New cars launched in September: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಹೊಸ ಕಾರುಗಳಿವು!

ಭಾರತದಲ್ಲಿ ಹೊಸ ಕಾರುಗಳ ಅಬ್ಬರ ಹೆಚ್ಚುತ್ತಿದ್ದು, ಸಾಂಪ್ರಾಯಿಕ ಕಾರುಗಳ ಜೊತೆಗೆ ಇವಿ ಮತ್ತು ಹೈಬ್ರಿಡ್ ಕಾರುಗಳ ಅಬ್ಬರ ಹೆಚ್ಚುತ್ತಿದೆ.

New cars launched in September: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಹೊಸ ಕಾರುಗಳಿವು!
ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಹೊಸ ಕಾರುಗಳಿವು!
Follow us
Praveen Sannamani
|

Updated on: Oct 01, 2023 | 2:31 PM

ಹಬ್ಬದ ಋತು ಹಿನ್ನಲೆಯಲ್ಲಿ ಹೊಸ ವಾಹನ(New Vehicles) ಮಾರಾಟದಲ್ಲಿ ಸಾಕಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ವಾಹನಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಹೊಸ ವಾಹನಗಳಲ್ಲಿ ಕಾರುಗಳ ಮಾರಾಟ ಕೂಡಾ ಗಮನಸೆಳೆಯುತ್ತಿದ್ದು, ಕಳೆದ ತಿಂಗಳು ಹತ್ತಕ್ಕೂ ಹೆಚ್ಚು ಹೊಸ ಕಾರುಗಳು(New Cars) ಭರ್ಜರಿಯಾಗಿ ಬಿಡುಗಡೆಯಾಗಿವೆ. ಬಿಡುಗಡೆಯಾದ ಹೊಸ ಕಾರುಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಜೊತೆಗೆ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳು ಕೂಡಾ ಗಮನಸೆಳೆಯುತ್ತಿವೆ. ಹಾಗಾದ್ರೆ ಕಳೆದ ತಿಂಗಳು ಬಿಡುಗಡೆಯಾದ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಮತ್ತು ಬೆಲೆ ಎಷ್ಟು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಹೋಂಡಾ ಎಲಿವೇಟ್

ಹೊಸ ಹೋಂಡಾ ಎಲಿವೇಟ್ ಕಾರು ಎಸ್ ವಿ, ವಿ, ವಿಎಕ್ಸ್ ಮತ್ತು ಜೆಡ್ಎಕ್ಸ್ ಎನ್ನುವ ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ ಎಸ್ ವಿ ಮ್ಯಾನುವಲ್ ವೆರಿಯೆಂಟ್ ರೂ. 11 ಲಕ್ಷ ಆರಂಭಿಕ ಬೆಲೆ ಹೊಂದಿದ್ದರೆ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಜೆಡ್ಎಕ್ಸ್ ವೆರಿಯೆಂಟ್ ರೂ. 16 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಹೋಂಡಾ ಕಂಪನಿಯ ಗ್ಲೋಬಲ್ ಸ್ಮಾಲ್ ಕಾರ್ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗಿದ್ದು, 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಲಾಗಿದ್ದು, ಸುರಕ್ಷತೆಗಾಗಿ 6 ಏರ್ ಬ್ಯಾಗ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಪಡೆದುಕೊಂಡಿದೆ.

ಟಾಟಾ ನೆಕ್ಸಾನ್ ಫೇಸ್ ಲಿಫ್ಟ್

ಟಾಟಾ ಮೋಟಾರ್ಸ್ ಕಂಪನಿ ತನ್ನ ಬಹುನೀರಿಕ್ಷಿತ ನೆಕ್ಸಾನ್ ಫೇಸ್ ಲಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 8.10 ಲಕ್ಷದಿಂದ ರೂ.12.99 ಲಕ್ಷ ಬೆಲೆ ಹೊಂದಿದೆ. ಹೊಸ ಕಾರಿನಲ್ಲಿ ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಎಸ್, ಕ್ರಿಯೆಟಿವ್, ಕ್ರಿಯೆಟಿವ್ ಪ್ಲಸ್, ಫಿಯರ್ ಲೆಸ್, ಫಿಯರ್ ಲೆಸ್ ಪ್ಲಸ್ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿದೆ. 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರಿನಲ್ಲಿ ಟರ್ಬೊ ಪೆಟ್ರೋಲ್ ಆವೃತ್ತಿಯು ಈ ಬಾರಿ ಪ್ರಮುಖ ಆಕರ್ಷಣೆಯಾಗಿದೆ. 1.2 ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದರೆ 1.2 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದೆ.

ಇದನ್ನೂ ಓದಿ: ದೇಶದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಚಾಲನೆ

ಟಾಟಾ ನೆಕ್ಸಾನ್ ಇವಿ ಫೇಸ್ ಲಿಫ್ಟ್

ನೆಕ್ಸಾನ್ ಇವಿ ಫೇಸ್ ಲಿಫ್ಟ್ ಆವೃತ್ತಿಯು ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.74 ಲಕ್ಷದಿಂದ ಟಾಪ್ ಎಂಡ್ ವೆರಿಯೆಂಟ್ ರೂ. 19.94 ಲಕ್ಷ ಬೆಲೆ ಹೊಂದಿದೆ. ನೆಕ್ಸಾನ್ ಇವಿ ಹೊಸ ಕಾರಿನ ಲಾಂಗ್ ರೇಂಜ್ ವೆರಿಯೆಂಟ್ ಗಳಲ್ಲಿ 40.5 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡಲಾಗಿದ್ದರೆ ಮಿಡ್ ರೇಂಜ್ ವೆರಿಯೆಂಟ್ ಗಳಲ್ಲಿ 30 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡಲಾಗಿದೆ. ಲಾಂಗ್ ರೇಂಜ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ ಗರಿಷ್ಠ 465 ಕಿ.ಮೀ ಮೈಲೇಜ್ ನೀಡಿದರೆ ಮಿಡ್ ರೇಂಜ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ 325 ಕಿ.ಮೀ ಮೈಲೇಜ್ ನೀಡುತ್ತವೆ. ಜೊತೆಗೆ ಹೊಸ ಕಾರಿನ ವಿನ್ಯಾಸದಲ್ಲೂ ಭಾರೀ ಬದಲಾವಣೆ ತರಲಾಗಿದ್ದು, ಚಾರ್ಜಿಂಗ್ ಸಮಸ್ಯೆ ಬಗೆಹರಿಸಲು V2V ಮತ್ತು V2L ಚಾರ್ಜಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗಿದೆ.

ವೊಲ್ವೊ ಸಿ40 ರೀಚಾರ್ಜ್

ವೊಲ್ವೊ ಕಂಪನಿ ತನ್ನ ಹೊಚ್ಚ ಹೊಸ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್ ಯುವಿ ಕೂಪೆ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 61.25 ಲಕ್ಷ ಬೆಲೆ ಹೊಂದಿದೆ. 78kWh ಬ್ಯಾಟರಿ ಪ್ಯಾಕ್ ಹೊಂದಿರುವ ಹೊಸ ಕಾರು ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಜೊತೆಗೆ ಪ್ರತಿ ಚಾರ್ಜ್ ಗೆ ಗರಿಷ್ಠ 530 ಕಿ.ಮೀ ಮೈಲೇಜ್ ನೀಡಲಿದ್ದು, ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯದೊಂದಿಗೆ 408 ಹಾರ್ಸ್ ಪವರ್ ಮತ್ತು 660 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಆಕರ್ಷಕ ವಿನ್ಯಾಸ ಮತ್ತು ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಸೆನ್ಸಾರ್ ಆಧರಿತ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್ ನೀಡಲಾಗಿದೆ.

ಇದನ್ನೂ ಓದಿ: ಬರೋಬ್ಬರಿ ನೂರು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ಈ ಮಹಾಶಯ ತೆತ್ತ ದಂಡವೆಷ್ಟು ನೋಡಿ..

ಸಿಟ್ರನ್ ಸಿ3 ಏರ್‌ಕ್ರಾಸ್

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಸ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್ ಯುವಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಸದ್ಯಕ್ಕೆ ಹೊಸ ಕಾರಿನ ಬೆಸ್ ವೆರಿಯೆಂಟ್ ಬೆಲೆ ಮಾತ್ರ ಹಂಚಿಕೊಂಡಿರುವ ಸಿಟ್ರನ್ ಕಂಪನಿಯು ಅಧಿಕೃತ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರಿನಲ್ಲಿ ಮತ್ತೊಂದು ವಿಶೇಷವೆಂದರೆ ಗ್ರಾಹಕರು 5 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಖರೀದಿಸಬಹುದಾಗಿದ್ದು, 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಹೊಂದಿದೆ. ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಸಹ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ