TVS iQube: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಿವಿಎಸ್ ಐಕ್ಯೂಬ್
ಟಿವಿಎಸ್ ಹೊಸ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಳೆದ ತಿಂಗಳು ದಾಖಲೆ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಂಡಿದೆ.
ಎಲೆಕ್ಟ್ರಿಕ್ ಸ್ಕೂಟರ್(Electric Scooter) ವಿಭಾಗದಲ್ಲಿ ವಿವಿಧ ಆವೃತ್ತಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಟಿವಿಎಸ್ ಐಕ್ಯೂಬ್(TVS iQube) ಮಾದರಿಯು ದಾಖಲೆ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಕಳೆದ ತಿಂಗಳು ಮಾರ್ಚ್ ನಲ್ಲಿ 15 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ. ಹೊಸ ಐಕ್ಯೂಬ್ ಇವಿ ಸ್ಕೂಟರ್ ಮಾದರಿಯು ವಿವಿಧ ವೆರಿಯೆಂಟ್ ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಇದುವರೆಗೆ ಇದು 1 ಲಕ್ಷಕ್ಕೂ ಹೆಚ್ಚು ಮಾರಾಟ ದಾಖಲೆಯನ್ನ ತನ್ನದಾಗಿಸಿಕೊಂಡಿದೆ.
2020ರ ಜನವರಿಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್ ಮಾದರಿಯು ಆರಂಭದಲ್ಲಿ ಸಣ್ಣ ಪ್ರಮಾಣದ ಬೇಡಿಕೆ ಪಡೆದುಕೊಂಡಿತ್ತು. ತದನಂತರ 2022ರ ಪರಿಚಯಿಸಲಾದ ಹೊಸ ಆವೃತ್ತಿಯು ಭಾರೀ ಬೇಡಿಕೆ ಪಡೆದುಕೊಂಡಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ 90 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.
ಇದನ್ನೂ ಓದಿ: ಅತ್ಯುತ್ತಮ ಮೈಲೇಜ್ ಪ್ರೇರಿತ ಹೋಂಡಾ ಎಸ್ ಪಿ125 ಬಿಡುಗಡೆ
ಐಕ್ಯೂಬ್ ಇವಿ ಸ್ಕೂಟರ್ ಬಿಡುಗಡೆಯಾದ ಮೊದಲ ಹಣಕಾಸು ವರ್ಷದಲ್ಲಿ ಟಿವಿಎಸ್ ಮೋಟಾರ್ ಕಂಪನಿಯು ಕೇವಲ 62 ಯುನಿಟ್ ಮಾರಾಟ ಮಾಡಿತ್ತು. ತದನಂತರ 2020-21ರ ಹಣಕಾಸು ವರ್ಷದಲ್ಲಿ 1,061 ಯುನಿಟ್ ಮತ್ತು 2021-22-ರಲ್ಲಿ 10,773 ಯುನಿಟ್ ಮಾರಾಟ ಮಾಡಲಾಗಿತ್ತು. ತದನಂತರ 2022-23ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 96,645 ಯುನಿಟ್ ಮಾರಾಟ ಮಾಡಿದ್ದು, ಕಳೆದ ಮೂರು ತಿಂಗಳಿನಿಂದ ಸರಾಸರಿಯಾಗಿ 15 ಸಾವಿರ ಯುನಿಟ್ ಮಾರಾಟ ದಾಖಲೆ ತನ್ನದಾಗಿಸಿಕೊಂಡಿದೆ.
ಹೊಸ ಐಕ್ಯೂಬ್ ಮಾದರಿಯು ಸದ್ಯ ದೇಶಾದ್ಯಂತ ನೂರಕ್ಕೂ ಹೆಚ್ಚು ನಗರಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಸ್ಕೂಟರ್ ಮಾದರಿಯನ್ನ ಟಿವಿಎಸ್ ಕಂಪನಿಯು ಸ್ಟ್ಯಾಂಡರ್ಡ್ ಮತ್ತು ಎಸ್ ವೆರಿಯೆಂಟ್ ಗಳಲ್ಲಿ ಮಾರಾಟಗೊಳ್ಳುತ್ತಿದೆ. ಐಕ್ಯೂಬ್ ಇವಿ ಸ್ಕೂಟರಿನಲ್ಲಿ ಟಿವಿಎಸ್ ಕಂಪನಿಯು ಶೀಘ್ರದಲ್ಲಿಯೇ ಎಸ್ ಟಿ ಎನ್ನುವ ಮತ್ತೊಂದು ಹೈ ಎಂಡ್ ಪರಿಚಯಿಸಲಿದ್ದು, ಇದು ಸಾಮಾನ್ಯ ವೆರಿಯೆಂಟ್ ಗಳಿಂತಲೂ ಹೆಚ್ಚಿನ ಬ್ಯಾಟರಿ ಪ್ಯಾಕ್ ಸಾಮಾರ್ಥ್ಯದೊಂದಿಗೆ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಐಕ್ಯೂಬ್ ಸ್ಟ್ಯಾಂಡರ್ಡ್ ಮತ್ತು ಎಸ್ ವೆರಿಯೆಂಟ್ ಗಳು 3.04 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆಯೊಂದಿಗೆ ಪ್ರತಿ ಚಾರ್ಜ್ ಗೆ 100 ಕಿ.ಮೀ ಮೈಲೇಜ್ ನೀಡುತ್ತದೆ. ಇದರೊಂದಿಗೆ ಹೊಸ ಇವಿ ಸ್ಕೂಟರ್ ಮಾದರಿಯು ಆನ್ ರೋಡ್ ಪ್ರಕಾರ ರೂ. 1.12 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಹೊಂದಿದ್ದು, ಹೊಸ ಸ್ಕೂಟರ್ ಖರೀದಿಗೆ ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಕೂಡಾ ಅನ್ವಯಿಸಲಿದೆ.
ಇದನ್ನೂ ಓದಿ: ಮತ್ತಷ್ಟು ಸ್ಮಾರ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಹೋಂಡಾ ಆಕ್ಟೀವಾ 125
ಹೊಸ ಐಕ್ಯೂಬ್ ಮಾದರಿಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದ್ದು, 7 ಇಂಚಿನ ಟಚ್ ಸ್ಕ್ರೀನ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್ ಜೊತೆಗೆ ಹಲವಾರು ಕನೆಕ್ಟಿವಿಟಿ ಸೌಲಭ್ಯಗಳನ್ನ ನೀಡಲಾಗಿದೆ. ಹೊಸ ಸ್ಕೂಟರಿನಲ್ಲಿ ಟರ್ನ್ ಬೈ ಟರ್ನ್ ನ್ಯಾವಿಗೇಷನ್, ಮ್ಯೂಜಿಕ್ ಕಂಟ್ರೋಲ್ ಸೇರಿದಂತೆ 12 ಇಂಚಿನ ವ್ಹೀಲ್ ಜೋಡಿಸಲಾಗಿದ್ದು, ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಇನ್ನು ಸ್ಟ್ಯಾಂಡರ್ಡ್ ಮತ್ತು ಎಸ್ ವೆರಿಯೆಂಟ್ ಗಳಿಂತಲೂ ಹೆಚ್ಚಿನ ಬ್ಯಾಟರಿ ಪ್ಯಾಕ್ ನೊಂದಿಗೆ ಪ್ರತಿ ಚಾರ್ಜ್ ಗೆ 140 ಕಿ.ಮೀ ಮೈಲೇಜ್ ಹೊಂದಿರುವ ಐಕ್ಯೂಬ್ ಎಸ್ ಟಿ ರೂಪಾಂತರವು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ. ಹೊಸ ಆವೃತ್ತಿಯು ರೂ. 1.45 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಇದರೊಂದಿಗೆ ಟಿವಿಎಸ್ ಕಂಪನಿಯು ಎಥರ್ ಮತ್ತು ಓಲಾ ಇವಿ ಸ್ಕೂಟರ್ ಮಾದರಿಗಳಿಗೆ ಇನ್ನಷ್ಟು ಪೈಪೋಟಿ ನೀಡಲಿದೆ.
Published On - 3:25 pm, Mon, 3 April 23