AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Cars: ಮಾರ್ಚ್ ನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಭಾರತದಲ್ಲಿ ಹೊಸ ಕಾರುಗಳ ಖರೀದಿ ಟ್ರೆಂಡ್ ಹೆಚ್ಚುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರಗಳು ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿವೆ. ಹೊಸ ಕಾರುಗಳಲ್ಲಿ ಪ್ರಮುಖ ಆವೃತ್ತಿಗಳು ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರುಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

Praveen Sannamani
|

Updated on:Mar 14, 2023 | 8:42 PM

Share

ಮಾಲಿನ್ಯ ತಗ್ಗಿಸುವ ಸಂಬಂಧ ಹೊಸ ವಾಹನಗಳಿಗೆ ಏಪ್ರಿಲ್ 1ರಿಂದ ಆರ್ ಡಿಇ(RDE) ಮಾನದಂಡ ಜಾರಿಗೆ ತರಲಾಗುತ್ತಿದ್ದು, ಹೊಸ ಮಾನದಂಡಗಳನ್ನ ಪೂರೈಸಿರುವ ಪ್ರಮುಖ ವಾಹನಗಳು ಇದೀಗ ಮಾರುಕಟ್ಟೆ ಪ್ರವೇಶಿಸುತ್ತಿವೆ. ಇದರ ಜೊತೆಗೆ ವಿನೂತನ ವೈಶಿಷ್ಟ್ಯತೆ ಒಳಗೊಂಡ ಹೊಚ್ಚ ಹೊಸ ಕಾರು ಮಾದರಿಗಳು ಸಹ ಬಿಡುಗಡೆಯ ಸಿದ್ದತೆಯಲ್ಲಿದ್ದು, ಈ ತಿಂಗಳಾಂತ್ಯಕ್ಕೆ ಐದಕ್ಕೂ ಹೆಚ್ಚು ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ.

ಮಾರುತಿ ಸುಜುಕಿ ಫ್ರಾಂಕ್ಸ್

ಈ ತಿಂಗಳಾಂತ್ಯಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಪ್ರಮುಖ ಆವೃತ್ತಿಯಾಗಿದೆ. ಇದು ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ ಯುವಿ ವಿಭಾಗಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು ಒನ್ ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ. ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ. ಈ ಮೂಲಕ ಹೊಸ ಕಾರು ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ ಯುವಿ ತ್ರಿ ಡಬಲ್ ಒ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಟೊಯೊಟಾ ಇನೋವಾ ಕ್ರಿಸ್ಟಾ

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಟೊಯೊಟಾ ಹೊಸ ಇನೋವಾ ಕ್ರಿಸ್ಟಾ ಕೂಡಾ ಪ್ರಮುಖ ಆವೃತ್ತಿಯಾಗಿದೆ. ಸದ್ಯ ಟೊಯೊಟಾ ಕಂಪನಿಯು ಹೊಸ ಇನೋವಾ ಹೈಕ್ರಾಸ್ ಬಿಡುಗಡೆ ಮಾಡಿದ್ದು, ಹೊಸ ಕಾರಿನ ಜೊತೆಗೆ ಈ ಹಿಂದಿನ ಇನೋವಾ ಕ್ರಿಸ್ಟಾ ಕಾರನ್ನ ನವೀಕರಣದೊಂದಿಗೆ ಮಾರಾಟವನ್ನು ಸಹ ಮುಂದುವರಿಸಲು ನಿರ್ಧರಿಸಿದೆ. ಹೊಸ ಇನೋವಾ ಹೈಕ್ರಾಸ್ ಕಾರನ್ನ ಸದ್ಯ ಪೆಟ್ರೋಲ್ ಮತ್ತು ಹೈಬ್ರಿಡ್ ನಲ್ಲಿ ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಹೊಸ ಇನೋವಾ ಕ್ರಿಸ್ಟಾ ಕಾರನ್ನ 2.4 ಲೀಟರ್ ಡೀಸೆಲ್ ಎಂಜಿನ್ ನೊಂದಿಗೆ ಮರುಪರಿಚಯಿಸುತ್ತಿದೆ.

ಮಾರುತಿ ಸುಜುಕಿ ಬ್ರೆಝಾ ಸಿಎನ್ ಜಿ

ಮಾರ್ಚ್ ನಲ್ಲಿ ಬಿಡುಗಡೆಯಾಗಲಿರುವ ಕಾರುಗಳ ಪಟ್ಟಿಯಲ್ಲಿ ಮತ್ತೊಂದು ಪ್ರಮುಖ ಕಾರು ಮಾದರಿ ಅಂದ್ರೆ ಅದು ಮಾರುತಿ ಸುಜುಕಿ ಬ್ರೆಝಾ ಸಿಎನ್ ಜಿ. ಈ ಹೊಸ ಕಾರನ್ನ ಮಾರುತಿ ಸುಜುಕಿ ಕಂಪನಿಯು 2023ರ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಕಂಪನಿಯು ಹೊಸ ಕಾರನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದ್ದು, ಹೊಸ ಕಾರು ಅತ್ಯುತ್ತಮ ಮೈಲೇಜ್ ನೊಂದಿಗೆ ತುಸು ದುಬಾರಿ ಎನ್ನಿಸಲಿದೆ.

2023ರ ಹ್ಯುಂಡೈ ವೆರ್ನಾ

ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ನವೀಕೃತ ಹ್ಯುಂಡೈ ವೆರ್ನಾ ಕೂಡಾ ಪ್ರಮುಖವಾಗಿದೆ. ಇದು 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿದೆ. ಹೊಸ ಆವೃತ್ತಿಯು ಸಂಪೂರ್ಣ ಬದಲಾವಣೆಗೊಂಡ ಹೊರ ವಿನ್ಯಾಸದೊಂದಿಗೆ ಮಿಂಚಲಿದ್ದು, ಇದು ಹೊಸ ಹೋಂಡಾ ಸಿಟಿ ಕಾರಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಿದೆ.

ಟಾಟಾ ಪಂಚ್ ಇವಿ

ಹೊಸ ಕಾರುಗಳ ಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ನಿರ್ಮಾಣದ ಪಂಚ್ ಇವಿ ಸಹ ಒಂದಾಗಿದೆ. ಸದ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಹೊಂದಿರುವ ಪಂಚ್ ಕಾರು ಮುಂಬರುವ ದಿನಗಳಲ್ಲಿ CNG ಜೊತೆಗೆ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವ ಸಿದ್ದತೆಯಲ್ಲಿದೆ. ಹೊಸ ಪಂಚ್ ಇವಿ ಕಾರು ಟಿಯಾಗೋ ಇವಿ ಕಾರಿನಲ್ಲಿರುವಂತೆ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್ ಗೆ 280 ರಿಂದ 350 ಕಿ.ಮೀ ಮೈಲೇಜ್ ನೀಡಲಿದೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 13 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳು ನೀರಿಕ್ಷೆಯಿದೆ.

Published On - 8:42 pm, Tue, 14 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ