ಹಾಫ್ ಹೆಲ್ಮೆಟ್ ಹಾಕಿ ಸ್ಕೂಟರ್ ರೈಡ್ ಮಾಡುತ್ತಿದ್ದ ಪೊಲೀಸ್ ಗೆ ದಂಡ ವಿಧಿಸಿದ ಟ್ರಾಫಿಕ್ ಪೋಲಿಸ್!
ಟ್ರಾಫಿಕ್ ರೂಲ್ಸ್ ಪಾಲಿಸದೆ ಹಾಫ್ ಹೆಲ್ಮೆಟ್ ಹಾಕಿಕೊಂಡ ಸ್ಕೂಟರ್ ಚಾಲನೆ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೆಂಗಳೂರಿನ ಆರ್ ಟಿ ನಗರದ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.
ಭಾರತದಲ್ಲಿ ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶಿದಿಂದ ಸುರಕ್ಷಿತ ವಾಹನ ಚಾಲನೆಗಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ದ್ವಿ-ಚಕ್ರ ವಾಹನ ಸವಾರರಿಗೆ ಗರಿಷ್ಠ ರಕ್ಷಣೆಗಾಗಿ ಐಎಸ್ಐ ಪ್ರಮಾಣೀಕೃತ ಫುಲ್ ಸೈಜ್ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಆದರೆ ಹೊಸ ನಿಯಮ ಜಾರಿ ನಂತರವೂ ಇನ್ನು ಹಲವಾರು ದ್ವಿ-ಚಕ್ರ ವಾಹನ ಬಳಕೆದಾರರೂ ಕಾನೂನು ಬಾಹಿರವಾಗಿರುವ ಅಸುರಕ್ಷಿತ ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿದ್ದಾರೆ.
ಹಾಫ್ ಹೆಲ್ಮೆಟ್ ಬಳಕೆ ಮಾಡದಂತೆ ಮತ್ತು ಸುರಕ್ಷತೆಗಾಗಿ ಫುಲ್ ಸೈಜ್ ಹೆಲ್ಮೆಟ್ ಬಳಸುವಂತೆ ಹಲವಾರು ಅಭಿಯಾನಗಳನ್ನು ಕೈಗೊಳ್ಳುತ್ತಿದ್ದರೂ ಇನ್ನು ಹಲವು ದ್ವಿ-ಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ದ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಮ್ಮ ಬೆಂಗಳೂರಿನ ಸಂಚಾರಿ ಪೊಲೀಸರು ಅಸುರಕ್ಷಿತ ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿರುವುವರಿಗೆ ದಂಡ ವಿಧಿಸುತ್ತಿದ್ದಾರೆ.
ಹಾಫ್ ಹೆಲ್ಮೆಟ್ ಹಾಕಿದ್ದಕ್ಕೆ ದಂಡತೆತ್ತ ಪೊಲೀಸ್
ಬೆಂಗಳೂರಿನ ಆರ್ ಟಿ ನಗರದ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ದ ಕಾರ್ಯಾಚರಣೆ ಆರಂಭಿಸಿ ಪೊಲೀಸ್ ಪೆದೆಯೊಬ್ಬರಿಂದ ದಂಡ ವಸೂಲಿ ಮಾಡಿದ್ದಾರೆ. ಸಂಚಾರಿ ಪೊಲೀಸರ ಈ ಕ್ರಮವು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
Good evening sir half helmet case booked against police Tq pic.twitter.com/Xsx5UA40OY
— R T NAGAR TRAFFIC BTP (@rtnagartraffic) October 17, 2022
ಹಾಫ್ ಹೆಲ್ಮೆಟ್ ಹಾಕಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ದಂಡವಿಧಿಸಿರುವುದನ್ನು ಆರ್ ಟಿ ನಗರದ ಸಂಚಾರಿ ಪೊಲೀಸರು ಫೋಟೋ ಸಮೇತ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಪೊಲೀಸರು ಕ್ರಮಕ್ಕೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನು ಕೆಲವರು ಹೊಸ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇನ್ನು ಬೈಕ್ ಸವಾರಿ ವೇಳೆ ಸವಾರ ಮತ್ತು ಹಿಂಬದಿಯ ಸವಾರರಿಗೆ ಬಹುತೇಕ ರಾಜ್ಯಗಳಲ್ಲಿ ಹೆಲ್ಮೆಟ್ ಬಳಕೆಯ ಕಡ್ಡಾಯವಾಗಿದ್ದರೂ ಕೂಡಾ ದಿನನಿತ್ಯ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿರುವ ಕಳವಳಕಾರಿಯಾದ ಅಂಶವಾಗಿದೆ.
Published On - 3:34 pm, Fri, 21 October 22