ಸುರಕ್ಷತೆ ಮತ್ತು ಅನುಕೂಲತೆ ಹೊಂದಿರುವ ಇಂತಹ ಕಾರುಗಳನ್ನೇ ಖರೀದಿಸಿ..

ಹೊಸ ಕಾರುಗಳ ಖರೀದಿದಾರರು ಇತ್ತೀಚೆಗೆ ತಮ್ಮ ಬೇಡಿಕೆಗೆ ಅನುಸಾರವಾಗಿ ವಿವಿಧ ಮಾದರಿಯ ಕಾರುಗಳನ್ನು ಖರೀದಿಸುತ್ತಿದ್ದು, ಹೊಸ ಕಾರು ಖರೀದಿ ವೇಳೆ ಸುರಕ್ಷತೆ ಮತ್ತು ಅರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಿರುವ ಮಾದರಿಗಳ ಆಯ್ಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಸುರಕ್ಷತೆ ಮತ್ತು ಅನುಕೂಲತೆ ಹೊಂದಿರುವ ಇಂತಹ ಕಾರುಗಳನ್ನೇ ಖರೀದಿಸಿ..
ಹೊಸ ಕಾರುಗಳ ಸುರಕ್ಷಾ ಫೀಚರ್ಸ್
Follow us
|

Updated on: Jun 19, 2024 | 8:06 PM

ಹೊಸ ಕಾರುಗಳ (New Cars) ಖರೀದಿ ಆದ್ಯತೆಯು ಕಳೆದ ಒಂದು ದಶಕದ ಅವಧಿಯಲ್ಲಿ ಸಾಕಷ್ಟು ಬದಲಾವಣೆಗೊಂಡಿದ್ದು, ಗ್ರಾಹಕರು ಈ ಹಿಂದಿನಂತೆ ಬೆಲೆ ಮತ್ತು ಮೈಲೇಜ್ ಕುರಿತಾಗಿ ಹೆಚ್ಚು ಯೋಚಿಸದೆ ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ಶ್ರೇಣಿಯ ಕಾರುಗಳನ್ನು ಖರೀದಿಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಕಾರುಗಳ ಮಾರಾಟಕ್ಕೆ ಹೆಚ್ಚಿನ ಬೇಡಿಕೆಯ ಹೊರತಲಾಗಿಯೂ ಅತ್ಯುತ್ತಮ ಸುರಕ್ಷತೆ ಮತ್ತು ಅಮಾರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಿರುವ ಹಲವು ಮಧ್ಯಮ ಗಾತ್ರದ ಕಾರುಗಳು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಭವಿಷ್ಯದಲ್ಲಿ ಕಾರು ಖರೀದಿಸುವ ಗ್ರಾಹಕರು ಸುರಕ್ಷತೆ ಮತ್ತು ಅನುಕೂಲಕರವಾಗಿರುವ ಮಾದರಿಗಳಿಗೆ ಇನ್ನು ಹೆಚ್ಚಿನ ಬೇಡಿಕೆ ಸಲ್ಲಿಸುವ ಸಾಧ್ಯತೆಗಳಿದ್ದು, ಹೊಸ ಕಾರುಗಳಲ್ಲಿರುವ ಕೆಲವು ವಿಶೇಶ ತಾಂತ್ರಿಕ ಸೌಲಭ್ಯಗಳ ಮಾಹಿತಿ ಇಲ್ಲಿ ನೀಡಲಾಗಿದೆ.

ಅತ್ಯುತ್ತಮ ಕ್ರ್ಯಾಶ್ ಟೆಸ್ಟ್ ರೇಟಿಂಗ್ಸ್ ಹೊಂದಿರುವ ಕಾರುಗಳು

ಹೊಸ ಕಾರು ಖರೀದಿದಾರರು ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಸುರಕ್ಷತೆಯ ಕಾರುಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಭವಿಷ್ಯದಲ್ಲಿ ಕಾರು ಖರೀದಿಸುವವರು ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ರೇಟಿಂಗ್ಸ್ ಹೊಂದಿರುವ ಮಾದರಿಗಳನ್ನೇ ಖರೀದಿಸುವುದು ಉತ್ತಮವಾಗಿದೆ. ಜೊತೆಗೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಕಾರುಗಳು ಕೂಡಾ ಉತ್ತಮ ಸುರಕ್ಷತೆ ಖಾತ್ರಿಪಡಿಸಲಿದ್ದು, ಇವು ಸಂಭಾವ್ಯ ಅಪಘಾತಗಳನ್ನು ತಡೆಯುವ ಮೂಲಕ ಜೀವಹಾನಿ ಪ್ರಕರಣಗಳನ್ನು ತಗ್ಗಿಸಲು ನೆರವಾಗುತ್ತದೆ.

ಎಬಿಎಸ್ ಮತ್ತು ಇಬಿಡಿ

ಹೊಸ ಕಾರುಗಳಲ್ಲಿ ಇನ್ಮುಂದೆ ಎಬಿಎಸ್ ಮತ್ತು ಇಬಿಡಿ ಫೀಚರ್ಸ್ ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಿ. ಇವು ಕೂಡಾ ಸಂಭಾವ್ಯ ಅಪಘಾತವನ್ನು ತಡೆಯಲು ಸಹಕಾರಿಯಾಗಿದ್ದು, ಎಬಿಎಸ್ ಸೌಲಭ್ಯವು ತುರ್ತು ಬ್ರೇಕ್ ಹಾಕಿದಾಗ ವ್ಹೀಲ್ ಗಳು ಲಾಕ್ ಆಗುವುದು ತಪ್ಪಿಸುತ್ತದೆ. ಹಾಗೆಯೇ ಇಬಿಡಿ ಸೌಲಭ್ಯವು ತುರ್ತು ಸಂದರ್ಭದಲ್ಲಿ ಸಡನ್ ಬ್ರೇಕ್ ಬಳಸಿದಾಗ ಉಂಟಾಗುವ ಬಲವನ್ನು ಎಲ್ಲಾ ಚಕ್ರಗಳಿಗೂ ಸಮತೋಲಿತವಾಗಿ ಪೂರೈಸುವ ಮೂಲಕ ಕಾರಿನ ವೇಗವನ್ನು ಸುರಕ್ಷಿತವಾಗಿ ನಿಯಂತ್ರಣಕ್ಕೆ ಸಹಕಾರಿಯಾಗಿದೆ.

ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೆನ್ಸಾರ್

ಇತ್ತೀಚಿನ ಹೊಸ ಕಾರುಗಳಲ್ಲಿ ರಿಯರ್ ಪಾರ್ಕಿಂಗ್ ಕ್ಯಾಮೆರಾ ಸೌಲಭ್ಯವು ಕಾರುಗಳ ಪಾರ್ಕಿಂಗ್ ಸಂದರ್ಭದಲ್ಲಿ ಸಾಕಷ್ಟು ಸಹಕಾರಿಯಾಗುತ್ತಿದೆ. ಹಾಗೆಯೇ ಸೆನ್ಸಾರ್ ಸೌಲಭ್ಯವು ಕೂಡಾ ಇಕ್ಕಟ್ಟಾದ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಸಂದರ್ಭದಲ್ಲಿ ಚಾಲಕನಿಗೆ ಸಾಕಷ್ಟು ನೆರವಾಗುತ್ತದೆ. ಹೀಗಾಗಿ ಈ ಎರಡೂ ಸೇಫ್ಟಿ ಫೀಚರ್ಸ್ ಗಳು ಕೂಡಾ ನಿಮ್ಮ ಹೊಸ ಕಾರಿನಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ.

ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್

ದೇಶಾದ್ಯಂತ ಇತ್ತೀಚೆಗೆ ಸಾಕಷ್ಟು ತಾಪಮಾನ ದಾಖಲಾಗುತ್ತಿರುವುದರಿಂದ ಇಂತಹ ಸಂದರ್ಭದಲ್ಲಿ ದೀರ್ಘಕಾಲದ ಕಾರು ಪ್ರಯಾಣವನ್ನು ಅರಾಮದಾಯಕಗೊಳಿಸುವಲ್ಲಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯವು ಸಾಕಷ್ಟು ಅನುಕೂಲಕರವಾಗುತ್ತದೆ. ಈ ಹೊಸ ಸೌಲಭ್ಯವು ಹೊರಗಿನ ವಾತಾವರಣಕ್ಕೆ ತಕ್ಕಂತೆ ಸ್ವಯಂಚಾಲಿತವಾಗಿ ಕಾರಿನ ಒಳಾಂಗಣ ತಾಪಮಾನವನ್ನು ನಿಯಂತ್ರಣದಲ್ಲಿಡುವ ಮೂಲಕ ಕಾರು ಚಾಲನೆಯನ್ನು ಸುಲಭಗೊಳಿಸುತ್ತದೆ.

ಡಿಜಿಟಲ್ ಇನ್ಪೋಟೈನ್ ಮೆಂಟ್ ಸಿಸ್ಟಂ

ಕಾರು ಚಾಲನೆ ಸಂದರ್ಭದಲ್ಲಿ ಡಿಜಿಟಲ್ ಇನ್ಪೋಟೈನ್ ಮೆಂಟ್ ಸಿಸ್ಟಂ ಸೌಲಭ್ಯವು ಹಲವಾರು ಮಾಹಿತಿಗಳನ್ನು ಒದಗಿಸುವುದರ ಜೊತೆ ಮನರಂಜನೆಗೆ ಸಹಕಾರಿಯಾಗಿದೆ. ಹೀಗಾಗಿ ಹೊಸ ಕಾರುಗಳಲ್ಲಿ ಇನ್ಪೋಟೈನ್ ಮೆಂಟ್ ಸಿಸ್ಟಂ ಸೌಲಭ್ಯವು ಸಾಕಷ್ಟು ಜನಪ್ರಿಯವಾಗುತ್ತಿದ್ದು, ಇವು ವೈರ್ ಲೆಸ್ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸರ್ಪೊಟ್ ನೊಂದಿಗೆ ಇನ್ ನ್ಯಾವಿಗೇಷನ್ ಒದಗಿಸುತ್ತವೆ.

ಟಿಪಿಎಂಎಸ್ ಸಿಸ್ಟಂ

ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೌಲಭ್ಯವು ಕೂಡಾ ಆಧುನಿಕ ತಾಂತ್ರಿಕ ಸೌಲಭ್ಯ ಪ್ರೇರಿತ ಕಾರುಗಳಲ್ಲಿ ಪ್ರಮುಖವಾಗಿದೆ. ಟಿಪಿಎಂಎಸ್ ಸೌಲಭ್ಯವು ಚಕ್ರಗಳಲ್ಲಿ ಗಾಳಿಯ ಒತ್ತಡದ ಮಾಹಿತಿಯನ್ನು ಡಿಜಿಟಲ್ ಮೂಲಕ ತಿಳಿಯಬಹುದಾಗಿದ್ದು, ಅಪಘಾತಗಳನ್ನು ತಡೆಯುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತಿದೆ. ಹೀಗಾಗಿ ಹೊಸ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರು ಈ ಮೇಲಿನ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಕಾರುಗಳ ಖರೀದಿಸುವುದು ಸುರಕ್ಷತೆ ದೃಷ್ಠಿಯಿಂದ ಉತ್ತಮವಾಗಿದೆ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್