AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upcoming Cars: ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಹಲವು ಹೊಸ ಕಾರುಗಳಿವು!

ಭಾರತದಲ್ಲಿ ಹೊಸ ಕಾರುಗಳ ಮಾರಾಟ ಪ್ರಮಾಣ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಮಾರ್ಚ್ ನಲ್ಲಿ ಹಲವು ಹೊಸ ಕಾರುಗಳು ಬಿಡುಗಡೆಗೆ ಸಿದ್ದವಾಗುತ್ತಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಪರಿಸರ ಸ್ನೇಹಿ ವಾಹನಗಳು ಸಹ ಬಿಡುಗಡೆಯಾಗುತ್ತಿವೆ.

Praveen Sannamani
|

Updated on:Mar 01, 2023 | 8:16 PM

Share

ಭಾರತದಲ್ಲಿ ವೈಯಕ್ತಿಕ ಕಾರು ಬಳಕೆ ಟ್ರೆಂಡ್ ಹೆಚ್ಚುತ್ತಿದ್ದು, ವಿವಿಧ ಕಾರು ಮಾದರಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ. ಹೀಗಾಗಿ ಗ್ರಾಹಕರ ಬೇಡಿಕೆ ಆಧರಿಸಿ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು(New Cars) ಬಿಡುಗಡೆಗೆ ಸಿದ್ದವಾಗುತ್ತಿವೆ. ಹೊಸ ಕಾರು ಮಾದರಿಗಳಲ್ಲಿ ಸಾಮಾನ್ಯ ಆವೃತ್ತಿಗಳೊಂದಿಗೆ ಇವಿ ಮತ್ತು ಸಿಎನ್ ಜಿ ಮಾದರಿಗಳು ಸಹ ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿವೆ.

ಮಾರ್ಚ್ ನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಪ್ರಮುಖ ಆವೃತ್ತಿಯಾಗಿದೆ. ಇದು ಈ ತಿಂಗಳ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ ಯುವಿ ವಿಭಾಗಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು ಒನ್ ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ. ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ. ಈ ಮೂಲಕ ಹೊಸ ಕಾರು ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ ಯುವಿ ತ್ರಿ ಡಬಲ್ ಒ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಕಾರುಗಳ ಬಿಡುಗಡೆಯ ಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ನಿರ್ಮಾಣದ ಪಂಚ್ ಇವಿ ಸಹ ಒಂದಾಗಿದೆ. ಸದ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಹೊಂದಿರುವ ಪಂಚ್ ಕಾರು ಮುಂಬರುವ ದಿನಗಳಲ್ಲಿ ಸಿಎನ್ ಜಿ ಜೊತೆಗೆ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಯಾಗುವ ಸಿದ್ದತೆಯಲ್ಲಿದೆ. ಹೊಸ ಪಂಚ್ ಇವಿ ಕಾರು ಟಿಯಾಗೋ ಇವಿ ಕಾರಿನಲ್ಲಿರುವಂತೆ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್ ಗೆ 280 ರಿಂದ 350 ಕಿ.ಮೀ ಮೈಲೇಜ್ ನೀಡಲಿದೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 13 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳು ನೀರಿಕ್ಷೆಯಿದೆ.

ಫೆಬ್ರವರಿಯಲ್ಲಿ ಬಿಡುಗಡೆಯಾಗಲಿರುವ ಕಾರುಗಳ ಪಟ್ಟಿಯಲ್ಲಿ ಮತ್ತೊಂದು ಪ್ರಮುಖ ಕಾರು ಮಾದರಿ ಅಂದ್ರೆ ಅದು ಮಾರುತಿ ಸುಜುಕಿ ಬ್ರೆಝಾ ಸಿಎನ್ ಜಿ. ಹೊಸ ಕಾರು ಅತ್ಯುತ್ತಮ ಮೈಲೇಜ್ ನೊಂದಿಗೆ ತುಸು ದುಬಾರಿ ಎನ್ನಿಸಲಿದ್ದು, ಹೊಸ ಕಾರು ಈ ತಿಂಗಳಾಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ. ಸಿಎನ್ ಜಿ ಮಾದರಿಯು ಗರಿಷ್ಠ ಮೈಲೇಜ್ ಮೂಲಕ ಗಮನಸೆಳೆಯಲಿದ್ದು, ಹೊಸ ಕಾರು ತನ್ನ ವಿಭಾಗಲ್ಲಿಯೇ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳಲಿದೆ.

ಮುಂಬರುವ ಎಪ್ರಿಲ್ 1ರಿಂದ ಜಾರಿಗೆ ಬರಲಿರುವ ರಿಯಲ್ ಡ್ರೈವಿಂಗ್ ಎಮಿಷನ್ ಗೆ ಅನುಗುಣವಾಗಿ ಹೊಸ ಕಾರುಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಹೀಗಾಗಿ ಸಿಟಿ ಸೆಡಾನ್ ಕಾರು ಸಹ ಭಾರೀ ಬದಲಾವಣೆ ಪಡೆದುಕೊಳ್ಳಲಿದ್ದು, ಹೊಸ ಮಾನದಂಡದಿಂದಾಗಿ ಕಾರ್ ಎಂಜಿನ್ ತಂತ್ರಜ್ಞಾನವು ಸಾಕಷ್ಟು ಸುಧಾರಣೆಗೊಂಡಿದೆ. ಈ ಮೂಲಕ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಇದು ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಇದೇ ತಿಂಗಳು 2ರಂದು ಬಿಡುಗಡೆಯಾಗಲಿದೆ.

ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಟೊಯೊಟಾ ಹೊಸ ಇನೋವಾ ಕ್ರಿಸ್ಟಾ ಕೂಡಾ ಒಂದಾಗಿದೆ. ಸದ್ಯ ಟೊಯೊಟಾ ಕಂಪನಿಯು ಹೊಸ ಇನೋವಾ ಹೈಕ್ರಾಸ್ ಬಿಡುಗಡೆ ಮಾಡಿದ್ದು, ಹೊಸ ಕಾರಿನ ಜೊತೆಗೆ ಈ ಹಿಂದಿನ ಇನೋವಾ ಕ್ರಿಸ್ಟಾ ಕಾರಿನ ಮಾರಾಟವನ್ನು ಸಹ ಮುಂದುವರಿಸಲು ನಿರ್ಧರಿಸಿದೆ. ಹೊಸ ಇನೋವಾ ಹೈಕ್ರಾಸ್ ಕಾರನ್ನ ಸದ್ಯ ಪೆಟ್ರೋಲ್ ಮತ್ತು ಹೈಬ್ರಿಡ್ ನಲ್ಲಿ ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಹೊಸ ಇನೋವಾ ಕ್ರಿಸ್ಟಾ ಕಾರನ್ನ ನವೀಕೃತ 2.4 ಲೀಟರ್ ಡೀಸೆಲ್ ಎಂಜಿನ್ ನೊಂದಿಗೆ ಮರುಪರಿಚಯಿಸುತ್ತಿದೆ. ಹೊಸ ಇನೋವಾ ಕ್ರಿಸ್ಟಾ ಕಾರು ಡೀಸೆಲ್ ಆವೃತ್ತಿಯು ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದ್ದು, ಇದರಲ್ಲಿ ಡೀಸೆಲ್ ಎಂಜಿನ್ ಜೊತೆಗೆ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಸಹ ಲಭ್ಯವಿರಲಿದೆ.

Published On - 8:04 pm, Wed, 1 March 23

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು