Upcoming Cars: ಭಾರತದಲ್ಲಿ ಬಿಡುಗಡೆಗಾಗಿ ಸಿದ್ದಗೊಂಡಿರುವ ಹೊಸ ಕಾರುಗಳಿವು!

ಭಾರತದಲ್ಲಿ ಶೀಘ್ರದಲ್ಲಿ ಮತ್ತಷ್ಟು ಹೊಸ ಕಾರುಗಳು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಈ ತಿಂಗಳಾಂತ್ಯಕ್ಕೆ ಪ್ರಮುಖ ಕಾರುಗಳ ಇವಿ ವರ್ಷನ್ ಮತ್ತು ಸಿಎನ್ ಜಿ ವರ್ಷನ್ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

Upcoming Cars: ಭಾರತದಲ್ಲಿ ಬಿಡುಗಡೆಗಾಗಿ ಸಿದ್ದಗೊಂಡಿರುವ ಹೊಸ ಕಾರುಗಳಿವು!
ಭಾರತದಲ್ಲಿ ಬಿಡುಗಡೆಗಾಗಿ ಸಿದ್ದಗೊಂಡಿರುವ ಹೊಸ ಕಾರುಗಳಿವು!
Follow us
Praveen Sannamani
|

Updated on:Dec 02, 2022 | 6:29 PM

ಕಾರು ಮಾರುಕಟ್ಟೆಯು ಸಾಕಷ್ಟು ಸುಧಾರಿಸಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಕಾರು(New Cars) ಮಾದರಿಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಯ ಜೊತೆಗೆ ಎಲೆಕ್ಟ್ರಿಕ್(Electric Cars) ಮತ್ತು ಸಿಎನ್​ಜಿ(CNG) ಮಾದರಿಗಳು ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳು ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವುವು? ಹೊಸ ಕಾರುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಟೊಯೊಟಾ ಹೈರೈಡರ್ ಸಿಎನ್​ಜಿ

ಟೊಯೊಟಾ ಕಂಪನಿಯು ತನ್ನ ಹೊಸ ಹೈರಡರ್ ಎಸ್ ಯುವಿಯಲ್ಲಿ ಸಿಎನ್​ಜಿ ವರ್ಷನ್ ಬಿಡುಗಡೆ ಮಾಡುವ ಯೋಜನೆ ಪ್ರಕಟಿಸಿದ್ದು, ಹೊಸ ಕಾರು ಖರೀದಿಗೆ ಬುಕಿಂಗ್ ಸಹ ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹೈರಡರ್ ಎಸ್ ಯುವಿಯು ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ವರ್ಷನ್ ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಇದೀಗ ಕಂಪನಿಯು ಮಾರುತಿ ಸುಜುಕಿ ಜೊತೆಗೂಡಿ ಸಿಎನ್ ಜಿ ಮಾದರಿಯನ್ನು ಅಭಿವೃದ್ದಿಪಡಿಸುತ್ತಿದೆ. ಹೊಸ ಕಾರು ಅತ್ಯುತ್ತಮ ಇಂಧನ ದಕ್ಷತೆ ಹೊಂದಿರಲಿದ್ದು, ಸ್ಟ್ಯಾಂಡರ್ಡ್ ಮಾದರಿಯ ಎಸ್ ಮತ್ತು ಜಿ ವೆರಿಯೆಂಟ್ ಗಳನ್ನು ಆಧರಿಸಿ ಬಿಡುಗಡೆಯಾಗಬಹುದಾಗಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಸಿಎನ್​ಜಿ

ಭಾರತದಲ್ಲಿ ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಶೀಘ್ರದಲ್ಲಿಯೇ ಗ್ರ್ಯಾಂಡ್ ವಿಟಾರಾದಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಗ್ರ್ಯಾಂಡ್ ವಿಟಾರಾದಲ್ಲಿ ಸದ್ಯ ಸಾಮಾನ್ಯ ಪೆಟ್ರೋಲ್ ಜೊತೆ ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಮಾರಾಟ ಮಾಡಲಾಗುತ್ತಿದ್ದು, ಇದೀಗ ಸಿಎನ್ ಜಿ ವರ್ಷನ್ ಪರಿಚಯಿಸಲಾಗುತ್ತಿದೆ. ಈ ಮೂಲಕ ನೆಕ್ಸಾ ಶ್ರೇಣಿಯಲ್ಲೂ ಸಿಎನ್ ಜಿ ಮಾದರಿಗಳ ಮಾರಾಟ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಎಂಜಿ ಹೆಕ್ಟರ್ ಫೇಸ್ ಲಿಫ್ಟ್

ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲಿಯೇ ಹೆಕ್ಟರ್ ಎಸ್ ಯುವಿ ಫೇಸ್ ಲಿಫ್ಟ್ ಬಿಡುಗಡೆ ಮಾಡಲಿದ್ದು, ಹೊಸ ಕಾರು ಪ್ರಮುಖ ಫೀಚರ್ಸ್ ಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ. ಹೊಸ ಕಾರಿನಲ್ಲಿ ಕಂಪನಿಯು ಈ ಬಾರಿ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಜೋಡಣೆ ಮಾಡಲಿದ್ದು, ಜೊತೆಗೆ ವಿನ್ಯಾಸದಲ್ಲೂ ತುಸು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ. ಆದರೆ ಹೊಸ ಕಾರಿನ ಎಂಜಿನ್ ಆಯ್ಕೆಯಲ್ಲಿ ಬದಲಾವಣೆ ಮಾಡಿಲ್ಲವಾದರೂ ಹೆಚ್ಚಿನ ಸುರಕ್ಷಾ ಫೀಚರ್ಸ್ ಹೊಂದಿರಲಿದೆ.

ಬಿಎಂಡಬ್ಲ್ಯು ಎಕ್ಸ್7 ಫೇಸ್ ಲಿಫ್ಟ್

ಐಷಾರಾಮಿ ಎಸ್ ಯುವಿ ವಿಭಾಗದಲ್ಲಿ ಹೆಚ್ಚಿನ ಬೇಡಿಕೆ ಹೊಂದಿರುವ ಎಕ್ಸ್7 ಶೀಘ್ರದಲ್ಲಿಯೇ ಫೇಸ್ ಲಿಫ್ಟ್ ಆವೃತ್ತಿ ಪಡೆದುಕೊಳ್ಳಲಿದ್ದು, ಹೊಸ ಕಾರು ಇದೇ ತಿಂಗಳು 10ರಂದು ಅಧಿಕೃತವಾಗಿ ಬಿಡುಗಡೆಯಾದಲಿದೆ. ಹೊಸ ಕಾರಿನಲ್ಲಿ ಕಂಪನಿಯ ಮರುವಿನ್ಯಾಸಗೊಳಿಸಲಾದ ಫ್ರಂಟ್ ಮತ್ತು ರಿಯರ್ ಬಂಪರ್, ಟೈಲ್ ಗೇಟ್ ಮತ್ತು ಸ್ಪೋರ್ಟಿ ಶೈಲಿಯ ಅಲಾಯ್ ವ್ಹೀಲ್ ನೀಡಲಾಗುತ್ತಿದೆ. ಜೊತೆಗೆ ಹೊಸ ಕಾರಿನಲ್ಲಿ ಉತ್ತಮ ಇಂಧನ ದಕ್ಷತೆಗಾಗಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ನೀಡಲಾಗುತ್ತಿದ್ದು, ರೂ. 1.20 ಕೋಟಿಯಿಂದ ರೂ. 2 ಕೋಟಿ ಬೆಲೆ ಹೊಂದಿರಬಹುದಾಗಿದೆ.

ಬಿಎಂಡಬ್ಲ್ಯು ಎಕ್ಸ್ಎಂ

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಬಿಎಂಡಬ್ಲ್ಯು ಎಕ್ಸ್ಎಂ ಎಸ್ ಯುವಿ ಮಾದರಿಯು ಇದೀಗ ಭಾರತದಲ್ಲೂ ಬಿಡುಗಡೆಗೂ ಸಿದ್ದವಾಗುತ್ತಿದೆ. ಹೊಸ ಎಕ್ಸ್ಎಂ ಆವೃತ್ತಿಯು ಇದೇ ತಿಂಗಳು 10 ರಂದು ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಹೊಸ ಕಾರು 4.4 ಲೀಟರ್ ಟ್ವಿನ್ ಟರ್ಬೊ ಪೆಟ್ರೋಲ್ ಜೊತೆಗೆ ಹೈಬ್ರಿಡ್ ತಂತ್ರಜ್ಞಾನ ಹೊಂದಿರಲಿದೆ. ಇದು 653 ಹಾರ್ಸ್ ಪವರ್ ಉತ್ಪಾದಿಸಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 1.25 ಕೋಟಿ ಆರಂಭಿಕ ಬೆಲೆ ಹೊಂದಿರಲಿದೆ.

Published On - 2:44 pm, Fri, 2 December 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ