ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಇನೋವಾ ಹೈಕ್ರಾಸ್ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಟೊಯೊಟಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಗಳಾದ ಇನೋವಾ ಕ್ರಿಸ್ಟಾ ಮತ್ತು ಇನೋವಾ ಹೈಕ್ರಾಸ್ ಎಂಪಿವಿ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ ಮಾಡಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಇನೋವಾ ಹೈಕ್ರಾಸ್ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ
ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಇನೋವಾ ಹೈಕ್ರಾಸ್ ಕಾರುಗಳ ಬೆಲೆ ಹೆಚ್ಚಳ
Follow us
Praveen Sannamani
|

Updated on: Jan 10, 2024 | 4:36 PM

ಮಧ್ಯಮ ಗಾತ್ರದ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ (Toyota) ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಗಳಾದ ಇನೋವಾ ಕ್ರಿಸ್ಟಾ (Innova Crysta) ಮತ್ತು ಇನೋವಾ ಹೈಕ್ರಾಸ್ (Innova Hycross) ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಮೂಲ ಬೆಲೆಯಲ್ಲಿ ಶೇ. 0.5 ರಿಂದ ಶೇ. 1 ರಷ್ಟು ಬೆಲೆ ಹೆಚ್ಚಳ ಮಾಡಲಾಗಿದೆ. ಹೊಸ ದರಗಳು ಇಂದಿನಿಂದಲೇ ಅನ್ವಯಿಸುವಂತೆ ಘೋಷಣೆ ಮಾಡಿರುವ ಟೊಯೊಟಾ ಕಂಪನಿಯು ಇನೋವಾ ಕೆಲವು ವೆರಿಯೆಂಟ್ ಗಳ ಬೆಲೆಯಲ್ಲಿ ಹೆಚ್ಚಿನ ಏರಿಕೆ ಮಾಡಿದರೆ ಇನ್ನು ಕೆಲವು ವೆರಿಯೆಂಟ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಟೊಯೊಟಾ ಕಂಪನಿಯ ಹೊಸ ದರಪಟ್ಟಿಯಲ್ಲಿ ಇನೋವಾ ಕ್ರಿಸ್ಟಾ ಬೆಲೆಯಲ್ಲಿ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ರೂ. 15 ಸಾವಿರದಿಂದ ರೂ. 25 ಸಾವಿರ ತನಕ ಹೆಚ್ಚಳವಾಗಿದ್ದರೆ ಮತ್ತು ಇನೋವಾ ಹೈಕ್ರಾಸ್ ಕಾರಿನ ಬೆಲೆಯಲ್ಲಿ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ರೂ. 500 ರಿಂದ ರೂ. 42 ಸಾವಿರ ತನಕ ಬೆಲೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಮೊದಲ ಬಾರಿಗೆ ಹೊಸ ಕಾರು ಖರೀದಿಸಿದ್ದೀರಾ? ಹಾಗಾದ್ರೆ ಈ ಟಿಪ್ಸ್ ತಪ್ಪದೇ ಪಾಲಿಸಿ..

ಬೆಲೆ ಹೆಚ್ಚಳ ನಂತರ ಇನೋವಾ ಕ್ರಿಸ್ಟಾ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ.19.99 ಲಕ್ಷದಿಂದ ರೂ. 26.30 ಲಕ್ಷ ಬೆಲೆ ಹೊಂದಿದ್ದರೆ ಮತ್ತು ಇನೋವಾ ಹೈಕ್ರಾಸ್ ಕಾರು ಎಕ್ಸ್ ಶೋರೂಂ ಪ್ರಕಾರ ರೂ.18.92 ಲಕ್ಷದಿಂದ ರೂ. 30.68 ಲಕ್ಷ ಬೆಲೆ ಹೊಂದಿವೆ. ಹೊಸ ದರಪಟ್ಟಿಯಲ್ಲಿ ಇನೋವಾ ಹೈಕ್ರಾಸ್ ಕಾರಿನ ವಿಎಕ್ಸ್ ಆವೃತ್ತಿ ಹೆಚ್ಚಿನ ದರ ಏರಿಕೆ ಪಡೆದುಕೊಂಡಿದ್ದು, ಜಿಎಕ್ಸ್ ವೆರಿಯೆಂಟ್ ಗಳಲ್ಲಿ ಯಾವುದೇ ದರ ಹೆಚ್ಚಳ ಮಾಡಲಾಗಿಲ್ಲ.

ಇನ್ನು ಎಂಪಿವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಇನೋವಾ ಕ್ರಾಸ್ಟಾ ಮತ್ತು ಇನೋವಾ ಹೈಕ್ರಾಸ್ ಕಾರುಗಳು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇನೋವಾ ಕ್ರಾಸ್ಟಾದಲ್ಲಿ ಕೇವಲ ಡೀಸೆಲ್ ಮಾದರಿಯನ್ನು ಮತ್ತು ಇನೋವಾ ಹೈಕ್ರಾಸ್ ಮಾದರಿಯಲ್ಲಿ ಪೆಟ್ರೋಲ್ ಹಾಗೂ ಪೆಟ್ರೋಲ್ ಹೈಬ್ರಿಡ್ ಮಾದರಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಇನೋವಾ ಕ್ರಾಸ್ಟಾ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಪ್ರೇರಿತ 2.4 ಲೀಟರ್ ಡೀಸೆಲ್ ಎಂಜಿನ್ ನೀಡಲಾಗಿದ್ದರೆ ಇನೋವಾ ಹೈಕ್ರಾಸ್ ಕಾರು 2.0 ಲೀಟರ್ ಪೆಟ್ರೋಲ್ ಮತ್ತು 2.0 ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ಇದರಲ್ಲಿ ಇನೋವಾ ಹೈಕ್ರಾಸ್ ಕಾರು ಹೈಬ್ರಿಡ್ ತಂತ್ರಜ್ಞಾನ ಸಂಯೋಜನೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ ಗರಿಷ್ಠ 23.24 ಕಿ.ಮೀ ಮೈಲೇಜ್ ನೀಡಲಿದ್ದು, ಇವು 7 ಸೀಟರ್ ಮತ್ತು 8 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿವೆ.

ಇದನ್ನೂ ಓದಿ: ಭಾರತದಲ್ಲಿ ಅತ್ಯುತ್ತಮ ರೀಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇನೋವಾ ಹೈಕ್ರಾಸ್ ನಲ್ಲಿ ಗರಿಷ್ಠ ಸುರಕ್ಷತೆಗಾಗಿ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ನೀಡಲಾಗಿದ್ದು, ಇದರಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಡಿಪಾರ್ಚರ್ ವಾರ್ನಿಂಗ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸೌಲಭ್ಯಗಳನ್ನು ಒಳಗೊಂಡಿದೆ. ಜೊತೆಗೆ ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಗಳಿಗೂ ಅನ್ವಯಿಸುವಂತೆ 6 ಏರ್ ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಟ್ರಾಕ್ಷನ್ ಕಂಟ್ರೋಲ್, ಇಎಸ್ ಪಿ ಸೌಲಭ್ಯಗಳಿದ್ದು, ಆಂಬಿಯೆಂಟ್ ಲೈಟಿಂಗ್, ಫ್ರಂಟ್ ವೆಂಟಿಲೆಟೆಡ್ ಲೆದರ್ ಆಸನಗಳು, ಒಟ್ಟೊಮನ್ ವೈಶಿಷ್ಟ್ಯತೆ ಹೊಂದಿರುವ ಮಧ್ಯದಲ್ಲಿರುವ ಆಸನಗಳು ಗಮನಸೆಳೆಯುತ್ತವೆ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM