Safest SUV’s: 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಫೇಮಸ್ ಎಸ್‌ಯುವಿ ಕಾರುಗಳಿವು!
ಭಾರತದಲ್ಲಿ ಸುರಕ್ಷಿತ ಕಾರುಗಳ ಖರೀದಿ ಟ್ರೆಂಡ್ ಹೆಚ್ಚುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಇತ್ತೀಚೆಗೆ ಹಲವು ಹೊಸ ಕಾರುಗಳು ಉತ್ತಮ ಸುರಕ್ಷಾ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ. ಹೆಚ್ಚು ಸುರಕ್ಷಿತ ಕಾರುಗಳಲ್ಲಿ ಎಸ್‌ಯುವಿ ಆವೃತ್ತಿಗಳು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಟಾಪ್ 5 ಕಾರು ಮಾದರಿಗಳ ಮಾಹಿತಿ ಇಲ್ಲಿದೆ.
ಹೊಸ ಕಾರುಗಳನ್ನು (New Cars) ಖರೀದಿಸುವ ಗ್ರಾಹಕರು ಫೀಚರ್ಸ್ ಮತ್ತು ಮೈಲೇಜ್ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕಾರು ಉತ್ಪಾದನಾ ಕಂಪನಿಗಳು ಸಹ ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳೊಂದಿಗೆ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುತ್ತಿವೆ. ಇತ್ತೀಚೆಗೆ ಬಿಡುಗಡೆಯಾದ ಪ್ರಮುಖ ಎಸ್ ಯುವಿ ಕಾರುಗಳಲ್ಲೂ ಸಹ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ನೀಡಲಾಗಿದ್ದು, ಇವು ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿವೆ.
ಟಾಟಾ ನೆಕ್ಸಾನ್
ಭಾರತದಲ್ಲಿ ಸದ್ಯ ಅತಿ ಹೆಚ್ಚು ಸುರಕ್ಷಿತವಾಗಿರುವ ಕಾರುಗಳಲ್ಲಿ ಟಾಟಾ ನೆಕ್ಸಾನ್ ಮೊದಲ ಸ್ಥಾನದಲ್ಲಿದ್ದು, ಇದು ಇತ್ತೀಚಿನ ಫೇಸ್ ಲಿಫ್ಟ್ ಆವೃತ್ತಿಯೊಂದಿಗೆ ಮತ್ತಷ್ಟು ಹೊಸ ಸುರಕ್ಷಾ ಫೀಚರ್ಸ್ ಪಡೆದುಕೊಂಡಿದೆ. ನೆಕ್ಸಾನ್ ಫೇಸ್ ಲಿಫ್ಟ್ ನಲ್ಲಿ ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ ಸೇರಿದಂತೆ ಹಲವು ಸುರಕ್ಷಾ ಫೀಚರ್ಸ್ ನೀಡಲಾಗಿದ್ದು, ಇದು ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ವಯಸ್ಕರ ಸುರಕ್ಷತೆಗಾಗಿ 34ಕ್ಕೆ 32.22 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ 49 ಅಂಕಗಳಲ್ಲಿ 44.52 ಅಂಕಗಳನ್ನು ಪಡೆದುಕೊಂಡಿದ್ದು, ಇದು ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಶೀಘ್ರದಲ್ಲಿಯೇ ಸಿಎನ್ ಜಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗುತ್ತಿದೆ.
ಇದನ್ನೂ ಓದಿ: ಮೊದಲ ಬಾರಿ ಹೊಸ ಕಾರು ಖರೀದಿಸುತ್ತಿದ್ದೀರಾ? ಈ ವಿಚಾರಗಳು ತಪ್ಪದೇ ತಿಳಿದಿರಲಿ..
ಟಾಟಾ ಹ್ಯಾರಿಯರ್ ಮತ್ತು ಸಫಾರಿ
ಹೆಚ್ಚು ಸುರಕ್ಷಿತವಾಗಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಟಾಟಾ ನಿರ್ಮಾಣದ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಕಾರುಗಳು ಕೂಡಾ ಪ್ರಮುಖವಾಗಿವೆ. ಇವು ಹಲವಾರು ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಗ್ಲೊಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 49 ಅಂಕಗಳಿಗೆ 45 ಅಂಕಗಳನ್ನು ಗಳಿಸಿವೆ. ಇತ್ತೀಚೆಗೆ ನಡೆದ ಭಾರತ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲೂ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ.
ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಕಾರುಗಳಲ್ಲಿ ಟಾಟಾ ಕಂಪನಿಯು ಗುಣಮಟ್ಟದ ಬಿಡಿಭಾಗಗಳೊಂದಿಗೆ ಗರಿಷ್ಠ ಸುರಕ್ಷೆ ಹೊಂದಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿ 7 ಏರ್ ಬ್ಯಾಗ್ ಗಳು, ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಫೀಚರ್ಸ್ ಗಳನ್ನು ನೀಡಲಾಗಿದೆ.
ಫೋಕ್ಸ್ ವ್ಯಾಗನ್ ಟೈಗನ್ ಮತ್ತು ಸ್ಕೋಡಾ ಕುಶಾಕ್
ಫೋಕ್ಸ್ ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು ತಮ್ಮ ಹೊಸ ಕುಶಾಕ್ ಮತ್ತು ಟೈಗುನ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಎರಡು ಹೊಸ ಕಾರು ಮಾದರಿಗಳು ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡಿವೆ. ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 71.64 ಅಂಕಗಳೊಂದಿಗೆ ಹೊಸ ಕುಶಾಕ್ ಮತ್ತು ಟೈಗುನ್ ಎರಡು ಕಾರುಗಳು ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಪ್ರೀಮಿಯಂ ಫೀಚರ್ಸ್ ಜೊತೆಗೆ ಪ್ರಯಾಣಿಕರ ಸುರಕ್ಷತೆಯಲ್ಲೂ ಹೆಚ್ಚು ಸುರಕ್ಷತೆಯನ್ನು ಖಾತ್ರಿಪಡಿಸಿವೆ.
ಹೊಸ ಕಾರುಗಳಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ 40ಕ್ಕೂ ಹೆಚ್ಚು ಸುರಕ್ಷಾ ಫೀಚರ್ಸ್‌ಗಳಿವೆ. ಎರಡು ಕಾರು ಮಾದರಿಗಳಲ್ಲೂ ಪೋಕ್ಸ್ ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿವೆ.
ಇದನ್ನೂ ಓದಿ: ಈ ತಿಂಗಳು ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು!
ಮಹೀಂದ್ರಾ ಎಕ್ಸ್ ಯುವಿ700 ಮತ್ತು ಸ್ಕಾರ್ಪಿಯೋ-ಎನ್
ಹೊಸ ಮಹೀಂದ್ರಾ ಎಕ್ಸ್ ಯುವಿ700 ಮತ್ತು ಸ್ಕಾರ್ಪಿಯೋ-ಎನ್ ಸಹ ಸುರಕ್ಷತೆಯಲ್ಲಿ ಗಮನಸೆಳೆಯುತ್ತಿದ್ದು, ಇವುಗಳಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಟ್ರಾಕ್ಷನ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ. ಈ ಮೂಲಕ ಇವು ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, 2.0-ಲೀಟರ್ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿವೆ.
Published On - 5:33 pm, Sun, 18 February 24