Upcoming Cars: ಬಿಡುಗಡೆಗೆ ಸಿದ್ದವಾಗಿವೆ ಟಾಪ್ 5 ಬಹುನೀರಿಕ್ಷಿತ ಹೊಸ ಕಾರುಗಳು!

ಭಾರತದಲ್ಲಿ ಶೀಘ್ರದಲ್ಲಿಯೇ ಹಲವು ಹೊಸ ಕಾರು ಮಾದರಿಗಳು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರುಗಳು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

Upcoming Cars: ಬಿಡುಗಡೆಗೆ ಸಿದ್ದವಾಗಿವೆ ಟಾಪ್ 5 ಬಹುನೀರಿಕ್ಷಿತ ಹೊಸ ಕಾರುಗಳು!
ಟಾಪ್ 5 ಬಹುನೀರಿಕ್ಷಿತ ಹೊಸ ಕಾರುಗಳು!
Follow us
|

Updated on: Oct 28, 2023 | 9:15 PM

ಹೊಸ ವಾಹನಗಳ (New Vehicles) ಮಾರಾಟ ಪ್ರಮಾಣವು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು (New Cars) ಬಿಡುಗಡೆಗೆ ಸಿದ್ದವಾಗುತ್ತಿವೆ. ಹೊಸ ಕಾರುಗಳು ಈ ವರ್ಷಾಂತ್ಯಕ್ಕೆ ಇಲ್ಲವೇ 2024ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರುಗಳ ನೀರಿಕ್ಷಿತ ಬಿಡುಗಡೆ ದಿನಾಂಕ, ತಾಂತ್ರಿಕ ಮಾಹಿತಿ ಮತ್ತು ಅಂದಾಜು ಬೆಲೆಯ ಮತ್ತಷ್ಟು ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಟಾಟಾ ಕರ್ವ್ ಕೂಪೆ

ಟಾಟಾ ಮೋಟಾರ್ಸ್ ತನ್ನ ಬಹುನೀರಿಕ್ಷಿತ ಕರ್ವ್ ಕಾನ್ಸೆಪ್ಟ್(Curvv Concept) ಆವೃತ್ತಿಯನ್ನು ಬಿಡುಗಡೆ ಮಾಡಲು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಆರಂಭಿಸಿದ್ದು, ಹೊಸ ಕಾರು ಮಾದರಿಯು ಕೂಪೆ ಎಸ್ ಯುವಿ ವೈಶಿಷ್ಟ್ಯತೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳು ನೀರಿಕ್ಷೆಯಲ್ಲಿದೆ. 2023ರ ಆಟೋ ಎಕ್ಸ್ ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಕರ್ವ್ ಕಾನ್ಸೆಪ್ಟ್ ಕಾರು ಮೊದಲ ಹಂತದಲ್ಲಿ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗಲಿದ್ದು, ತದನಂತರ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.

ಕರ್ವ್ ಕೂಪೆ ಮಾದರಿಯು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಸ್ಕೋಡಾ ಕುಶಾಕ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಚ್ಚ ಹೊಸ 1.5 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ. ಈ ಮೂಲಕ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10 ಲಕ್ಷದಿಂದ ರೂ. 17 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಟಾಟಾ ಮೋಟಾರ್ಸ್ ಮತ್ತಷ್ಟು ಬೇಡಿಕೆ ತಂದುಕೊಡಲಿದೆ.

ಇದನ್ನೂ ಓದಿ: ಫೀಚರ್ಸ್ ವಿಚಾರದಲ್ಲಿ ಮಹೀಂದ್ರಾ ಎಕ್ಸ್ ಯುವಿ700 ಹಿಂದಿಕ್ಕಿದ ಟಾಟಾ ಸಫಾರಿ

ನ್ಯೂ ಜನರೇಷನ್ ಮಾರುತಿ ಸುಜುಕಿ ಸ್ವಿಫ್ಟ್

ಜನಪ್ರಿಯ ಕಾರು ಮಾದರಿಯಾಗಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಶೀಘ್ರದಲ್ಲಿಯೇ ನಾಲ್ಕನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿದೆ. ಹೊಸ ಸ್ವಿಫ್ಟ್ ಮಾದರಿಯು ಹಲವಾರು ಬದಲಾವಣೆಗಳೊಂದಿಗೆ ನವೀಕೃತ ಎಂಜಿನ್ ಆಯ್ಕೆಯನ್ನು ಪಡೆದುಕೊಂಡಿದ್ದು, ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಜೆಡ್ ಸೀರಿಸ್ ತ್ರಿ ಸಿಲಿಂಡರ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಹೆಚ್ಚಿನ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ನಲ್ಲೂ ಗ್ರಾಹಕರನ್ನು ಸೆಳೆಯಲಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ ಇದು ಗರಿಷ್ಟ 40 ಕಿ.ಮೀ ಮೈಲೇಜ್ ಹಿಂದಿರುಗಿಸುವ ನೀರಿಕ್ಷೆಯಲ್ಲಿದ್ದು, ಹಲವಾರು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್

ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕ್ರೆಟಾ ಕಾರು ಶೀಘ್ರದಲ್ಲಿಯೇ ಫೇಸ್‌ಲಿಫ್ಟ್ ಆವೃತ್ತಿ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಕಾರು ಹ್ಯುಂಡೈ ನಿರ್ಮಾಣದ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಪಾಲಿಸೇಡ್ ಎಸ್‌ಯುವಿಯಿಂದ ಹಲವಾರು ವಿನ್ಯಾಸ ಅಂಶಗಳನ್ನು ಎರವಲು ಪಡೆದಿದ್ದು, ಇದು ಭರ್ಜರಿ ಪರ್ಫಾಮೆನ್ಸ್ ಪ್ರೇರಿತ ಎಂಜಿನ್ ನೊಂದಿಗೆ ತಾಂತ್ರಿಕ ಅಂಶಗಳಲ್ಲೂ ಗಮನಸೆಳೆಯಲಿದೆ. ಹೊಸ ಆವೃತ್ತಿಯಲ್ಲಿ ಈ ಬಾರಿ ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಸೇರಿದಂತೆ ಹಲವಾರು ಬದಲಾವಣೆಗಳಿರಲಿದ್ದು, ಇದು 2024ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಸ್‌ಯುವಿ ಮಾದರಿಗಳ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಕಂಪನಿಯು ನ್ಯೂ ಜನರೇಷನ್ ಥಾರ್ ಮಾದರಿಯಲ್ಲಿ 5 ಡೋರ್ ವರ್ಷನ್ ಪರಿಚಯಿಸುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಥಾರ್ ಕಾರು ಮಾದರಿಯು 3 ಡೋರ್ ವರ್ಷನ್ ನಲ್ಲಿ ಮಾತ್ರ ಮಾರಾಟಗೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಇದೀಗ 5 ಡೋರ್ ವರ್ಷನ್ ಸಹ ಅಭಿವೃದ್ದಿಪಡಿಸಲಾಗುತ್ತಿದೆ. ಇದು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹೆಚ್ಚಿನ ವ್ಹೀಲ್ ಬೆಸ್ ನೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದ್ದು, ಕುಟುಂಬ ಸಮೇತರಾಗಿ ಪ್ರಯಾಣಿಸಲು ಅನುಕೂಲಕರವಾಗಲಿದೆ.

ಇದನ್ನೂ ಓದಿ: ಎಂಜಿ ಜೆಡ್ಎಸ್ ಇವಿ ಮೇಲೆ ಭರ್ಜರಿ ಆಫರ್- ರೂ. 2.30 ಲಕ್ಷ ಬೆಲೆ ಇಳಿಕೆ..

ಫೋರ್ಸ್ ಗೂರ್ಖಾ 5 ಡೋರ್ ವರ್ಷನ್

ಹೊಸ ಗೂರ್ಖಾ ಆಫ್ ರೋಡ್ ಎಸ್‌ಯುವಿ ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ 5 ಡೋರ್ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಸದ್ಯ ಮಾರುಕಟ್ಟೆಯಲ್ಲಿ 3 ಡೋರ್ ವರ್ಷನ್ ನಲ್ಲಿ ಮಾತ್ರ ಮಾರಾಟವಾಗುತ್ತಿರುವ ಗೂರ್ಖಾ ಕಾರು ಇದೀಗ 5 ಡೋರ್ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದೆ. ಆಫ್-ರೋಡ್ ಪ್ರಿಯರನ್ನು ಸೆಳೆಯುತ್ತಿರುವ ಗೂರ್ಖಾ ಕಾರು 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಇದೀಗ ಹೊಸ ಆವೃತ್ತಿಯೊಂದಿಗೆ ಮಹೀಂದ್ರಾ ಥಾರ್ ಕಾರಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ