Upcoming Cars: ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಜುಲೈನಲ್ಲಿ ಹಲವು ಹೊಸ ಕಾರು ಮಾದರಿಗಳು ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರುಗಳ ಬಿಡುಗಡೆ ಮಾಹಿತಿ ಇಲ್ಲಿದೆ.

Upcoming Cars: ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!
ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!
Follow us
Praveen Sannamani
|

Updated on: Jul 02, 2023 | 4:58 PM

ಭಾರತದಲ್ಲಿ ಹೊಸ ಕಾರುಗಳ(New Cars) ಖರೀದಿ ಟ್ರೆಂಡ್ ಜೋರಾಗಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರು ಮಾದರಿಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಿದ್ದವಾಗುತ್ತಿವೆ. ಹೊಸ ಕಾರುಗಳಲ್ಲಿ ಎಂಟ್ರಿ ಲೆವಲ್ ಮಾದರಿಗಳಲ್ಲದೆ ಹೈ ಎಂಡ್ ಮಾದರಿಗಳು ಸಹ ಬಿಡುಗಡೆಯಾಗುತ್ತಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ. ಹಾಗಾದ್ರೆ ಜುಲೈ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಮಾಹಿತಿ ಇಲ್ಲಿದೆ.

ಹ್ಯುಂಡೈ ಎಕ್ಸ್‌ಟರ್

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಹೊಸ ಎಕ್ಸ್ಟರ್ ಮೈಕ್ರೊ ಎಸ್ ಯುವಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಈ ತಿಂಗಳು 10ರಂದು ಬಿಡುಗಡೆಯಾಗಲಿದೆ. ಟಾಟಾ ಪಂಚ್ ಕಾರಿಗೆ ಪೈಪೋಟಿಯಾಗಿ ಎಕ್ಸ್‌ಟರ್ ಬಿಡುಗಡೆಯಾಗುತ್ತಿದ್ದು, ಒಟ್ಟು ಐದು ವೆರಿಯೆಂಟ್ ಗಳೊಂದಿಗೆ 1.2 ಲೀಟರ್ ಎನ್ಎ ಪೆಟ್ರೋಲ್ ಮತ್ತು ಸಿಎನ್ ಜಿ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರಿನಲ್ಲಿ ಸನ್‌ರೂಫ್, 8 ಇಂಚಿನ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್ ಗಳಿದ್ದು, ದೆಹಲಿ ಎಕ್ಸ್ ಶೋರಂ ಪ್ರಕಾರ ರೂ. 6 ಲಕ್ಷದಿಂದ ರೂ. 11 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಯಿದೆ.

New Cars 1

ಇದನ್ನೂ ಓದಿ: ಹೆಚ್ಚು ಮೈಲೇಜ್ ಜೊತೆಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಬಜೆಟ್ ಸಿಎನ್ ಜಿ ಕಾರುಗಳಿವು..

 ಹೋಂಡಾ ಎಲಿವೇಟ್

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಶೀಘ್ರದಲ್ಲಿಯೇ ತನ್ನ ಹೊಸ ಎಲಿವೇಟ್ ಎಸ್ ಯುವಿ ಮಾದರಿಯನ್ನ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಾದರಿಯು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಕಂಪ್ಯಾಕ್ಟ್ ಎಸ್ ಯುವಿ ವಿನ್ಯಾಸದೊಂದಿಗೆ ವಿನೂತನ ಫೀಚರ್ಸ್ ಹೊಂದಿರುವ ಹೋಂಡಾ ಹೊಸ ಕಾರು ಹ್ಯುಂಡೈ ಕ್ರೆಟಾ, ಮಾರುತಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರೈಡರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಕಾರು ಸಿಟಿ ಸೆಡಾನ್ ಮಾದರಿಯಲ್ಲಿರುವಂತೆ 1.5 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಲಿದೆ.

New Cars 2

ಮಾರುತಿ ಸುಜುಕಿ ಇನ್ವಿಕ್ಟೋ

ಹೊಚ್ಚ ಹೊಸ ಇನ್ವಿಕ್ಟೋ ಎಂಪಿವಿ ಮಾದರಿಯನ್ನು ಮಾರುತಿ ಸುಜುಕಿ ಕಂಪನಿಯು ಇದೇ ತಿಂಗಳು 5ರಂದು ಅನಾವರಣಗೊಳಿಸಲಿದ್ದು, ಹೊಸ ಕಾರು ಟೊಯೊಟಾ ಹೈಕ್ರಾಸ್ ಆಧರಿಸಿ ನಿರ್ಮಾಣಗೊಂಡಿದೆ. ಹೊಸ ಕಾರನ್ನು ಮಾರುತಿ ಸುಜುಕಿ ಕಂಪನಿ ಟೊಯೊಟಾ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿ ನಿರ್ಮಾಣಗೊಳಿಸುತ್ತಿದ್ದು, ಇದು 7 ಸೀಟರ್ ಸೌಲಭ್ಯದೊಂದಿಗೆ ಅತ್ಯುತ್ತಮ ಫೀಚರ್ಸ್ ಮತ್ತು ಪವರ್ ಫುಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ. ಜೊತೆಗೆ ಹೊಸ ಕಾರು ಬೆಲೆಯಲ್ಲೂ ಗಮನಸೆಳೆಯಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 18 ಲಕ್ಷದಿಂದ ರೂ. 21 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

New Cars 3

ಕಿಯಾ ಸೆಲ್ಟೊಸ್ ಫೇಸ್ ಲಿಫ್ಟ್

ಕಿಯಾ ಇಂಡಿಯಾ ಕಂಪನಿಯು ತಿಂಗಳು 4ರಂದು ಸೆಲ್ಟೊಸ್ ಫೇಸ್ ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ನವೀಕೃತ ಮಾದರಿಯು ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಪವರ್ ಫುಲ್ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಹೊಂದಿರಲಿದ್ದು, ಹೊಸ ಬದಲಾವಣೆಯೊಂದಿಗೆ ಬೆಲೆಯಲ್ಲೂ ತುಸು ದುಬಾರಿ ಎನ್ನಿಸಲಿದೆ.

New Cars 4

ಇದನ್ನೂ ಓದಿ: ರೂ.10 ಲಕ್ಷಕ್ಕೆ ಖರೀದಿಗೆ ಲಭ್ಯವಿರುವ ಬೆಸ್ಟ್ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಸಿಟ್ರನ್ ಸಿ3 ಏರ್ ಕ್ರಾಸ್

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಸಿಟ್ರನ್ ಕಂಪನಿ ತನ್ನ ಬಹುನೀರಿಕ್ಷಿತ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಭಾರತದಲ್ಲಿ ಸದ್ಯಕ್ಕೆ ಸಿ3, ಇ ಸಿ3 ಎಲೆಕ್ಟ್ರಿಕ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳ ಮೂಲಕ ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಸಿಟ್ರನ್ ಕಂಪನಿಯು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ಕಾರನ್ನ ರಸ್ತೆಗಿಳಿಸುತ್ತಿದೆ. ಹೊಸ ಕಾರು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದ್ದು, ಅತ್ಯಾಧುನಿಕ ವಿನ್ಯಾಸ ಭಾಷೆ ಹೊಂದಿರಲಿದೆ. ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

New Cars 5