Toyota Taisor: ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಟೊಯೊಟಾ ಟೈಸರ್
ಟೊಯೊಟಾ ಕಂಪನಿ ಭಾರತದಲ್ಲಿ ತನ್ನ ಹೊಸ ಟೈಸರ್ ಸಬ್ ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಎಂಟ್ರಿ ನೀಡಿದೆ.
ದೇಶಿಯ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆ ಆಧರಿಸಿ ಟೊಯೊಟಾ (Toyota) ಕಂಪನಿ ಭಾರತದಲ್ಲಿ ತನ್ನ ಹೊಸ ಟೈಸರ್ (Taisor) ಸಬ್ ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆ ಮಾಡಿದೆ. ಹೊಸ ಕಾರನ್ನು ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗೂಡಿ ಅಭಿವೃದ್ದಿಗೊಂಡಿದ್ದು, ಇದು ಫ್ರಾಂಕ್ಸ್ ಕಾರಿನ ರೀಬ್ಯಾಡ್ಜ್ ಮಾದರಿಯಾಗಿ ಮಾರಾಟಗೊಳ್ಳುತ್ತಿದೆ.
ಟೊಯೊಟಾ ಕಂಪನಿ ಬಿಡುಗಡೆ ಮಾಡಿರುವ ಟೈಸರ್ ಕಾರು ಇ, ಎಸ್, ಎಸ್ ಪ್ಲಸ್ ಮತ್ತು ವಿ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 7.51 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಇದು ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿಗಿಂತಲೂ ಉತ್ತಮ ವಿನ್ಯಾಸದೊಂದಿಗೆ ಗಮನಸೆಳೆಯುತ್ತಿದ್ದು, ಹೊಸ ಕಾರು ರೀಬ್ಯಾಡ್ಜ್ ಲೋಗೊ ಜೊತೆಗೆ ಮರುವಿನ್ಯಾಸಗೊಳಿಸಲಾದ ಬಂಪರ್ ಮತ್ತು ಬಾನೆಟ್, ಡಿಆರ್‌ಎಲ್‌ಗಳೊಂದಿಗೆ ಆಟೋಮ್ಯಾಟಿಕ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳನ್ನು ಪಡೆದುಕೊಂಡಿದೆ.
ಇದನ್ನೂ ಓದಿ: ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಭರ್ಜರಿ ರೇಟಿಂಗ್ಸ್ ಪಡೆದುಕೊಂಡ ಹೊಸ ಮಾರುತಿ ಸುಜುಕಿ ಸ್ವಿಫ್ಟ್
ಹಾಗೆಯೇ ಕಾರಿನ ಒಳಭಾಗದಲ್ಲಿ ಡ್ಯುಯಲ್-ಟೋನ್ ಕ್ಯಾಬಿನ್ ನೊಂದಿಗೆ 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಟ್ವಿನ್-ಪಾಡ್ ಇನ್‌ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ಫೀಚರ್ಸ್ ಪಡೆದುಕೊಂಡಿದೆ. ಇನ್ನು ಹೊಸ ಟೈಸರ್ ಕಾರಿನಲ್ಲಿ ಫ್ರಾಂಕ್ಸ್ ಕಾರಿನಲ್ಲಿರುವ 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಆಯ್ಕೆ ಲಭ್ಯವಿದೆ. ಜೊತೆಗೆ ಹೊಸ ಎಂಜಿನ್ ಆಯ್ಕೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳನ್ನು ಪಡೆದುಕೊಂಡಿದ್ದು, ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ.
ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಕನಕ್ಟಿವಿಟಿ ಕಂಟ್ರೋಲ್ ಕಾರ್ ತಂತ್ರಜ್ಞಾನದೊಂದಿಗೆ ಕ್ಲೈಮೆಂಟ್ ಕಂಟ್ರೋಲ್ ಸಿಸ್ಟಂ, ವೈರ್‌ಲೆಸ್ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, 360 ಡಿಗ್ರಿ ಕ್ಯಾಮೆರಾ, ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವಾರು ಫೀಚರ್ಸ್ ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ರಣಬಿಸಿಲಿನಲ್ಲೂ ಅರಾಮದಾಯಕ ಕಾರು ಪ್ರಯಾಣಕ್ಕೆ ಸಹಕಾರಿಯಾಗುವ ಟಿಪ್ಸ್..
ಈ ಮೂಲಕ ಹೊಸ ಟೈಸರ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ನಿಸ್ಸಾನ್ ಮ್ಯಾಗ್ನೈಟ್ ಕಾರುಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಿ ಮಾರಾಟಗೊಳ್ಳುತ್ತಿದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ವಿಶೇಷತೆಗಳನ್ನು ಜೋಡಣೆ ಮಾಡಿರುವ ಟೊಯೊಟಾ ಕಂಪನಿ ಹೆಚ್ಚಿನ ಮಟ್ಟದ ವಾರಂಟಿ ಘೋಷಿಸಿದ್ದು, ಹೊಸ ಕಾರು ಖರೀದಿಯ ಮೇಲೆ 3 ವರ್ಷ ಅಥವಾ 1 ಲಕ್ಷ ಕಿ.ಮೀ ತನಕ ವಾರಂಟಿಯೊಂದಿಗೆ ವಿವಿಧ ಆಫರ್ ಗಳು ಲಭ್ಯವಾಗಲಿವೆ.