AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toyota Innova Hycross: ಟೊಯೊಟಾ ಇನೋವಾ ಹೈಕ್ರಾಸ್ ಬಿಡುಗಡೆ: ಬೆಲೆ, ಫೀಚರ್ಸ್, ವೈಶಿಷ್ಟ್ಯತೆಗಳೇನು?

ಟೊಯೊಟಾ ಇಂಡಿಯಾ ಕಂಪನಿಯು ತನ್ನ ಹೊಸ ತಲೆಮಾರಿನ ಇನೋವಾ ಹೈಕ್ರಾಸ್ ಎಂಪಿವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳಲ್ಲಿ ಮಾರುಕಟ್ಟೆ ಪ್ರವೇಶಿಸಿದೆ.

Toyota Innova Hycross: ಟೊಯೊಟಾ ಇನೋವಾ ಹೈಕ್ರಾಸ್ ಬಿಡುಗಡೆ: ಬೆಲೆ, ಫೀಚರ್ಸ್, ವೈಶಿಷ್ಟ್ಯತೆಗಳೇನು?
ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ ಟೊಯೊಟಾ ಇನೋವಾ ಹೈಕ್ರಾಸ್
Praveen Sannamani
|

Updated on:Dec 29, 2022 | 12:26 PM

Share

ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ(Toyota) ಕಂಪನಿಯು ಹೊಸ ಇನೋವಾ ಹೈಕ್ರಾಸ್(Innova Hycross) ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 18.30 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 28.97 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯು ಜಿ, ಜಿಎಕ್ಸ್, ವಿಎಕ್ಸ್, ಜೆಡ್ಎಕ್ಸ್ ಮತ್ತು ಜೆಡ್ಎಕ್ಸ್(ಒ) ವೆರಿಯೆಂಟ್ ಗಳನ್ನು ಹೊಂದಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ.

ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗಿರುವ ಹೊಸ ಇನೋವಾ ಹೈಕ್ರಾಸ್ ಹೊಸ ಕಾರು ಮೂರನೇ ತಲೆಮಾರಿನ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ವಿನೂತನ ವಿನ್ಯಾಸದ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಸುಧಾರಿತ ಎಂಜಿನ್ ಆಯ್ಕೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಎಂಪಿವಿ ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಯ ನೀರಿಕ್ಷೆಯಲ್ಲಿದೆ.

ಎಂಜಿನ್ ಆಯ್ಕೆ ಮತ್ತು ಮೈಲೇಜ್

ಹೊಸ ಇನೋವಾ ಹೈಕ್ರಾಸ್ ಕಾರು ಮಾದರಿಯು ಪ್ರಮುಖ ಎಂಜಿನ್ ಆಯ್ಕೆಗಳನ್ನು ಹೊಂದಿದ್ದು, 2.0 ಲೀಟರ್ ಸಾಮಾನ್ಯ ಪೆಟ್ರೋಲ್ ಜೊತೆಗೆ 2.0 ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. 2.0 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 172 ಹಾರ್ಸ್ ಪವರ್ ಮತ್ತು 205 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಹೈಬ್ರಿಡ್ ಮಾದರಿಯು ಸಿವಿಟಿ ಗೇರ್ ಬಾಕ್ಸ್ ನೊಂದಿಗೆ 150 ಹಾರ್ಸ್ ಪವರ್, 187 ಎನ್ಎಂ ಟಾರ್ಕ್‌ ಉತ್ಪಾದಿಸುತ್ತದೆ.

2.0 ಲೀಟರ್ ಆಟ್ಕಿನ್ಸ್ ಸೈಕಲ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಮಾದರಿಯು ಫ್ರಂಟ್ ವ್ಹೀಲ್ ಡ್ರೈವ್ ಸಿಸ್ಟಂ ಜೊತೆ ಸೆಲ್ಪ್ ಡ್ರೈವ್ ಚಾರ್ಜಿಂಗ್ ವೈಶಿಷ್ಟ್ಯತೆ ಹೊಂದಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್ ಗೆ ಗರಿಷ್ಠ 21 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಒಟ್ಟಾರೆ ಹೊಸ ಕಾರಿನ ಹೈಬ್ರಿಡ್ ಮಾದರಿಯಲ್ಲಿ ಒಂದು ಬಾರಿ ಪೂರ್ಣ ಪೆಟ್ರೋಲ್ ಟ್ಯಾಂಕ್ ಜೊತೆಗೆ ಎಲೆಕ್ಟ್ರಿಕ್ ಎಂಜಿನ್ ಮೂಲಕ 1,097 ಕಿ.ಮೀ ಚಾಲನೆ ಮಾಡಬಹುದಾಗಿದೆ.

ಟೊಯೊಟಾ ಇನೋವಾ ಹೈಕ್ರಾಸ್ ವಿಡಿಯೋ ಇಲ್ಲಿದೆ

ಡಿಸೈನ್ ಮತ್ತು ಫೀಚರ್ಸ್

ಹೊಸ ಇನೋವಾ ಹೈಕ್ರಾಸ್ ಕಾರು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚು ಸುಧಾರಿತ ವಿನ್ಯಾಸ ಅಂಶಗಳನ್ನು ಒಳಗೊಂಡಿದ್ದು, ಎಸ್ ಯುವಿ ಲುಕ್ ನೊಂದಿಗೆ ಗ್ಲಾಸ್ ಬ್ಲ್ಯಾಕ್ ಹೊಂದಿರುವ ಹೆಕ್ಸಾಗೊನಲ್, ಸ್ಪೋರ್ಟಿ ಫಾಗ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಸೇರಿದಂತೆ 18 ಇಂಚಿನ 10-ಸ್ಪೋಕ್ ಅಲಾಯ್ ವ್ಹೀಲ್ ಸೇರಿದಂತೆ ಹಲವು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಸನ್ ರೂಫ್, ಸುಧಾರಿತ 10.1 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, 4.2 ಇಂಚಿನ ಮಲ್ಟಿ ಇನ್ ಫಾರ್ಮೆಷನ್ ಡಿಸ್ಪೇ, ಡ್ಯುಯಲ್ ಟೋನ್ ಥೀಮ್ ಹೊಂದಿರುವ ಡಾರ್ಕ್ ಚೆಸ್ಟ್ ನಟ್ ಸೀಟುಗಳು ಮತ್ತು ಹಲವು ಕಾರ್ ಕನೆಕ್ಟ್ ಸೌಲಭ್ಯಗಳನ್ನು ನೀಡಲಾಗಿದ್ದು, ಇದರೊಂದಿಗೆ ಗರಿಷ್ಠ ಸುರಕ್ಷತೆಗಾಗಿ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಜೋಡಣೆ ಮಾಡಲಾಗಿದೆ.

ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಡಿಪಾರ್ಚರ್ ವಾರ್ನಿಂಗ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಹೊಂದಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಜೊತೆಗೆ ಸ್ಟ್ಯಾಂಡರ್ಡ್ ಮಾದರಿಗಳಿಗೂ ಅನ್ವಯಿಸುವಂತೆ 6 ಏರ್ ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಟ್ರಾಕ್ಷನ್ ಕಂಟ್ರೋಲ್, ಇಎಸ್ ಪಿ ಸೌಲಭ್ಯಗಳಿದ್ದು, ಆಂಬಿಯೆಂಟ್ ಲೈಟಿಂಗ್, ಫ್ರಂಟ್ ವೆಂಟಿಲೆಟೆಡ್ ಲೆದರ್ ಆಸನಗಳು, ಒಟ್ಟೊಮನ್ ವೈಶಿಷ್ಟ್ಯತೆ ಹೊಂದಿರುವ ಮಧ್ಯದಲ್ಲಿರುವ ಆಸನಗಳು ಗಮನಸೆಳೆಯುತ್ತವೆ.

ಕಾರಿನ ಉದ್ದಳತೆ

ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಉದ್ದಳತೆಯೊಂದಿಗೆ ಉತ್ತಮ ಕ್ಯಾಬಿನ್ ಹೊಂದಿದ್ದು, ಹೊಸ ಕಾರು 4,755 ಎಂಎಂ ಉದ್ದ, 1,850 ಎಂಎಂ ಅಗಲ, 1,795 ಎಂಎಂ ಎತ್ತರ, 2,850 ಎಂಎಂ ವ್ಹೀಲ್ ಬೆಸ್ ಮತ್ತು 185 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿರಲಿದೆ.

Published On - 1:56 pm, Wed, 28 December 22

ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!