ADAS: ಎಡಿಎಎಸ್ ಸೌಲಭ್ಯ ಪಡೆದುಕೊಳ್ಳಲಿವೆ ಈ ಟಾಪ್ 5 ಮಧ್ಯಮ ಕ್ರಮಾಂಕದ ಕಾರುಗಳು!

ಭಾರತದಲ್ಲಿ ಮಾರಾಟಗೊಳ್ಳುವ ಹೊಸ ಕಾರುಗಳಲ್ಲಿ ಇದೀಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದರಲ್ಲೂ ಮಧ್ಯಮ ಕ್ರಮಾಂಕದ ಕಾರುಗಳ ಸುರಕ್ಷತೆಯು ಸಾಕಷ್ಟು ಸುಧಾರಿಸಿದ್ದು, ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯಕ್ಕೆ ಭಾರೀ ಬೇಡಿಕೆ ಹರಿದುಬರುತ್ತಿದೆ.

ADAS: ಎಡಿಎಎಸ್ ಸೌಲಭ್ಯ ಪಡೆದುಕೊಳ್ಳಲಿವೆ ಈ ಟಾಪ್ 5 ಮಧ್ಯಮ ಕ್ರಮಾಂಕದ ಕಾರುಗಳು!
ಎಡಿಎಎಸ್ ಸೌಲಭ್ಯ ಪಡೆದುಕೊಳ್ಳಲಿವೆ ಈ ಹೊಸ ಕಾರುಗಳು
Follow us
Praveen Sannamani
|

Updated on:Jan 03, 2023 | 4:40 PM

ಹೊಸ ಕಾರುಗಳಲ್ಲಿ ಇದೀಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರುಗಳಲ್ಲಿ(New Cars) ಹಲವಾರು ಸೇಫ್ಟಿ ಫೀಚರ್ಸ್(Safety Features) ಪರಿಚಯಿಸಲಾಗುತ್ತಿದೆ. ಇದರಲ್ಲಿ ಎಡಿಎಎಸ್(Advanced Driver Assistance Systems) ಹೆಸರಿನಲ್ಲಿ ಕರೆಯಲಾಗುವ ಹೊಸ ಸುರಕ್ಷಾ ಸೌಲಭ್ಯವು ಇತ್ತೀಚಿನ ಆಧುನಿಕ ಕಾರು ಮಾದರಿಗಳಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಇದು ಸಂಭಾವ್ಯ ಅಪಘಾತಗಳನ್ನು ತಗ್ಗಿಸಲು ಸಾಕಷ್ಟು ನೆರವಾಗುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಕಾರುಗಳು ಈ ಹೊಸ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳುತ್ತಿವೆ. 2023ರ ಹಲವು ಕಾರು ಮಾದರಿಗಳಲ್ಲಿ ಎಡಿಎಎಸ್ ಜೋಡಿಸಲಾಗುತ್ತಿದ್ದು, ಇದು ಅಪಘಾತಗಳ ಸಂಖ್ಯೆ ತಗ್ಗಿಸಲು ಮಹತ್ವದ ಪಾತ್ರವಹಿಸಲಿದೆ.

ಅಪಘಾತಗಳಲ್ಲಿ ಸಾವು ನೋವಿನ ಸಂಖ್ಯೆ ತಗ್ಗಿಸಲು ಹಲವಾರು ಕಠಿಣ ಸಂಚಾರಿ ನಿಯಮಗಳನ್ನು ಜಾರಿ ತಂದಿದ್ದರೂ ಅದು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹಲವಾರು ಕಾರಣಗಳಿಂದ ದಿನಂಪ್ರತಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದಕ್ಕೆ ಬ್ರೇಕ್ ಹಾಕಲು ಹೊಸ ಅಡ್ವಾನ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ನೆರವಿಗೆ ಬರಲಿದೆ. ಹೊಸ ಸುರಕ್ಷಾ ತಂತ್ರಜ್ಞಾನವು ಅಪಘಾತಗಳನ್ನು ತಗ್ಗಿಸುವುದರ ಜೊತೆಗೆ ಅಮೂಲ್ಯವಾದ ಜೀವಗಳನ್ನು ರಕ್ಷಿಸಲು ನೆರವಾಗಲಿದ್ದು, ಇದು ಸುಗಮ ಸಂಚಾರಕ್ಕಾಗಿ ಚಾಲಕನಿಗೆ ಸಾಕಷ್ಟು ಸಹಾಯ ಮಾಡಲಿದೆ.

ಗರಿಷ್ಠ ಸುರಕ್ಷತೆ ಹಿನ್ನಲೆಯಲ್ಲಿ ವಿಶ್ವಾದ್ಯಂತ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಈ ಹೊಸ ಸುರಕ್ಷಾ ಸೌಲಭ್ಯವನ್ನು ತಮ್ಮ ಪ್ರಮುಖ ಕಾರು ಉತ್ಪನ್ನಗಳಲ್ಲಿ ಹಂತ-ಹಂತವಾಗಿ ಜೋಡಣೆ ಮಾಡುತ್ತಿವೆ. ಭಾರತದಲ್ಲೂ ಕೂಡಾ ಹೊಸ ಎಡಿಎಎಸ್ ಸೌಲಭ್ಯ ಹೊಂದಿರುವ ಕಾರುಗಳು ನಿಧಾನವಾಗಿ ರಸ್ತೆಗಿಳಿಯುತ್ತಿದ್ದು, ಮುಂದಿನ ಕೆಲ ವರ್ಷಗಳಲ್ಲಿ ಹೊಸ ಫೀಚರ್ಸ್ ಕಾರುಗಳ ಸಂಖ್ಯೆ ದ್ವಿಗುಣಗೊಳ್ಳಲಿದೆ. ಹೊಸ ಫೀಚರ್ಸ್ ಹೊಂದಿರುವ ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ರೂ. 20 ಲಕ್ಷ ಬೆಲೆ ಅಂತರದಲ್ಲಿ ಲಭ್ಯವಿದ್ದು, ಮುಂಬರುವ ಕೆಲವು ದಿನಗಳಲ್ಲಿ ರೂ. 15 ಲಕ್ಷ ಬೆಲೆ ಅಂತರದ ಕಾರುಗಳಲ್ಲೂ ಹೊಸ ಫೀಚರ್ಸ್ ನೋಡಬಹುದಾಗಿದೆ.

ಹೊಸ ಎಡಿಎಎಸ್ ಕಾರುಗಳು

2023ರ ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಫೇಸ್ ಲಿಫ್ಟ್, ಎಂಜಿ ಹೆಕ್ಟರ್ ಫೇಸ್ ಲಿಫ್ಟ್, ಕಿಯಾ ಸೆಲ್ಟೊಸ್ ಫೇಸ್ ಲಿಫ್ಟ್ ಮತ್ತು 2023ರ ಹ್ಯುಂಡೈ ವೆರ್ನಾ ಕಾರುಗಳಲ್ಲಿ ಹೊಸ ಎಡಿಎಎಸ್ ಫೀಚರ್ಸ್ ನೀಡಲಾಗುತ್ತಿದೆ. ಸದ್ಯ ಕೆಲವೇ ಕೆಲವು ಕಾರುಗಳ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ಮಾತ್ರ ಈ ಫೀಚರ್ಸ್ ಲಭ್ಯವಿದ್ದು, ಮುಂಬರುವ ದಿನಗಳಲ್ಲಿ ಇನ್ನು ಹಲವು ಹೊಸ ಕಾರುಗಳಲ್ಲಿ ಎಡಿಎಎಸ್ ಫೀಚರ್ಸ್ ನೋಡಬಹುದಾಗಿದೆ. ಭಾರತದಲ್ಲಿ ಪ್ರಮುಖ ಕಾರುಗಳು ಸದ್ಯಕ್ಕೆ ಲೆವಲ್ 2 ಎಡಿಎಎಸ್ ಫೀಚರ್ಸ್ ಪಡೆದುಕೊಳ್ಳುತ್ತಿವೆ. ಲೆವಲ್ 2 ಎಡಿಎಎಸ್ ನಲ್ಲಿ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಪೆಡೆಸ್ಟ್ರಿಯನ್ ಡಿಟೆಕ್ಷನ್, ಸರೌಂಡ್ ವ್ಯೂ, ಪಾರ್ಕಿಂಗ್ ಅಸಿಸ್ಟ್, ಲೇನ್ ಕೀಪ್ ಅಸಿಸ್ಟ್, ಫಾರ್ವಡ್ ಕೂಲಿಷನ್ ಅಸಿಸ್ಟ್, ರಿಯರ್ ಕ್ರಾಸ್ ಟ್ರಾಫಿಕ್ ಅಸಿಸ್ಟ್ ಸೌಲಭ್ಯಗಳಿರವಿವೆ.

ಲೆವಲ್ 2 ಎಡಿಎಎಸ್ ಫೀಚರ್ಸ್ ನಲ್ಲಿ ಮತ್ತೊಂದು ಮುಖ್ಯವಾದ ವೈಶಿಷ್ಟ್ಯ ವೆಂದರೆ ಕಾರು ಚಾಲನೆ ಮಾಡುವ ಚಾಲಕನಿಗೆ ನಿದ್ರೆ ಮಂಪರು ಬಂದಲ್ಲಿ ತಕ್ಷಣವೇ ಅದು ಅಲರ್ಟ್ ಮಾಡುತ್ತದೆ. ಚಾಲಕ ಚಾಲನಾ ಶೈಲಿಯನ್ನು ಆಧರಿಸಿ ನಿದ್ರೆ ಮಂಪರಿನಿಂದ ಎಚ್ಚರಿಸಿ ವಿಶ್ರಾಂತಿ ಸೂಚಿಸುವ ಮೂಲಕ ಅಪಘಾತವನ್ನು ತಡೆಯಲು ಸಹಕಾರಿಯಾಗಿದೆ. ಎಡಿಎಎಸ್ ಸೌಲಭ್ಯವು ಸಂಪೂರ್ಣವಾಗಿ ರಡಾರ್ ಆಧರಿಸಿ ಕಾರ್ಯನಿರ್ವಹಿಸಲಿದ್ದು, ಇದು ಭವಿಷ್ಯದ ಆಟೊನೊಮಸ್ ಕಾರುಗಳಲ್ಲೂ ಇದು ನಿರ್ಣಾಯಕ ಪಾತ್ರವಹಿಸಲಿದೆ. ಆಟೋನೊಮಸ್ ಕಾರುಗಳಲ್ಲಿ ಲೆವಲ್ 5 ಎಡಿಎಎಸ್ ಸೌಲಭ್ಯವನ್ನು ಬಳಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಸಾಮಾನ್ಯ ಕಾರುಗಳಲ್ಲಿ ಲೆವಲ್ 2 ಸೌಲಭ್ಯವನ್ನು ಬಳಸಲಾಗುತ್ತಿದೆ.

Published On - 4:40 pm, Tue, 3 January 23

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ