Most affordable turbo-petrol cars: ಬಜೆಟ್ ಬೆಲೆಯ ಟಾಪ್ 5 ಟರ್ಬೊ ಪೆಟ್ರೋಲ್ ಕಾರುಗಳಿವು!

ಹೊಸ ಕಾರುಗಳ ಮಾರಾಟದಲ್ಲಿ ಇತ್ತೀಚೆಗೆ ಹೆಚ್ಚಿನ ಪರ್ಫಾಮೆನ್ಸ್ ಹೊಂದಿರುವ ಟರ್ಬೊಚಾಜ್ಡ್ ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಬಜೆಟ್ ಬೆಲೆಯ ಟರ್ಬೊಚಾರ್ಜ್ಡ್ ಕಾರುಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Most affordable turbo-petrol cars: ಬಜೆಟ್ ಬೆಲೆಯ ಟಾಪ್ 5 ಟರ್ಬೊ ಪೆಟ್ರೋಲ್ ಕಾರುಗಳಿವು!
ಟಾಪ್ 5 ಟರ್ಬೊ ಪೆಟ್ರೋಲ್ ಕಾರುಗಳಿವು!
Follow us
Praveen Sannamani
|

Updated on: Oct 31, 2023 | 6:02 PM

ದೇಶಿಯ ಮಾರುಕಟ್ಟೆಯಲ್ಲಿ ಪ್ರಯಾಣಿಕರ ಕಾರುಗಳ (Passenger Cars) ಮಾರಾಟ ಪ್ರಮಾಣವು ಕಳೆದ 5 ವರ್ಷಗಳಲ್ಲಿ ಸಾಕಷ್ಟು ಬೆಳವಣಿಗೆ ಸಾಧಿಸಿದ್ದು, ಇದೀಗ ಗ್ರಾಹಕರ ಹೊಸ ಕಾರುಗಳಲ್ಲಿ ವಿಶೇಷವಾಗಿ ಪರ್ಫಾಮೆನ್ಸ್ ಕಾರು ಮಾದರಿಗಳ ಖರೀದಿಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಇಂಧನ ದಕ್ಷತೆ ಹೆಚ್ಚಿರುವ ಕಾರುಗಳ ಹೆಚ್ಚಿನ ಬೇಡಿಕೆಯಿದ್ದರೂ ಸಹ ಪರ್ಫಾಮೆನ್ಸ್ ಮಾದರಿಗಳಿಗೂ ಉತ್ತಮ ಬೇಡಿಕೆ ಹರಿದುಬರುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆಯಲ್ಲಿ ಹಲವಾರು ಕಾರುಗಳು ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿವೆ.

ಈ ಮೊದಲು ಹೈ ಎಂಡ್ ಕಾರುಗಳಲ್ಲಿ ಮಾತ್ರ ಟರ್ಬೊಚಾಜ್ಡ್ ಎಂಜಿನ್ ಆಯ್ಕೆ ನೀಡುತ್ತಿದ್ದ ಕಾರು ಉತ್ಪಾದನಾ ಕಂಪನಿಗಳು ಇತ್ತೀಚೆಗೆ ಬಜೆಟ್ ಕಾರು ಮಾದರಿಗಳಲ್ಲೂ ಪರ್ಫಾಮೆನ್ಸ್ ಆವೃತ್ತಿಗಳನ್ನು ಮಾರಾಟಮಾಡುತ್ತಿದ್ದು, ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿರುವ ಹಲವಾರು ಟರ್ಬೊಚಾರ್ಜ್ಡ್ ಪೆಟ್ರೋಲ್ ಕಾರುಗಳು ಖರೀದಿಗೆ ಲಭ್ಯವಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಜೆಟ್ ಬೆಲೆಯ ಟಾಪ್ 5 ಟರ್ಬೊ ಪೆಟ್ರೋಲ್ ಕಾರುಗಳು ಯಾವವು? ಅವುಗಳ ವಿಶೇಷತೆಗಳೇನು? ಈ ಮಾಹಿತಿ ಇಲ್ಲಿದೆ.

ಹ್ಯುಂಡೈ ಐ20 ಎನ್-ಲೈನ್

ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯುತ್ತಿರವ ಹ್ಯುಂಡೈ ಐ20 ಎನ್-ಲೈನ್ ಆವೃತ್ತಿಯು ಬಜೆಟ್ ಬೆಲೆಯ ಟರ್ಬೊಚಾರ್ಜ್ಡ್ ಪೆಟ್ರೋಲ್ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಐ20 ಎನ್-ಲೈನ್ ಮಾದರಿಯಲ್ಲಿ 1.0 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಇಲ್ಲವೇ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮೂಲಕ 118.35 ಹಾರ್ಸ್ ಪವರ್ ಮತ್ತು 172 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದನ್ನೂ ಓದಿ: ಬಿಡುಗಡೆಗೆ ಸಿದ್ದವಾಗಿವೆ ಟಾಪ್ 5 ಬಹುನೀರಿಕ್ಷಿತ ಹೊಸ ಕಾರುಗಳು!

ಮಹೀಂದ್ರಾ ಎಕ್ಸ್‌ಯುವಿ300 ಟರ್ಬೊಸ್ಪೋರ್ಟ್

ಬಜೆಟ್ ಬೆಲೆಯ ಟರ್ಬೊಚಾರ್ಜ್ಡ್ ಪೆಟ್ರೋಲ್ ಕಾರುಗಳ ಪಟ್ಟಿಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೊಸ್ಪೋರ್ಟ್ ಕೂಡಾ ಒಂದಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 9.30 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಎಕ್ಸ್‌ಯುವಿ300 ಟರ್ಬೊಸ್ಪೋರ್ಟ್ ಆವೃತ್ತಿಯಲ್ಲಿ 1.2 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 130 ಹಾರ್ಸ್ ಪವರ್ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಕ್ಸ್‌ಯುವಿ300 ಟರ್ಬೊಸ್ಪೋರ್ಟ್ ಆವೃತ್ತಿ ಒಟ್ಟು ನಾಲ್ಕು ವೆರಿಯೆಂಟ್ ಹೊಂದಿದ್ದು, ಇದರ ಟಾಪ್ ಎಂಡ್ ಮಾದರಿಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಸಿಟ್ರನ್ ಸಿ3

ಬಜೆಟ್ ಬೆಲೆಯ ಟರ್ಬೊಚಾಜ್ಡ್ ಕಾರುಗಳಲ್ಲಿ ಇತ್ತೀಚೆಗೆ ಗಮನಸೆಳೆಯುತ್ತಿರುವ ಕಾರುಗಳಲ್ಲಿ ಸಿಟ್ರನ್ ಸಿ3 ಮೈಕ್ರೊ ಎಸ್ ಯುವಿ ಪ್ರಮುಖವಾಗಿದೆ. ಸಿ3 ಮೈಕ್ರೊ ಎಸ್ ಯುವಿಯಲ್ಲಿ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಟರ್ಬೊ ಪೆಟ್ರೋಲ್ ಹೊಂದಿರುವ ಸಿ3 ಕಾರು ಕೇವಲ ಒಂದೇ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 8.28 ಲಕ್ಷ ಬೆಲೆ ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್

ಬಜೆಟ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಕೂಡಾ ಹೆಚ್ಚಿನ ಬೇಡಿಕೆಯಲ್ಲಿರುವ ಕಾರು ಮಾದರಿಯಾಗಿದೆ. ಫ್ರಾಂಕ್ಸ್ ಕಾರಿನಲ್ಲಿ ಈ ಹಿಂದಿನ ಬಲೆನೊ ಟರ್ಬೊದಲ್ಲಿದ್ದ 1.0 ಲೀಟರ್ ಟರ್ಬೊಚಾಜ್ಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಇಲ್ಲವೇ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 98.6 ಹಾರ್ಸ್ ಪವರ್ ಮತ್ತು 147.6 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಫ್ರಾಂಕ್ಸ್ ಟರ್ಬೊ ಆವೃತ್ತಿಯು ಒಟ್ಟು ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 9.73 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಇದನ್ನೂ ಓದಿ: ಪರ್ಫಾಮೆನ್ಸ್ ಪ್ರಿಯರಿಗಾಗಿ ಬಿಡುಗಡೆಯಾಗಲಿದೆ ಟಾಟಾ ಆಲ್ಟ್ರೊಜ್ ರೇಸರ್..

ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಹೊಸ ಮ್ಯಾಗ್ನೈಟ್ ಮೈಕ್ರೊ ಎಸ್ ಯುವಿ ಮಾದರಿಯು ಸಹ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯುತ್ತಿದ್ದು, ಇದರಲ್ಲಿ 1.0 ಲೀಟರ್ ಟರ್ಬೊಚಾರ್ಜ್ಡ್ ಎಂಜಿನ್ ಆಯ್ಕೆ ಹೊಂದಿದೆ. ಇದು 5-ಸ್ಪೀಡ್ ಮ್ಯಾನುವಲ್ ಇಲ್ಲವೇ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 98.63 ಹಾರ್ಸ್ ಪವರ್ ಮತ್ತು 160 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಟರ್ಬೊಚಾರ್ಜ್ಡ್ ಎಂಜಿನ್ ಹೊಂದಿರುವ ಮ್ಯಾಗ್ನೈಟ್ ಕಾರು ಒಟ್ಟು ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 8.25 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ