Global NCAP 2023: ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಹೊಂದಿರುವ ಕಾರುಗಳಿವು!

|

Updated on: Dec 27, 2023 | 6:41 PM

ಭಾರತದಲ್ಲಿ ಮಾರಾಟವಾಗುತ್ತಿರುವ ಹೊಸ ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾಗಿ ಹೆಚ್ಚಿನ ಮಟ್ಟದ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಪ್ರಮುಖ ಕಾರುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Global NCAP 2023: ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಹೊಂದಿರುವ ಕಾರುಗಳಿವು!
ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದುಕೊಂಡ ಕಾರುಗಳು
Follow us on

ದೇಶಾದ್ಯಂತ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶದೊಂದಿಗೆ ಹೊಸ ವಾಹನಗಳ (New Vehicles) ಸುರಕ್ಷತೆಯಲ್ಲಿ ಹಂತ ಹಂತವಾಗಿ ಸುಧಾರಣೆ ತರಲಾಗುತ್ತಿದ್ದು, ಪ್ರಯಾಣಿಕರ ಕಾರುಗಳಲ್ಲಿನ ಸುರಕ್ಷತೆಯಲ್ಲೂ ಭಾರೀ ಬದಲಾವಣೆ ಕಂಡುಬರುತ್ತಿದೆ. ಅಪಘಾತದ ಸಂದರ್ಭದಲ್ಲಿ ಸಾವು ನೋವಿನ ಪ್ರಮಾಣವನ್ನು ತಗ್ಗಿಸಲು ಹೊಸ ವಾಹನಗಳಲ್ಲಿನ ಸುರಕ್ಷಾ ಫೀಚರ್ಸ್ ಗಳು ಸಾಕಷ್ಟು ಸಹಕಾರಿಯಾಗುತ್ತಿದ್ದು, ಗ್ರಾಹಕರ ಆದ್ಯತೆಗೆ ಅನುಗಣವಾಗಿ ಇತ್ತೀಚೆಗೆ ಹಲವಾರು ಹೊಸ ಕಾರಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಸದ್ಯ ಖರೀದಿಗೆ ಲಭ್ಯವಿರುವ ಸುರಕ್ಷಿತ ಕಾರುಗಳು ಯಾವುವು? ಅವುಗಳಲ್ಲಿರುವ ಸುರಕ್ಷಾ ಫೀಚರ್ಸ್ ಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಟಾಟಾ ಹ್ಯಾರಿಯರ್ ಮತ್ತು ಸಫಾರಿ

ಹೆಚ್ಚು ಸುರಕ್ಷಿತವಾಗಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಟಾಟಾ ನಿರ್ಮಾಣದ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಕಾರುಗಳು ಸದ್ಯ ಅಗ್ರಸ್ಥಾನದಲ್ಲಿದ್ದು, ಇವು ಹಲವಾರು ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಗ್ಲೊಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 49 ಅಂಕಗಳಿಗೆ 45 ಅಂಕಗಳನ್ನು ಗಳಿಸಿರುವ ಹ್ಯಾರಿಯರ್ ಮತ್ತು ಸಫಾರಿ ಕಾರುಗಳು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದು, ಇತ್ತೀಚೆಗೆ ನಡೆದ ಭಾರತ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲೂ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿವೆ.

ಇದನ್ನೂ ಓದಿ: ಅತ್ಯುತ್ತಮ ರೀಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಕಾರುಗಳಲ್ಲಿ ಟಾಟಾ ಕಂಪನಿಯು ಗುಣಮಟ್ಟದ ಬಿಡಿಭಾಗಗಳೊಂದಿಗೆ ಗರಿಷ್ಠ ಸುರಕ್ಷೆ ಹೊಂದಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿ 7 ಏರ್ ಬ್ಯಾಗ್ ಗಳು, ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಫೀಚರ್ಸ್ ಗಳನ್ನು ನೀಡಲಾಗಿದೆ.

ಸ್ಕೋಡಾ ಸ್ಲಾವಿಯಾ ಮತ್ತು ಫೋರ್ಕ್ಸ್ ವ್ಯಾಗನ್ ವರ್ಟಸ್ 

ಸ್ಕೋಡಾ ಸ್ಲಾವಿಯಾ ಮತ್ತು ಫೋಕ್ಸ್ ವ್ಯಾಗನ್ ವರ್ಟಸ್ ಕಾರುಗಳು ಒಂದೇ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಇವು ಅತ್ಯುತ್ತಮ ಸುರಕ್ಷಾ ಫೀಚರ್ಸ್ ಗಳೊಂದಿಗೆ ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿವೆ. ಅಪಘಾತದ ವೇಳೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸುವ ಹೊಸ ಕಾರುಗಳಲ್ಲಿ ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಕ್ಕೂ ಹೆಚ್ಚು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ. ಇದರಲ್ಲಿ ಮಲ್ಟಿ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವಾರು ಸೌಲಭ್ಯಗಳಿವೆ.

ಇದನ್ನೂ ಓದಿ: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!

2023ರ ಹ್ಯುಂಡೈ ವೆರ್ನಾ 

ಐಷಾರಾಮಿ ಲುಕ್ ಹೊಂದಿರುವ ಹ್ಯುಂಡೈ ವೆರ್ನಾ ಹೊಸ ಆವೃತ್ತಿಯು ಗುಣಮಟ್ಟದ ಉತ್ಪಾದನೆಯೊಂದಿಗೆ ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್ ಹೊಂದಿದ್ದು, ಇದು ಗ್ಲೊಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಇದರಲ್ಲಿ ಆರು ಏರ್ ಬ್ಯಾಗ್ ಗಳು, ಇಬಿಡಿ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೌಲಭ್ಯಗಳನ್ನ ಜೋಡಿಸಲಾಗಿದೆ. ಇದಲ್ಲದೆ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ಹಲವು ಸುರಕ್ಷಾ ಸೌಲಭ್ಯಗಳನ್ನು ಒಳಗೊಂಡಿರುವ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಜೋಡಿಸಲಾಗಿದ್ದು, ಇದು ಫ್ರಂಟ್ ಅಂಡ್ ರಿಯರ್ ಕ್ಯಾಮೆರಾ ಮತ್ತು ರಡಾರ್ ಸೌಲಭ್ಯದೊಂದಿಗೆ ಸಂಭಾವ್ಯ ಅಪಘಾತಗಳನ್ನ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗುತ್ತಿದೆ.