Upcoming Cars: ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿವೆ ಈ ಮೂರು ಬಹುನೀರಿಕ್ಷಿತ ಕಾರುಗಳು!
ಭಾರತದಲ್ಲಿ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಪ್ರಮುಖ ಕಾರು ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿವೆ.
ಹೊಸ ಕಾರುಗಳ(New Cars) ಮಾರಾಟವು ಸಾಕಷ್ಟು ಸುಧಾರಿಸಿರುವುದರಿಂದ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದ್ದು, ಈ ತಿಂಗಳಾಂತ್ಯಕ್ಕೆ ಪ್ರಮುಖ ಕಾರು ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸಲಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಕಾರುಗಳ ಜೊತೆಗೆ ಸಿಎನ್ ಜಿ(CNG), ಹೈಬ್ರಿಡ್(Hybrid) ಕಾರುಗಳು ಸಹ ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಹೊಸ ಕಾರುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಟೊಯೊಟಾ ಇನೋವಾ ಹೈಕ್ರಾಸ್
ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಟೊಯಾಟಾ ಇನೋವಾ ಹೈಕ್ರಾಸ್ ಎಂಪಿವಿ ಪ್ರಮುಖ ಆವೃತ್ತಿಯಾಗಿದೆ. ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಮಾದರಿಗಿಂತಲೂ ವಿಭಿನ್ನವಾಗಿದ್ದು, ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ. ಹೊಸ ಇನೋವಾ ಹೈಕ್ರಾಸ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಜೊತೆಗೆ ಹೆಚ್ಚಿನ ಮೈಲೇಜ್ ಹೊಂದಿರುವ ಹೈಬ್ರಿಡ್ ಮಾದರಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.
ಇನೋವಾ ಹೈಕ್ರಾಸ್ ಕಾರಿನಲ್ಲಿ ಟೊಯೊಟಾ ಕಂಪನಿಯು 2023ರಿಂದ ಜಾರಿಗೆ ಬರುತ್ತಿರುವ ರಿಯಲ್ ಟೈಮ್ ಎಮಿಷನ್ ನಿಯಮ ಅನುಸಾರವಾಗಿ ಡೀಸೆಲ್ ಮಾದರಿಯ ಮಾರಾಟವನ್ನು ಕೈಬಿಟ್ಟಿದೆ. ಹೀಗಾಗಿ ಕಂಪನಿಯು ಹೊಸ ಕಾರಿನಲ್ಲಿ ಪೆಟ್ರೋಲ್ ಜೊತೆ ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಕಾರು ಹೈಬ್ರಿಡ್ ಎಂಜಿನ್ ಜೊತೆಗೆ ಹಲವಾರು ಪ್ರೀಮಿಯಂ ಸೌಲಭ್ಯಗಳೊಂದಿಗೆ ಈ ತಿಂಗಳಾಂತ್ಯಕ್ಕೆ ಇಲ್ಲವೇ 2023ರ ಆರಂಭದಲ್ಲಿ ಖರೀದಿಗೆ ಲಭ್ಯವಾಗಲಿದೆ.
ಟಾಟಾ ಟಿಯಾಗೋ ಎನ್ಆರ್ ಜಿ ಸಿಎನ್ ಜಿ
ಭಾರತದಲ್ಲಿ ಸಿಎನ್ ಜಿ ಕಾರುಗಳ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಸಿಎನ್ಜಿ ವರ್ಷನ್ ನಲ್ಲಿ ಮಾರುಕಟ್ಟೆ ಪ್ರವೇಶಿಸಲಿವೆ. ಬಿಡುಗಡೆಯಾಗಲಿರುವ ಹೊಸ ಸಿಎನ್ ಜಿ ಕಾರುಗಳಲ್ಲಿ ಟಾಟಾ ನಿರ್ಮಾಣದ ಪ್ರಮುಖ ಕಾರುಗಳು ಹೊಸ ಆವೃತ್ತಿಗಳನ್ನು ಪಡೆದುಕೊಳ್ಳಲಿದ್ದು, ಟಿಯಾಗೋ ಎನ್ಆರ್ ಜಿ ಸಿಎನ್ ಜಿ ಸಹ ಬಿಡುಗಡೆಯಾಗಲಿದೆ.
ಸ್ಟ್ಯಾಂಡರ್ಡ್ ಟಿಯಾಗೋ ಮಾದರಿಯಲ್ಲಿ ಈಗಾಗಲೇ ಸಿಎನ್ ಜಿ ಮಾದರಿಯು ಖರೀದಿಗೆ ಲಭ್ಯವಿದ್ದು, ಇದೀಗ ಎನ್ಆರ್ ಜಿ ಆವೃತ್ತಿಯಲ್ಲೂ ಸಹ ಖರೀದಿಗೆ ಲಭ್ಯವಾಗುತ್ತಿದೆ.
2022ರ ಎಂಜಿ ಹೆಕ್ಟರ್
ಎಂಜಿ ಮೋಟಾರ್ ಕಂಪನಿಯು ಇದೇ ತಿಂಗಳಾಂತ್ಯಕ್ಕೆ 2022ರ ಹೆಕ್ಟರ್ ಎಸ್ ಯುವಿ ಬಿಡುಗಡೆ ಮಾಡಲಿದ್ದು, ಹೊಸ ಕಾರು ಪ್ರಮುಖ ಫೀಚರ್ಸ್ ಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.
ಹೊಸ ಕಾರಿನಲ್ಲಿ ಕಂಪನಿಯು ಈ ಬಾರಿ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಜೋಡಣೆ ಮಾಡಲಿದ್ದು, ಜೊತೆಗೆ ವಿನ್ಯಾಸದಲ್ಲೂ ತುಸು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.
Published On - 8:30 pm, Wed, 16 November 22