AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಟೆಸ್ಲಾ ಎಂಟ್ರಿ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಭಾರತದಲ್ಲಿ ಟೆಸ್ಲಾ ಕಂಪನಿಯು ಶೀಘ್ರದಲ್ಲಿಯೇ ತನ್ನ ಕಾರ್ಯಾಚರಣೆ ಆರಂಭಿಸುವ ಕುರಿತು ಸುಳಿವು ನೀಡಿದ್ದು, ಈ ಕುರಿತಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕಕ್ಕೆ ಟೆಸ್ಲಾ ಎಂಟ್ರಿ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
Praveen Sannamani
|

Updated on: Jun 13, 2024 | 9:52 PM

Share

ಅಮೆರಿಕದ ಅತಿದೊಡ್ಡ ಎಲೆಕ್ಟ್ರಿಕ್ ಕಾರು (Electric Cars) ಉತ್ಪಾದನಾ ಕಂಪನಿಯಾಗಿರುವ ಟೆಸ್ಲಾ (Tesla) ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ತನ್ನ ಉದ್ಯಮ ಕಾರ್ಯಾಚರಣೆ ಆರಂಭಿಸುವ ಯೋಜನೆ ರೂಪಿಸುತ್ತಿದ್ದು, ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ತನ್ನ ಹೊಸ ಯೋಜನೆಯೊಂದಿಗೆ ಭಾರತಕ್ಕೆ ಪ್ರವೇಶಿಸಲು ಮತ್ತಷ್ಟು ಉತ್ಸುಕವಾಗಿದೆ. ಹೀಗಾಗಿ ಟೆಸ್ಲಾ ಹೊಸ ಯೋಜನೆಯ ಕುರಿತಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ನೂತನ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದಲ್ಲಿ ಟೆಸ್ಲಾ ಕಾರ್ಖಾನೆ ಸ್ಥಾಪಿಸುವ ಸಾಧ್ಯತೆಗಳ ಕುರಿತು ಪ್ರಶ್ನಿಸಿದಾಗ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ ಅವರು ಹೌದು, ನಮ್ಮ ರಾಜ್ಯದಲ್ಲಿ ಸ್ಥಾಪನೆಯಾಗುವ ಎಲ್ಲಾ ಅವಕಾಶಗಳಿದ್ದು, ಅದನ್ನು ಕಾರ್ಯರೂಪಕ್ಕೆ ತರಲು ನಾವು ಶ್ರಮಿಸುತ್ತೇವೆ’ ಎಂದಿದ್ದಾರೆ. ಮುಂದುವರೆದು ಇದೀಗ ನನ್ನ ಅಭಿವೃದ್ದಿ ಕಾಳಜಿ ನನ್ನ ರಾಜ್ಯ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ, ಇಡೀ ದೇಶದ ಬೆಳವಣಿಗೆಗೆ ನಾವು ಗಮನಹರಿಸಬೇಕಾದ ಅವಶ್ಯವಿದೆ. ಹೀಗಾಗಿ ನಾನು ಸ್ವಾರ್ಥಿಯಾಗದೆ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದಿದ್ದಾರೆ.

ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ವಿಶೇಷ ಅಭಿನಂದನೆ ಸಲ್ಲಿಸುವ ಮೂಲಕ ಭಾರತದಲ್ಲಿ ಹೊಸ ಅಧ್ಯಾಯ ಆರಂಭಿಸುವ ಕುರಿತಾಗಿ ಟೆಸ್ಲಾ ಸಿಇಓ ಎಲಾನ್ ಮಸ್ಕ್ ಸುಳಿವು ಕೊಟ್ಟಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಚುನಾವಣೆಯಲ್ಲಿ ವಿಜಯ ಸಾಧಿಸಿದಕ್ಕೆ ನಿಮಗೆ ಅಭಿನಂದನೆ ಎಂದಿರುವ ಎಲಾನ್ ಮಸ್ಕ್ ಅವರು ಭಾರತದಲ್ಲಿ ಟೆಸ್ಲಾ ಕಂಪನಿಯು ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ ಅಂತಾ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಎಲಾನ್ ಮಸ್ಕ್ ಅಭಿನಂದನೆಗೆ ಪ್ರಧಾನಿ ಮೋದಿ ಕೂಡಾ ಧನ್ಯವಾದಗಳನ್ನು ತಿಳಿಸಿದ್ದು, ಟೆಸ್ಲಾ ಹೊಸ ಉದ್ಯಮ ವ್ಯವಹಾರದ ಪ್ರಸ್ತಾಪವನ್ನು ಸ್ವಾಗತಿಸಿದ್ದಾರೆ. ಹೀಗಾಗಿ ಟೆಸ್ಲಾ ಕಂಪನಿಯು ಭಾರತದಲ್ಲಿ ಇವಿ ಕಾರು ಉತ್ಪಾದನೆ ಕೈಗೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೆ ಯಾವ ರಾಜ್ಯದಲ್ಲಿ ಹೊಸ ಕಾರು ಉತ್ಪಾದನಾ ಘಟಕ ತೆರೆಯಲಿದೆ ಎನ್ನುವುದು ಇನ್ನು ಕೂಡಾ ಅಂತಿಮವಾಗಿಲ್ಲ. ಇದಕ್ಕಾಗಿ ಈಗಾಗಲೇ ಪ್ರಮುಖ ಕೈಗಾರಿಕೆ ವಲಯಗಳನ್ನು ಹೊಂದಿರುವ ರಾಜ್ಯಗಳನ್ನು ಸಂಪರ್ಕಿಸಲಾಗುತ್ತಿದ್ದು, ಹೊಸ ಯೋಜನೆಗಾಗಿ ಟೆಸ್ಲಾ ಕಂಪನಿಯು ಆರಂಭಿಕ ಬಂಡವಾಳವಾಗಿ ಬರೋಬ್ಬರಿ 2 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡುತ್ತಿದೆ.