Toyota Innova Hycross: ಹೊಸ ಟೊಯೊಟಾ ಇನೋವಾ ಹೈಕ್ರಾಸ್ ಅನಾವರಣಕ್ಕೂ ಮುನ್ನ ಕಾರಿನ ಚಿತ್ರ ಬಹಿರಂಗ

ಟೊಯೊಟಾ ಕಂಪನಿಯು ತನ್ನ ಹೊಸ ಇನೋವಾ ಹೈಕ್ರಾಸ್ ಎಂಪಿವಿಯನ್ನು ಇದೇ ತಿಂಗಳು 25ರಂದು ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಅನಾವರಣಕ್ಕೂ ಮುನ್ನ ಹೊಸ ಕಾರಿನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಂಡಿವೆ.

Toyota Innova Hycross: ಹೊಸ ಟೊಯೊಟಾ ಇನೋವಾ ಹೈಕ್ರಾಸ್ ಅನಾವರಣಕ್ಕೂ ಮುನ್ನ ಕಾರಿನ ಚಿತ್ರ ಬಹಿರಂಗ
Toyota Innova Hycross
Follow us
Praveen Sannamani
|

Updated on:Nov 17, 2022 | 8:25 PM

ಟೊಯೊಟಾ(Toyota) ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಇನೋವಾ ಹೈಕ್ರಾಸ್(Innova Hycross) ಕಾರು ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಹೊಸ ತಲೆಮಾರಿನ ವೈಶಿಷ್ಟ್ಯತೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಕಾರು ಮಾದರಿಯನ್ನು ಕಂಪನಿಯು ಇದೇ ತಿಂಗಳು 25ರಂದು ಅನಾವರಣಗೊಳಿಸಲಿದ್ದು, ಹೊಸ ಕಾರು ಕಂಪನಿಯ ಟಿಎನ್ ಜಿಎ ಪ್ಲ್ಯಾಟ್ ಫಾರ್ಮ್ ಆಧರಿಸಿ ಬಿಡುಗಡೆಯಾಗಲಿದೆ. ಹೊಸ ಎಂಪಿವಿ ಕಾರಿನ ಕುರಿತಾಗಿ ಈಗಾಗಲೇ ಹಲವು ಬಾರಿ ಟೀಸರ್ ಚಿತ್ರಗಳನ್ನು ಹಂಚಿಕೊಂಡಿರುವ ಟೊಯೊಟಾ ಕಂಪನಿಯು ಈ ತಿಂಗಳು 25ರಂದು ಅನಾವರಣಗೊಳಿಸಿದ ನಂತರ ಮುಂದಿನ 2023ರ ಜನವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆ ಮಾಡಲಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಿರುವ ಹೊಸ ಕಾರಿನ ಚಿತ್ರವು ಸಾಕಷ್ಟು ಸದ್ದು ಮಾಡುತ್ತಿದ್ದು, ಹೊಸ ಕಾರಿಗೆ ಈ ಬಾರಿ ಹೆಚ್ಚಿನ ಮಟ್ಟದ ಸ್ಪೋರ್ಟಿ ಲುಕ್ ನೀಡಲಾಗಿದೆ.

ಹೊಸ ಇನೋವಾ ಹೈಕ್ರಾಸ್ ಎಂಪಿವಿಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಕರೊಲ್ಲಾ ಕ್ರಾಸ್ ವಿನ್ಯಾಸ ಆಧರಿಸಿದ್ದು, ಹೊಸ ಕಾರಿನ ವೈಲ್ಡ್ ಹೆಡ್ ಲ್ಯಾಂಪ್ ಜೊತೆ ಎಲ್ ಆಕಾರದ ಇನ್ ರ್ಸಟ್ ಜೋಡಿಸಲಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಗ್ಲಾಸ್ ಬ್ಲ್ಯಾಕ್ ಹೊಂದಿರುವ ಹೆಕ್ಸಾಗೊನಲ್, ಸ್ಪೋರ್ಟಿ ಫಾಗ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಸೇರಿದಂತೆ ಸ್ಪೋಕ್ ಅಲಾಯ್ ವ್ಹೀಲ್ ಸೇರಿದಂತೆ ಹಲವು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿವೆ ಈ ಮೂರು ಬಹುನೀರಿಕ್ಷಿತ ಕಾರುಗಳು!

ಎಂಜಿನ್ ಮತ್ತು ಮೈಲೇಜ್

ಪ್ರಸ್ತತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಎಂಪಿವಿಯು ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ಇನೋವಾ ಹೈಕ್ರಾಸ್ ಕಾರು ಮಾದರಿಯು ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ 2.7 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಹೊಸದಾಗಿ 2.0 ಲೀಟರ್ ಆಟ್ಕಿನ್ಸ್ ಸೈಕಲ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಪರಿಚಯಿಸುತ್ತಿದೆ. ಇದು ಸ್ಟ್ರಾಂಗ್ ಹೈಬ್ರಿಡ್ ವೈಶಿಷ್ಟ್ಯತೆಯೊಂದಿಗೆ ಸೆಲ್ಪ್ ಡ್ರೈವ್ ಚಾರ್ಜಿಂಗ್ ವೈಶಿಷ್ಟ್ಯತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್ ಗೆ 17 ರಿಂದ 19 ಕಿ.ಮೀ ಮೈಲೇಜ್ ಖಾತ್ರಿಪಡಿಸಲಿದೆ.

ನೀರಿಕ್ಷಿತ ಹೊಸ ಫೀಚರ್ಸ್

ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗುತ್ತಿರುವ ಹೊಸ ಇನೋವಾ ಹೈಕ್ರಾಸ್ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಸನ್ ರೂಫ್, ಸುಧಾರಿತ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಹಲವು ಕಾರ್ ಕನೆಕ್ಟ್ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಗರಿಷ್ಠ ಸೇಫ್ಟಿ ಫೀಚರ್ಸ್ ಹೊಂದಿರುವ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಜೋಡಣೆ ಮಾಡಲಾಗುತ್ತಿದೆ. ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗಿರುವುದರಿಂದ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಕಾರಿಗಿಂತಲೂ ತುಸು ಹೆಚ್ಚುವರಿ ಉದ್ದಳತೆ ಪಡೆದುಕೊಳ್ಳಲಿದ್ದು, ಉದ್ದಳತೆ ಹೆಚ್ಚಿದ್ದಲ್ಲಿ ಬೂಟ್ ಸ್ಪೇಸ್ ಹೆಚ್ಚಳದ ಜೊತೆಗೆ ಮೂರನೇ ಸಾಲಿನ ಆಸನದಲ್ಲಿ ಕೂರುವ ಪ್ರಯಾಣಿಕರಿಗೆ ದೂರದ ಪ್ರಯಾಣಕ್ಕೂ ಅನುಕೂಲಕರವಾದ ಸ್ಥಳವಾಕಾಶ ದೊರೆಯಲಿದೆ.

ಇದನ್ನೂ ಓದಿ: ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್!

ಅಂದಾಜು ಬೆಲೆ

2023ರ ಏಪ್ರಿಲ್ ನಿಂದ ಜಾರಿಗೆ ಬರುತ್ತಿರುವ ಹೊಸ ರಿಯಲ್ ಡ್ರೈವಿಂಗ್ ಎಮಿಷನ್ ನಿಯಮ ಜಾರಿಗೆ ಬರುತ್ತಿರುವ ಹಿನ್ನಲೆಯಲ್ಲಿ ಟೊಯೊಟಾ ಕಂಪನಿಯು ಹೊಸ ಕಾರಿನ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ ಪರಿಚಯಿಸುತ್ತಿದೆ. ಹೊಸ ಕಾರಿನಲ್ಲಿ ಸಂಪೂರ್ಣವಾಗಿ ಡೀಸೆಲ್ ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈಬ್ರಿಡ್ ಮಾದರಿಯತ್ತ ಗಮನಹರಿಸಿದ್ದು, ಡೀಸೆಲ್ ಕಾರು ಮಾದರಿಯ ಸ್ಥಾನಕ್ಕಾಗಿ ಸರಿಸಮನಾಗಿ ಹೊಸ ಹೈಬ್ರಿಡ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ಹೈಬ್ರಿಡ್ ಮಾದರಿಯು ಹೆಚ್ಚಿನ ಇಂಧನ ದಕ್ಷತೆ ಹೊಂದಿರುವುದರಿಂದ ಬೇಡಿಕೆ ಹೆಚ್ಚಳವಾಗುವ ನೀರಿಕ್ಷೆಯಿದ್ದು, ಹೊಸ ಕಾರು ಹೊಸ ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20 ಲಕ್ಷದಿಂದ ಹೈ ಎಂಡ್ ಮಾದರಿಯು ರೂ. 28 ಲಕ್ಷ ಬೆಲೆ ಅಂತದಲ್ಲಿ ಮಾರಾಟಗೊಳ್ಳಬಹುದಾಗಿದೆ.

Published On - 12:18 pm, Thu, 17 November 22