Upcoming Cars: ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಮುಂಬರುವ ಮೇ ತಿಂಗಳಿನಲ್ಲಿ ಭಾರತದಲ್ಲಿ ಹಲವು ಹೊಸ ಕಾರುಗಳು ಬಿಡುಗಡೆಗಾಗಿ ಸಿದ್ದವಾಗಿದ್ದು, ಬಿಡುಗಡೆಯಾಗಲಿರುವ ಕಾರುಗಳ ಮಾಹಿತಿ ಇಲ್ಲಿದೆ.

Upcoming Cars: ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!
ಬಹುನೀರಿಕ್ಷಿತ ಕಾರುಗಳಿವು!
Follow us
Praveen Sannamani
|

Updated on:Apr 29, 2024 | 5:47 PM

ಭಾರತದಲ್ಲಿ ಕಾರುಗಳ ಮಾರಾಟ ಅಬ್ಬರ ಜೋರಾಗಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಚ್ಚ ಹೊಸ ಕಾರು ಮಾದರಿಗಳು (New Cars) ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿವೆ. ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಮಹೀಂದ್ರಾ, ಟಾಟಾ ನಿರ್ಮಾಣದ ವಿವಿಧ ಕಾರುಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದ್ದು, ಹೊಸ ಕಾರುಗಳ ಮತ್ತಷ್ಟು ಮಾಹಿತಿ ಇಲ್ಲಿದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಮಾರುತಿ ಸುಜುಕಿ ಹೊಸ ತಲೆಮಾರಿನ ಸ್ವಿಫ್ಟ್ ಕಾರು ಪ್ರಮುಖವಾಗಿದೆ. ಹೊಸ ಸ್ವಿಫ್ಟ್ ಕಾರಿನಲ್ಲಿ ಜೆಡ್ ಸೀರಿಸ್ ನಲ್ಲಿರುವ 1.2 ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ. ಇದು ಪ್ಯೂರ್ ಪೆಟ್ರೋಲ್ ಮತ್ತು ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಜೊತೆಗೆ ಹೊಸ ಸ್ವಿಫ್ಟ್ ಕಾರಿನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲೂ ಭಾರೀ ಬದಲಾವಣೆಗಳನ್ನು ತರಲಾಗಿದ್ದು, ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ಟಾಟಾ ಆಲ್ಟ್ರೋಜ್ ರೇಸರ್ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ನವೀಕೃತ ವಿನ್ಯಾಸದ ಆಲ್ಟ್ರೊಜ್ ಫೇಸ್ ಲಿಫ್ಟ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಹೊಸ ಕಾರಿನಲ್ಲಿ ಈ ಬಾರಿ ಸ್ಟ್ಯಾಂಡರ್ಡ್ ಆವೃತ್ತಿಯ ಜೊತೆಗೆ ರೇಸರ್ ಎಡಿಷನ್ ಸಹ ಬಿಡುಗಡೆಯಾಗಲಿದ್ದು, ಇದು ಟರ್ಬೊ ಪೆಟ್ರೋಲ್ ಎಂಜಿನ್ ನೊಂದಿಗೆ ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ. ಹೊಸ ಕಾರಿನಲ್ಲಿ ಈ ಬಾರಿ 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್ ಸ್ಟ್ರಮೆಂಟ್ ಕ್ಲಸ್ಟರ್, ಫ್ರಂಟ್ ವೆಂಟಿಲೆಷನ್ ಸೀಟುಗಳು ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದ್ದು, ಸುರಕ್ಷತೆಗಾಗಿ ಆರಂಭಿಕ ವೆರಿಯೆಂಟ್ ನಲ್ಲೂ 6 ಏರ್ ಬ್ಯಾಗ್ ಗಳನ್ನು ಜೋಡಿಸಲಾಗುತ್ತಿದೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 7.50 ಲಕ್ಷದಿಂದ ರೂ. 11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದಾದಿದೆ.

ಇದನ್ನೂ ಓದಿ: ಭಾರತದಲ್ಲಿ ಜನಪ್ರಿಯವಾಗಿರುವ ಟಾಪ್ 5 ಕಳಪೆ ಕಾರುಗಳಿವು!

ಫೋರ್ಸ್ ಗೂರ್ಖಾ 5 ಡೋರ್ ವರ್ಷನ್ ಫೋರ್ಸ್‌ ಮೋಟಾರ್ಸ್ ಕಂಪನಿಯು ತನ್ನ ಹೊಸ ಗೂರ್ಖಾ 5 ಡೋರ್ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಇದು ನವೀಕೃತ ಎಂಜಿನ್ ಆಯ್ಕೆ ಜೊತೆಗೆ 7 ಸೀಟರ್ ಸೌಲಭ್ಯದೊಂದಿಗೆ ಮೇ ಮಧ್ಯಂತರದಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಹೊಸ ಕಾರು ಈ ಹಿಂದಿನಂತೆ 5 ಆಸನ ಹೊಂದಿರುವ 3 ಡೋರ್ ವರ್ಷನ್ ಕೂಡಾ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ 2.6 ಲೀಟರ್ ಡೀಸೆಲ್ ಎಂಜಿನ್ ನೀಡಲಾಗಿದೆ. ಹಾಗೆಯೇ ಹೊಸ 5 ಡೋರ್ ಮಾದರಿಯು 3 ಡೋರ್ ಮಾದರಿಗಿಂತ 425 ಎಂಎಂ ಹೆಚ್ಚುವರಿ ಉದ್ದಳತೆ ಹೊಂದಿದ್ದು, ಇದರಲ್ಲಿ 18 ಇಂಚಿನ ಅಲಾಯ್ ವ್ಹೀಲ್ ಮತ್ತು 9 ಇಂಚಿನ ಟಚ್ ಸ್ಕ್ರೀನ್ ಮತ್ತು ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ಹೊಂದಿರಲಿದೆ.

ಹ್ಯುಂಡೈ ಕೊನಾ ಇವಿ ಫೇಸ್ ಲಿಫ್ಟ್ ದಕ್ಷಿಣ ಕೊರಿಯಾದ ಹ್ಯುಂಡೈ ಕಂಪನಿ ಭಾರತದಲ್ಲಿ ತನ್ನ ನವೀಕೃತ ಕೊನಾ ಇವಿಯನ್ನು ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ನವೀಕೃತ ಕೊನಾ ಇವಿ ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಂಡಿದ್ದು, ಇದೀಗ ಭಾರತದಲ್ಲೂ ಲಗ್ಗೆಯಿಡಲು ಸಜ್ಜಾಗುತ್ತಿದೆ. ಹೊಸ ಆವೃತ್ತಿಯಲ್ಲಿ ಎಂಜಿ ಜೆಡ್ಎಸ್ ಇವಿ ಪೈಪೋಟಿಯಾಗಿ ಹೆಚ್ಚಿನ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ನೀಡುತ್ತಿದ್ದು, ಹಲವಾರು ಸುರಕ್ಷಾ ಫೀಚರ್ಸ್ ಗಳನ್ನು ಹೊಂದಿರಲಿದೆ.

ಇದನ್ನೂ ಓದಿ: ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಭರ್ಜರಿ ರೇಟಿಂಗ್ಸ್ ಪಡೆದುಕೊಂಡ ಹೊಸ ಮಾರುತಿ ಸುಜುಕಿ ಸ್ವಿಫ್ಟ್

ಟಾಟಾ ನೆಕ್ಸಾನ್ ಸಿಎನ್ ಜಿ ಹೊಸ ಕಾರುಗಳಲ್ಲಿ ನೆಕ್ಸಾನ್ ಸಿಎನ್​ಜಿ ಆವೃತ್ತಿ ಕೂಡಾ ಒಂದಾಗಿದೆ. ಹೊಸ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದ್ದು, ಇದು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಐ ಸಿಎನ್​ಜಿ ಕಿಟ್ ಪಡೆದುಕೊಳ್ಳಲಿದೆ. ಇದು ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 25 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿದ್ದು, ಎಲ್ಲಾ ಮಾದರಿಯಲ್ಲೂ ಖರೀದಿಗೆ ಲಭ್ಯವಿರುವ ಏಕೈಕ ಕಾರು ಮಾದರಿಯಾಗಿರಲಿದೆ. ನೆಕ್ಸಾನ್ ಕಾರು ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಈಗಾಗಲೇ ಲಭ್ಯವಿದ್ದು, ಇದೀಗ ಸಿಎನ್ ಜಿ ಆಯ್ಕೆಯನ್ನು ಸಹ ಪಡೆದುಕೊಳ್ಳುತ್ತಿದೆ.

Published On - 5:38 pm, Mon, 29 April 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ