ಬರಲಿದೆ ಭರ್ಜರಿ ಮೈಲೇಜ್ ನೀಡುವ ಟಿವಿಎಸ್ ಜೂಪಿಟರ್ 125 ಸಿಎನ್​ಜಿ ವರ್ಷನ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಸ ದ್ವಿಚಕ್ರವಾಹನಗಳ ಉತ್ಪನ್ನಗಳಲ್ಲಿ 125 ಸಿಸಿ ಸಾಮಾರ್ಥ್ಯದ ಸ್ಕೂಟರ್ ಮಾದರಿಯನ್ನು ಸಿಎನ್​ಜಿ ಆವೃತ್ತಿಯಲ್ಲಿ ಬಿಡುಗಡೆ ಮಾಡುವುದಾಗಿ ಖಚಿತಪಡಿಸಿದೆ.

ಬರಲಿದೆ ಭರ್ಜರಿ ಮೈಲೇಜ್ ನೀಡುವ ಟಿವಿಎಸ್ ಜೂಪಿಟರ್ 125  ಸಿಎನ್​ಜಿ ವರ್ಷನ್
ಟಿವಿಎಸ್ ಜೂಪಿಟರ್ 125
Follow us
Praveen Sannamani
|

Updated on: Jul 11, 2024 | 10:13 PM

ಭಾರತದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಸಾಂಪ್ರಾದಾಯಿಕ ಇಂಧನ ಚಾಲಿತ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ಮತ್ತು ಸಿಎನ್​ಜಿ ಚಾಲಿತ ವಾಹನಗಳಿಗೂ ಉತ್ತಮ ಬೇಡಿಕೆ ದಾಖಲಾಗುತ್ತಿದೆ. ಸಿಎನ್​ಜಿ ಚಾಲಿತ ವಾಹನಗಳು ಆಕರ್ಷಕ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದ್ದು, ಇವು ಕಡಿಮೆ ನಿರ್ವಹಣಾ ವೆಚ್ಚ ಮತ್ತು ಹೆಚ್ಚಿನ ಮೈಲೇಜ್ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ. ಹೀಗಾಗಿ ಟಿವಿಎಸ್ ಕಂಪನಿ ಕೂಡಾ ತನ್ನ ಹೊಸ ಸಿಎನ್ ಜಿ ಚಾಲಿತ ಸ್ಕೂಟರ್ ಮಾದರಿಯನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

ಇತ್ತೀಚೆಗೆ ಸಿಎನ್ ಜಿ ಚಾಲಿತ ಬಜಾಜ್ ಫ್ರೀಡಂ 125 ಬೈಕ್ ಬಿಡುಗಡೆಯ ಬೆನ್ನಲ್ಲೇ ಟಿವಿಎಸ್ ಕೂಡಾ ತನ್ನ ಮೊದಲ ಸಿಎನ್ ಜಿ ಚಾಲಿತವಾಗಿರುವ ತನ್ನ ಹೊಸ ಸ್ಕೂಟರ್ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಇದು ವಿನೂತನ ತಂತ್ರಜ್ಞಾನ ಪ್ರೇರಣೆಯೊಂದಿಗೆ ರಸ್ತೆಗಿಳಿಯಲಿದೆ. ಹೊಸ ಸಿಎನ್ ಜಿ ಸ್ಕೂಟರ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ಹಲವು ಸುತ್ತಿನ ಟೆಸ್ಟ್ ರೈಡ್ ನಡೆಸಲಾಗಿದ್ದು, ಈ ವರ್ಷಾಂತ್ಯಕ್ಕೆ ಹೊಸ ಸಿಎನ್ ಜಿ ಸ್ಕೂಟರ್ ಅಂತಿಮ ರೂಪ ಪಡೆದುಕೊಳ್ಳಲಿದೆ.

ಹೊಸ ಸಿಎನ್ ಜಿ ಚಾಲಿತ ಸ್ಕೂಟರ್ ಮಾದರಿಯನ್ನು ಸದ್ಯಕ್ಕೆ ಟಿವಿಎಸ್ ಕಂಪನಿಯು ಯು740 ಕೋಡ್ ನೇಮ್ ಮೂಲಕ ವಿವಿಧ ಹಂತದ ಪರೀಕ್ಷೆಗಳನ್ನು ಕೈಗೊಳ್ಳುತ್ತಿದ್ದು, ಇದು ಪೆಟ್ರೋಲ್ ಮತ್ತು ಸಿಎನ್ ಜಿ ಮೇಲೆ ಚಾಲನೆಗೊಳ್ಳಲಿದೆ. ಹೊಸ ಸ್ಕೂಟರಿನಲ್ಲಿ ಸಿಎನ್ ಜಿ ಸಿಲಿಂಡರ್ ಅನ್ನು ಬೂಟ್ ಸ್ಪೆಸ್ ಕೆಳ ಭಾಗದಲ್ಲಿ ಜೋಡಣೆ ಮಾಡಬಹುದಾದಿದ್ದು, ಸಿಲಿಂಡರ್ ಗೆ ಹಾನಿಯಾಗದಂತೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಟಿವಿಎಸ್ ಹೊಸ ಸಿಎನ್ ಜಿ ಸ್ಕೂಟರ್ ಸಾಮಾನ್ಯ ಮಾದರಿಯಲ್ಲಿರುವಂತೆ 125 ಸಿಸಿ ಎಂಜಿನ್ ಹೊಂದಿದಲಿದ್ದು, ವಾಹನ ಮಾಲೀಕರು ಇಂಧನ ಲಭ್ಯತೆ ಆಧಾರದ ಮೇಲೆ ಪೆಟ್ರೋಲ್ ಅಥವಾ ಸಿಎನ್ ಜಿಗೆ ಸ್ವಿಚ್ ಮಾಡಿಕೊಂಡು ಚಾಲನೆ ಮಾಡಬಹುದಾಗಿದೆ. ಪ್ರತಿ ಕೆಜಿ ಸಿಎನ್ ಜಿಗೆ ಹೊಸ ಸ್ಕೂಟರ್ ಗರಿಷ್ಠ 105ರಿಂದ 110 ಕಿ.ಮೀ ಮೈಲೇಜ್ ನೀಡಬಹುದಾಗಿದ್ದು, ಇದು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ