TVS X EV Scooter: ಟಿವಿಎಸ್ ಎಕ್ಸ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಚ್ಚ ಹೊಸ ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Follow us
Praveen Sannamani
|

Updated on:Aug 25, 2023 | 8:15 PM

ಎಲೆಕ್ಟ್ರಿಕ್ ಸ್ಕೂಟರ್(Electric Scooter) ಮಾರಾಟದಲ್ಲಿ ಈಗಾಗಲೇ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಿವಿಎಸ್ ಮೋಟಾರ್(TVS Motor) ಕಂಪನಿಯು ಇದೀಗ ಹೊಸ ಎಕ್ಸ್(X) ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಮ್ಯಾಕ್ಸಿ ಸ್ಕೂಟರ್ ವೈಶಿಷ್ಟ್ಯತೆ ಹೊಂದಿರುವ ಎಕ್ಸ್ ಇವಿ ಸ್ಕೂಟರ್ ಆವೃತ್ತಿಯು ಬೆಂಗಳೂರು ಎಕ್ಸ್ ಶೋರೂಂ ಪ್ರಕಾರ ರೂ. 2,49,900 ಬೆಲೆ ಹೊಂದಿದ್ದು, ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಕಂಪನಿಯು ಐಕ್ಯೂಬ್ ಮೂಲಕ ಹಲವಾರು ಹೊಸ ದಾಖಲೆಗಳನ್ನು ನಿರ್ಮಿಸಿದ್ದು, ಇದೀಗ ಎಕ್ಸ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಪರಿಚಯಿಸಿದೆ. ಹೊಸ ಇವಿ ಸ್ಕೂಟರ್ ಮಾದರಿಯನ್ನು ಟಿವಿಎಸ್ ಕಂಪನಿ ಜಾಗತಿಕ ಮಾರುಕಟ್ಟೆಗಾಗಿ ಅಭಿವೃದ್ದಿಪಡಿಸಿದ್ದು, ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿತು. ಪ್ರೀಮಿಯಂ ಫೀಚರ್ಸ್, ಪವರ್ ಟ್ರೈನ್ ಮತ್ತು ತಂತ್ರಜ್ಞಾನದಲ್ಲಿ ಐಕ್ಯೂಬ್‌ಗಿಂತಲೂ ಹೆಚ್ಚು ಸುಧಾರಿತವಾಗಿದ್ದು, ಇಂದಿನಿಂದಲೇ ಬುಕಿಂಗ್ ದಾಖಲಿಸಬಹುದಾಗಿದೆ. ಹೊಸ ಇವಿ ಸ್ಕೂಟರ್ ವಿತರಣೆಯು ಮುಂಬರುವ ನವೆಂಬರ್ ನಲ್ಲಿ ಆರಂಭವಾಗಲಿದ್ದು, ಬುಕಿಂಗ್ ಸಲ್ಲಿಸುವ ಮೊದಲ 2,000 ಗ್ರಾಹಕರಿಗೆ ಹೆಚ್ಚುವರಿಯಾಗಿ ರೂ. 18 ಸಾವಿರ ಮೌಲ್ಯದ ವಿಶೇಷ ಪ್ಯಾಕೇಜ್ ಪ್ರಕಟಿಸಿದೆ.

TVS X electric scooter

ಇದನ್ನೂ ಓದಿ: ನಾಲ್ಕು ಹೊಸ ಓಲಾ ಎಲೆಕ್ಟ್ರಿಕ್ ಕಾನ್ಸೆಪ್ಟ್ ಬೈಕ್ ಗಳು ಅನಾವರಣ

ಹೊಸ ಎಕ್ಸ್ ಇವಿ ಸ್ಕೂಟರ್ ಮಾದರಿಗಾಗಿ ಟಿವಿಎಸ್ ಕಂಪನಿಯು ಎಕ್ಸ್ಎಲೆಟಾನ್ ಎನ್ನುವ ಪ್ಲ್ಯಾಟ್ ಫಾರ್ಮ್ ಬಳಕೆ ಮಾಡಿದ್ದು, ಇದಕ್ಕಾಗಿ ಇದು ಮ್ಯಾಕ್ಸಿ ಸ್ಕೂಟರ್ ವಿನ್ಯಾಸ ಹೊಂದಿದೆ. ಜೊತೆಗೆ ಹೊಸ ಪ್ಲ್ಯಾಟ್ ಫಾರ್ಮ್ ಬಳಕೆಯಿಂದಾಗಿ ಎಕ್ಸ್ ಇವಿ ಸ್ಕೂಟರ್ ನಲ್ಲಿ ಪಿಎಂಎಸ್ಎಂ ಎಲೆಕ್ಟ್ರಿಕ್ ಮೋಟಾರ್ ಬಳಕೆ ಮಾಡಿದ್ದು, 4.4 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ. ಇದು ಪ್ರತಿ ಚಾರ್ಜ್ ಗೆ ಗರಿಷ್ಠ 140 ಕಿ.ಮೀ ಐಡಿಸಿ ಮೈಲೇಜ್ ಹಿಂದಿರುಗಿಸಲಿದ್ದು, 3ಕೆವಿ ಫಾಸ್ಟ್ ಚಾರ್ಜರ್ ಜೋಡಣೆ ಹೊಂದಿದೆ. ಇದಲ್ಲದೆ 950ವೊಲ್ಟ್ ಪೋರ್ಟಬಲ್ ಚಾರ್ಜರ್ ಆಯ್ಕೆ ಸಹ ಲಭ್ಯವಿದ್ದು, ಫಾಸ್ಟ್ ಚಾರ್ಜರ್ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ. 50 ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ.

ಟಿವಿಎಸ್ ಕಂಪನಿಯು ಹೊಸ ಎಕ್ಸ್ ಇವಿ ಸ್ಕೂಟರ್ ಮಾದರಿಯನ್ನು ವಿಶೇಷವಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ ನಿರ್ಮಾಣ ಮಾಡಿದ್ದು, ಇದು 11ಕೆವಿ ಪವರ್ ಔಟ್ ಫುಟ್ ನೊಂದಿಗೆ 40 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದಕ್ಕಾಗಿ ಹೊಸ ಇವಿ ಸ್ಕೂಟರ್ ನಲ್ಲಿ ಎಕ್ಸ್ಟೆಲ್ತ್, ಎಕ್ಸ್ ರೈಡ್ ಮತ್ತು ಎಕ್ಸಾನಿಕ್ ಎನ್ನುವ ಮೂರು ರೈಡಿಂಗ್ ಮೋಡ್ ಗಳನ್ನು ನೀಡಲಾಗಿದ್ದು, ಇದು ಕೇವಲ 2.6 ಸೆಕೆಂಡುಗಳಲ್ಲಿ 40 ಕಿ.ಮೀ ವೇಗವನ್ನು ಸಾಧಿಸಬಲ್ಲದು. ಹಾಗೆಯೇ 60 ಕಿ.ಮೀ ವೇಗವನ್ನು ಕೇವಲ 4.5 ಸೆಕೆಂಡುಗಳಲ್ಲಿ ತಲುಪಲಿದ್ದು, ಇದರಲ್ಲಿ ಪ್ರತಿ ಗಂಟೆಗೆ 105 ಕಿ.ಮೀ ಟಾಪ್ ಸ್ಪೀಡ್ ನೀಡಲಾಗಿದೆ.

TVS X electric scooter (1)

ಇದನ್ನೂ ಓದಿ: ಆಕರ್ಷಕ ಬೆಲೆಯಲ್ಲಿ ಓಲಾ ಎಸ್1 ಏರ್ ಇವಿ ಸ್ಕೂಟರ್ ಬಿಡುಗಡೆ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಸ್ಕೂಟರ್ ಗಳಿಂತಲೂ ವಿಭಿನ್ನವಾಗಿರುವ ಟಿವಿಎಸ್ ಎಕ್ಸ್ ಇವಿ ಆವೃತ್ತಿಯು 175 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದ್ದರೆ 770 ಎಂಎಂ ಆಸನ ಎತ್ತರ ಹೊಂದಿದೆ. ಇದಕ್ಕಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಹಾಗೂ ಹಿಂಬದಿಯಲ್ಲಿ ಮೋನೊಶಾರ್ಕ್ ಸಸ್ಪೆನ್ಷನ್ ಸೆಟಪ್ ನೀಡಲಾಗಿದ್ದು, ಇದರ ಅಲಾಯ್ ವೀಲ್ಹ್ ಗಳು 100/80 ಫ್ರಂಟ್ ಟೈರ್ ಮತ್ತು 110/80 ರಿಯರ್ ಟೈರ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಬ್ರೇಕಿಂಗ್ ಸೌಲಭ್ಯಕ್ಕಾಗಿ ಹೊಸ ಇವಿ ಸ್ಕೂಟರ್ ನಲ್ಲಿ ಸಿಂಗಲ್ ಚಾನೆಲ್ ಎಬಿಎಸ್‌ನೊಂದಿಗೆ 220 ಎಂಎಂ ಫ್ರಂಟ್ ಡಿಸ್ಕ್ ಮತ್ತು 195 ಎಂಎಂ ಹಿಂಬದಿ ಡಿಸ್ಕ್ ಬ್ರೇಕ್ ನೀಡಲಾಗಿದೆ.

ಇನ್ನು ಟಿವಿಎಸ್ ಹೊಸ ಎಕ್ಸ್ ಇವಿ ಸ್ಕೂಟರ್ ನಲ್ಲಿ ಹಲವಾರು ಕನೆಕ್ಟಿಂಗ್ ಫೀಚರ್ಸ್ ನೀಡಲಾಗಿದ್ದು, ನಾವಾಪ್ರೋ ಎಂಬ ಹೊಸ ತಲೆಮಾರಿನ ಸ್ಮಾರ್ಟ್ ಕನೆಕ್ಟ್ ಪ್ಲಾಟ್‌ಫಾರ್ಮ್‌ ಪರಿಚಯಿಸಲಾಗಿದೆ. ಇದರಲ್ಲಿ 10.25 ಇಂಚಿನ ಹೆಚ್ ಡಿ ಟಿಲ್ಟ್ ಸ್ಕ್ರೀನ್ ಸೆಟಪ್‌ ನೀಡಲಾಗಿದ್ದು, ಇದು ಇನ್ಫೋಟೈನ್‌ಮೆಂಟ್ ಸಿಸ್ಟನೊಂದಿಗೆ ನ್ಯಾವಿಗೇಷನ್, ಗೇಮಿಂಗ್ ಮತ್ತು ಸಂಗೀತ ಆಲಿಸಲು ಹಲವು ಅಪ್ಲಿಕೇಶನ್‌ಗಳನ್ನು ಪಡೆದುಕೊಂಡಿದೆ. ಈ ಮೂಲಕ ಹೊಸ ಇವಿ ಸ್ಕೂಟರ್ ಮಾದರಿಯು ಸ್ಪೋರ್ಟಿ ಲುಕ್ ನೊಂದಿಗೆ ಪ್ರೀಮಿಯಂ ರೈಡಿಂಗ್ ಅನುಭವ ನೀಡಲಿದ್ದು, ಜೊತೆಗೆ ಸುರಕ್ಷಿತ ರೈಡಿಂಗ್ ಒದಗಿಸಲಿದೆ ಎನ್ನಲಿದೆ.

Published On - 8:35 pm, Thu, 24 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ