AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ

ಭಾರತದಲ್ಲಿ ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟೊಯೊಟಾ ಇಂಡಿಯಾ ಕಂಪನಿಯು ಮೂರನೇ ಕಾರು ಉತ್ಪದನಾ ಘಟಕ ತೆರೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ
ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ
Praveen Sannamani
Praveen Sannamani|

Updated on: Nov 21, 2023 | 9:11 PM

Share

ಜಾಗತಿಕ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆಯಲ್ಲಿ (Car Production) ಅಗ್ರಸ್ಥಾನ ಕಾಯ್ದುಕೊಂಡಿರುವ ಜಪಾನ್ ಕಾರು ಕಂಪನಿ ಟೊಯೊಟಾ (Toyota) ತನ್ನ ಉತ್ಪಾದನಾ ಸಾಮಾರ್ಥ್ಯವನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಗಳ ಭಾಗವಾಗಿ ಭಾರತದಲ್ಲೂ ಹೊಸ ಹೂಡಿಕೆಗೆ ಸಿದ್ದವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಎರಡು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಟೊಯೊಟಾ ಕಂಪನಿಯು ಇದೀಗ ಮೂರನೇ ಘಟಕದ ಕಾರ್ಯಾಚರಣೆ ಆರಂಭಕ್ಕೆ ಸಿದ್ದವಾಗುತ್ತಿದೆ.

ಬೆಂಗಳೂರು ಹೊರವಲಯದ ಬಿಡದಿಯಲ್ಲಿ ಈಗಾಗಲೇ ಎರಡು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಟೊಯೊಟಾ ಕಂಪನಿಯು ಮೂರನೇ ಘಟಕವನ್ನು ಸಹ ಬಿಡದಿ ಸನೀಹದಲ್ಲಿ ತೆರೆಯಲು ನಿರ್ಧರಿಸಿದೆ. ಹೊಸ ಘಟಕ ಸ್ಥಾಪನೆಗಾಗಿ ರೂ. 3,300 ಕೋಟಿ ಬಂಡವಾಳ ಹೂಡಿಕೆಗೆ ಸಿದ್ದವಾಗಿದ್ದು, ಇದರಿಂದ ಬರೋಬ್ಬರಿ 2 ಸಾವಿರ ಜನರಿಗೆ ಉದ್ಯೋಗ ಸೃಷ್ಠಿಯಾಗಲಿದೆ.

ಹೊಸ ಯೋಜನೆಗಾಗಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ಇಂದು ಕರ್ನಾಟಕ ಸರ್ಕಾರದ ನಡುವೆ ಅಧಿಕೃತವಾಗಿ ಒಡಂಬಡಿಕೆ ಮಾಡಿಕೊಂಡಿದ್ದು, 2026ರ ವೇಳೆಗೆ ಹೊಸ ಕಾರು ಉತ್ಪಾದನಾ ಘಟಕವನ್ನು ಕಾರ್ಯಾರಂಭ ಮಾಡುವ ಭರವಸೆ ನೀಡಿದೆ.

ಇದನ್ನೂ ಓದಿ: ಪ್ರತಿ ಚಾರ್ಜ್ ಗೆ ಬರೋಬ್ಬರಿ 738 ಕಿಮೀ ಮೈಲೇಜ್ ನೀಡುತ್ತೆ ಈ ಇವಿ ಎಂಪಿವಿ ಕಾರು..

ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟ ಆರಂಭಿಸಿ 25 ವರ್ಷ ಪೂರೈಸಿರುವ ಟೊಯೊಟಾ ಕಂಪನಿಯು ಹಲವಾರು ಮಾರಾಟ ದಾಖಲೆಗಳನ್ನು ಸಾಧಿಸಿದ್ದು, ಇದೀಗ ಹೊಸ ಕಾರು ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 4 ಲಕ್ಷ ಕಾರುಗಳನ್ನು ಉತ್ಪಾದನೆ ಮಾಡುವ ಗುರಿಹೊಂದಿದೆ.

ಜೊತೆಗೆ ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗೂಡಿ ರೀಬ್ಯಾಡ್ಜ್ ಕಾರುಗಳ ಉತ್ಪಾದನೆ ಮಾಡುತ್ತಿದ್ದು, ಹೊಸ ಸಹಭಾಗಿತ್ವ ಯೋಜನೆಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಇದಕ್ಕಾಗಿ ಕಂಪನಿಯು ಭಾರತದಿಂದಲೇ ಪ್ರಮುಖ ಮಾರುತಿ ಸುಜುಕಿ ಕಾರುಗಳ ರೀಬ್ಯಾಡ್ಜ್ ಆವೃತ್ತಿಗಳನ್ನು ಆಫ್ರಿಕಾ ಸೇರಿದಂತೆ ಪ್ರಮುಖ ಉದಯೋನ್ಮುಖ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಯಲ್ಲಿದೆ.

ಇದನ್ನೂ ಓದಿ: ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಇದಲ್ಲದೆ ಭಾರತದಲ್ಲಿ ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿ ಕರೊಲ್ಲಾ ಕ್ರಾಸ್ ಎಸ್ ಯುವಿ ಸೇರಿದಂತೆ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಇವು ಹಲವಾರು ವಿಶೇಷತೆಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ. ಹೀಗಾಗಿ ಗ್ರಾಹಕರ ಬೇಡಿಕೆ ಪೂರೈಕೆಗಾಗಿ ಹೊಸ ಕಾರು ಉತ್ಪಾದನಾ ಘಟಕವನ್ನು ತೆರೆಯಲಾಗಿದ್ದು, ಹೊಸ ಕಾರು ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 60 ಸಾವಿರದಿಂದ 1 ಲಕ್ಷ ಯುನಿಟ್ ಉತ್ಪಾದನೆ ಮಾಡಬಹುದಾಗಿದೆ ಎನ್ನಲಾಗಿದೆ.

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas