್‌ ಗಳ ಸುರಕ್ಷತೆ ಹೊಂದಿರುವ ಕಾರುಗಳು!
ಕಡಿಮೆ ಬೆಲೆಯ ಸುರಕ್ಷಿತ ಕಾರುಗಳು!
Praveen Sannamani
|

Updated on: Feb 23, 2024 | 2:48 PM

Share

ರಸ್ತೆಗೆ ಇಳಿಯುವ ವಾಹನಗಳ ಸಂಖ್ಯೆ ಹೆಚ್ಚಾದಂತೆ ಅಪಘಾತಗಳ (Accidents) ಪ್ರಮಾಣದಲ್ಲೂ ಗಣನೀಯ ಹೆಚ್ಚಳವುಂಟಾಗಿದೆ. ಹೀಗಾಗಿ ಅಪಘಾತಗಳಲ್ಲಿನ ಸಾವು ನೋವಿನ ಪ್ರಮಾಣವನ್ನು ತಗ್ಗಿಸಲು ಹೊಸ ವಾಹನಗಳ ಸುರಕ್ಷತೆಯನ್ನು ಹೆಚ್ಚಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಏರ್ ಬ್ಯಾಗ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಇವು ಅಪಘಾತಗಳ ತೀವ್ರತೆ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗುತ್ತಿವೆ. ಇದೇ ಕಾರಣಕ್ಕೆ ಇತ್ತೀಚೆಗೆ ಬಿಡುಗಡೆಯಾದ ಪ್ರಮುಖ ಕಾರುಗಳಲ್ಲಿ ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ಸ್ ನೀಡಲಾಗುತ್ತಿದ್ದು, ಇವು ಕೈಗೆಟುಕುವ ಬೆಲೆಗೆ ಖರೀದಿಗೆ ಲಭ್ಯವಿವೆ.

ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಸದ್ಯ ಫ್ರಂಟ್ ಡ್ಯುಯಲ್ ಏರ್ ಬ್ಯಾಗ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವಲ್ಲಿ ಆರು ಏರ್ ಬ್ಯಾಗ್ ಹೊಂದಿರುವ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಕಡಿಮೆ ಬೆಲೆಯಲ್ಲಿ ಹೆಚ್ಚು ಏರ್ ಬ್ಯಾಗ್ ಹೊಂದಿರುವ ಕಾರುಗಳ ಪಟ್ಟಿಯಲ್ಲಿ ಸದ್ಯ ಹ್ಯುಂಡೈ ಎಕ್ಸ್ ಟರ್ ಮೊದಲ ಸ್ಥಾನದಲ್ಲಿದ್ದು, ಎಕ್ಸ್ ಟರ್ ಕಾರಿನ ಎಲ್ಲಾ ವೆರಿಯೆಂಟ್ ಗಳಲ್ಲೂ 6 ಏರ್ ಬಾಗ್ಸ್ ನೀಡಲಾಗಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 6.13 ಲಕ್ಷದಿಂದ ರೂ. 10.28 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಮೊದಲ ಬಾರಿ ಹೊಸ ಕಾರು ಖರೀದಿಸುತ್ತಿದ್ದೀರಾ? ಈ ವಿಚಾರಗಳು ತಪ್ಪದೇ ತಿಳಿದಿರಲಿ..

ಹ್ಯುಂಡೈ ಎಕ್ಸ್ ಟರ್ ನಂತರ ಅತಿ ಹೆಚ್ಚು ಏರ್ ಬ್ಯಾಗ್ ಹೊಂದಿರುವ ಕಾರುಗಳಲ್ಲಿ ಕಿಯಾ ಸೊನೆಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ ಯುವಿ ಪ್ರಮುಖವಾಗಿದೆ. ಇದರಲ್ಲೂ 6 ಏರ್ ಬ್ಯಾಗ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಜೊತೆಗೆ 360 ಡಿಗ್ರಿ ವ್ಯೂ ಕ್ಯಾಮೆರಾ ನೀಡಲಾಗಿದೆ. ಇದು ಸದ್ಯಕ್ಕೆ ಎಕ್ಸ್ ಶೋರೂಂ ಪ್ರಕಾರ ರೂ. 7.99 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಸುರಕ್ಷಿತ ಕಾರುಗಳಲ್ಲಿ ಟಾಟಾ ನೆಕ್ಸಾನ್ ಸಹ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ನೆಕ್ಸಾನ್ ಫೇಸ್ ಲಿಫ್ಟ್ ಕಾರಿನಲ್ಲಿ 6 ಏರ್ ಬ್ಯಾಗ್ ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಜೊತೆಗೆ ಹೊಸ ನೆಕ್ಸಾನ್ ಕಾರಿನಲ್ಲಿ ಹಲವಾರು ಸೇಫ್ಟಿ ಫೀಚರ್ಸ್ ಗಳಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 8.15 ಲಕ್ಷದಿಂದ ರೂ. 15.60 ಲಕ್ಷ ಬೆಲೆ ಹೊಂದಿದೆ.

ಹ್ಯುಂಡೈ ಕಂಪನಿಯು ತನ್ನ ಹೊಸ ಕಾರುಗಳಲ್ಲಿ ಸುರಕ್ಷಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವೆನ್ಯೂ ಕಾರಿನಲ್ಲೂ ಸಹ 6 ಏರ್ ಬ್ಯಾಗ್ ಗಳನ್ನು ಜೋಡಿಸಲಾಗಿದೆ. ಜೊತೆಗೆ ಹೊಸ ವೆನ್ಯೂ ಕಾರಿನ ಹೈ ಎಂಡ್ ವೆರಿಯೆಂಟ್ ನಲ್ಲಿ ಲೆವಲ್ 1 ಎಡಿಎಎಸ್ ಫೀಚರ್ಸ್ ಸಹ ನೀಡಲಾಗುತ್ತಿದೆ. ಸದ್ಯ ಇದು ಎಕ್ಸ್ ಶೇರೂಂ ಪ್ರಕಾರ ರೂ. 7.94 ಲಕ್ಷದಿಂದ ರೂ. 13.48 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಬಿಡುಗಡೆಯಾಗಲಿರುವ ಟಾಪ್ 5 ಹೊಸ ಎಸ್ ಯುವಿ ಕಾರುಗಳಿವು!

ಇನ್ನು ಕಡಿಮೆ ಬೆಲೆಯ ಸುರಕ್ಷಿತ ಕಾರುಗಳ ಪಟ್ಟಿಯಲ್ಲಿ ಹೊಸ ಕಿಯಾ ಸೆಲ್ಟೋಸ್ ಸಹ ಗಮನಸೆಳೆಯುತ್ತಿದೆ. ಸೆಲ್ಟೋಸ್ ಫೇಸ್ ಲಿಫ್ಟ್ ನಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳನ್ನು ನೀಡಲಾಗುತ್ತಿದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 10.89 ಲಕ್ಷ ಆರಂಭಿಕ ಬೆಲೆ ಹೊಂದಿದೆ.