Toyota Innova Hycross: ಹೈಬ್ರಿಡ್ ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಹೈಕ್ರಾಸ್ ಟೀಸರ್ ಪ್ರಕಟ!

ಟೊಯೊಟಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಇನೋವಾ ಹೈಕ್ರಾಸ್ ಎಂಪಿವಿ ಆವೃತ್ತಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಇದೀಗ ಹೊಸ ಕಾರಿನ ಟೀಸರ್ ಚಿತ್ರ ಪ್ರಕಟಿಸಿದೆ.

Toyota Innova Hycross: ಹೈಬ್ರಿಡ್ ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಹೈಕ್ರಾಸ್ ಟೀಸರ್ ಪ್ರಕಟ!
Toyota Innova Hycross
Follow us
Praveen Sannamani
|

Updated on:Oct 26, 2022 | 12:15 PM

ಇನೋವಾ ಎಂಪಿವಿ ಕಾರು ಮಾರಾಟದೊಂದಿಗೆ ಹಲವಾರು ದಾಖಲೆಗಳಿಗೆ ಕಾರಣವಾಗಿರುವ ಟೊಯೊಟಾ(Toyota) ಕಂಪನಿಯು ಶೀಘ್ರದಲ್ಲಿಯೇ ಹೊಸ ತಲೆಮಾರಿನ ಇನೋವಾ ಹೈಕ್ರಾಸ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಟೀಸರ್ ಚಿತ್ರದಲ್ಲಿ ಹೊಸ ಕಾರಿನ ಮುಂಭಾಗದ ವಿನ್ಯಾಸವನ್ನು ಬಹಿರಂಗಪಡಿಸಲಾಗಿದೆ.

ಹೊಸ ತಲೆಮಾರಿನ ವೈಶಿಷ್ಟ್ಯತೆ ಹೊಂದಿರುವ ಇನೋವಾ ಹೈಕ್ರಾಸ್(Innova Hycross) ಎಂಪಿವಿಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಕರೊಲ್ಲಾ ಕ್ರಾಸ್ ವಿನ್ಯಾಸ ಆಧರಿಸಿದ್ದು, ಹೊಸ ಕಾರಿಗೆ ಹೆಚ್ಚಿನ ಮಟ್ಟದ ಸ್ಪೋರ್ಟಿ ಸ್ಟೈಲ್ ನೀಡಲಾಗಿದೆ. ಹೊಸ ಕಾರಿನ ವೈಲ್ಡ್ ಹೆಡ್ ಲ್ಯಾಂಪ್ ಜೊತೆ ಎಲ್ ಆಕಾರದ ಇನ್ ರ್ಸಟ್ ಜೋಡಿಸಲಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಗ್ಲಾಸ್ ಬ್ಲ್ಯಾಕ್ ಹೊಂದಿರುವ ಹೆಕ್ಸಾಗೊನಲ್, ಸ್ಪೋರ್ಟಿ ಫಾಗ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಸೇರಿದಂತೆ ಸ್ಪೋಕ್ ಅಲಾಯ್ ವ್ಹೀಲ್ ಸೇರಿದಂತೆ ಹಲವು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದೆ.

ಎಂಜಿನ್ ಮತ್ತು ಮೈಲೇಜ್

ಇನೋವಾ ಕ್ರಿಸ್ಟಾ ಎಂಪಿವಿ ಸದ್ಯಕ್ಕೆ ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ತಲೆಮಾರಿನ ಇನೋವಾ ಹೈಕ್ರಾಸ್ ಕಾರು ಮಾದರಿಯು ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.7 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಹೊಸದಾಗಿ 2.0 ಲೀಟರ್ ಆಟ್ಕಿನ್ಸ್ ಸೈಕಲ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಪರಿಚಯಿಸಬಹುದಾಗಿದೆ. ಹೊಸ ಹೈಬ್ರಿಡ್ ಮಾದರಿಯು ಸೆಲ್ಪ್ ಡ್ರೈವ್ ಚಾರ್ಜಿಂಗ್ ವೈಶಿಷ್ಟ್ಯತೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ 17 ರಿಂದ 19 ಕಿ.ಮೀ ಮೈಲೇಜ್ ಖಾತ್ರಿಪಡಿಸಲಿದೆ.

ಇದನ್ನೂ ಓದಿ: ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಈ ಟಾಪ್ 5 ಕಾರುಗಳ ವಿಶೇಷತೆಗಳೇನು? 

ಸದ್ಯ ಮಾರುಕಟ್ಟೆಯಲ್ಲಿ ಜಿ, ಜಿ ಪ್ಲಸ್, ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಐದು ವೆರಿಯೆಂಟ್‌ಗಳನ್ನು ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಮಾದರಿಯು 2.7-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ಡೀಸೆಲ್ ಎಂಜಿನ್ ಆಯ್ಕೆಯನ್ನು ಕಳೆದ ಕೆಲ ತಿಂಗಳಿನಿಂದ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. 2023ರಿಂದ ಜಾರಿಗೆ ಜಾರಿಗೆ ಬರುತ್ತಿರುವ ಹೊಸ ಎಮಿಷನ್ ನಿಯಮ ಹಿನ್ನಲೆಯಲ್ಲಿ ಡೀಸೆಲ್ ವೆರಿಯೆಂಟ್ ಗಳ ಮಾರಾಟವನ್ನು ಸ್ಥಗಿತಗೊಳಿಸಿದ್ದು, ಡೀಸೆಲ್ ಬದಲಾಗಿ ಹೈಬ್ರಿಡ್ ಮಾದರಿಯನ್ನು ಪರಿಚಯಿಸುತ್ತಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಹೊಸ ಇನೋವಾ ಹೈಕ್ರಾಸ್ ಕಾರು ಸಾಮಾನ್ಯ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ.

ಹೊಸ ಫೀಚರ್ಸ್

ಟೊಯೊಟಾ ಕಂಪನಿಯ ಹೊಸ ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗುತ್ತಿರುವ ಹೊಸ ಇನೋವಾ ಹೈಕ್ರಾಸ್ ಕಾರು ಜೊತೆಗೆ ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಗರಿಷ್ಠ ಸೇಫ್ಟಿ ಫೀಚರ್ಸ್ ಹೊಂದಿರುವ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಜೋಡಣೆ ಮಾಡಲಾಗುತ್ತಿದೆ. ಹೊಸ ಕಾರಿನಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಸನ್ ರೂಫ್, ಸುಧಾರಿತ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಹಲವು ಕಾರ್ ಕನೆಕ್ಟ್ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಸದ್ಯ ಖರೀದಿಸಬಹುದಾದ ಅತಿಹೆಚ್ಚು ಸುರಕ್ಷಿತ ಮಧ್ಯಮ ಕ್ರಮಾಂಕದ ಕಾರುಗಳಿವು! 

ಜೊತೆಗೆ ಹೊಸ ಕಾರು ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗಿರುವುದರಿಂದ ಇನೋವಾ ಕ್ರಿಸ್ಟಾ ಕಾರಿಗಿಂತಲೂ ತುಸು ಹೆಚ್ಚುವರಿ ಉದ್ದಳತೆ ಪಡೆದುಕೊಳ್ಳಲಿದ್ದು, ಉದ್ದಳತೆ ಹೆಚ್ಚಿದ್ದಲ್ಲಿ ಬೂಟ್ ಸ್ಪೇಸ್ ಹೆಚ್ಚಳದ ಜೊತೆಗೆ ಮೂರನೇ ಸಾಲಿನ ಆಸನದಲ್ಲಿ ಕೂರುವ ಪ್ರಯಾಣಿಕರಿಗೆ ದೂರದ ಪ್ರಯಾಣಕ್ಕೂ ಅನುಕೂಲಕರವಾದ ಸ್ಥಳವಾಕಾಶ ದೊರೆಯಲಿದೆ.

ನೀರಿಕ್ಷಿತ ಬೆಲೆ(ಎಕ್ಸ್ ಶೋರೂಂ ಪ್ರಕಾರ)

ಟೊಯೊಟಾ ಕಂಪನಿಯು ಹೊಸ ಎಮಿಷನ್ ನಿಯಮ ಜಾರಿ ಹಿನ್ನಲೆಯಲ್ಲಿ ಡೀಸೆಲ್ ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಿ ಹೈಬ್ರಿಡ್ ಮಾದರಿಯತ್ತ ಗಮನಹರಿಸಿದ್ದು, ಡೀಸೆಲ್ ಮಾದರಿಯ ಸ್ಥಾನಕ್ಕಾಗಿ ಹೊಸ ಕಾರನ್ನು ಬಿಡುಗಡೆ ಮಾಡುತ್ತಿರುವುದರಿಂದ ಹೊಸ ಕಾರಿನ ಬೆಲೆ ಡೀಸೆಲ್ ಮಾದರಿಗೆ ಸರಿಸಮನಾಗಿ ಮಾರಾಟವಾಗುವ ಸಾಧ್ಯತೆಗಳಿವೆ. ಜೊತೆಗೆ ಹೈಬ್ರಿಡ್ ಮಾದರಿಯು ಹೆಚ್ಚಿನ ಇಂಧನ ದಕ್ಷತೆ ಹೊಂದಿರುವುದರಿಂದ ಬೇಡಿಕೆ ಹೆಚ್ಚಳವಾಗುವ ನೀರಿಕ್ಷೆಯಿದ್ದು, ಹೊಸ ಕಾರು ಈ ತಿಂಗಳಾಂತ್ಯಕ್ಕೆ ಇಲ್ಲವೇ ಜನವರಿ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

Published On - 12:08 pm, Wed, 26 October 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್