2023ರ ಟೊಯೊಟಾ ಇನೋವಾ ಕ್ರಿಸ್ಟಾ ಡೀಸೆಲ್ ವರ್ಷನ್ ವಿಶೇಷತೆಗಳೇನು?
ಟೊಯೊಟಾ ಇಂಡಿಯಾ ಕಂಪನಿಯು ಹೊಸ ಇನೋವಾ ಕ್ರಿಸ್ಟಾ ಎಂಪಿವಿ ಬಿಡುಗಡೆ ಮಾಡಿದೆ. ಹೊಸ ಕಾರು ಮಾದರಿಯು ನವೀಕೃತ ಎಂಜಿನ್ ಆಯ್ಕೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಡೀಸೆಲ್ ಕಾರು ಪ್ರಿಯರಿಗೆ ಬೇಡಿಕೆಯೆಂತೆ ಹಲವು ಹೊಸ ಫೀಚರ್ಸ್ ಪಡೆದುಕೊಂಡಿದೆ.
ಹೊಸ ಇನೋವಾ ಕ್ರಿಸ್ಟಾ ಕಾರು ಮಾದರಿಯು ಜಿ, ಜಿಎಕ್ಸ್ ಮತ್ತು ವಿಎಕ್ಸ್ ವೆರಿಯೆಂಟ್ ಹೊಂದಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 19.13 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಹಾಗೆಯೇ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯು ರೂ. 20.09 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಟ್ಯಾಕ್ಸಿ ಆಪರೇಟರ್‌ಗಳು ವಾಣಿಜ್ಯ ಬಳಕೆಯ ಉದ್ದೇಶಕ್ಕಾಗಿ ಹೊಸ ಕಾರನ್ನ ಆಕರ್ಷಕ ಬೆಲೆಯಲ್ಲಿ ಖರೀದಿಸಬಹುದಾಗಿದೆ.
Latest Videos