Upcoming Cars: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಹಬ್ಬದ ಋತುವಿನಲ್ಲಿ ಹೊಸ ಕಾರುಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುವ ನೀರಿಕ್ಷೆಗಳಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿವೆ.

Upcoming Cars: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!
ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!
Follow us
|

Updated on: Aug 31, 2023 | 9:22 PM

ಭಾರತದಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಹೊಸ ಕಾರುಗಳ(New Cars) ಪಟ್ಟಿಯಲ್ಲಿ ಮಧ್ಯಮ ಕ್ರಮಾಂಕದ ಜೊತೆಗೆ ಹಲವಾರು ಐಷಾರಾಮಿ ಕಾರುಗಳು ಸಹ ಬಿಡುಗಡೆಯ ಸಿದ್ದತೆಯಲ್ಲಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಮತ್ತು ನೀರಿಕ್ಷಿತ ಬೆಲೆ ಮಾಹಿತಿ ಇಲ್ಲಿದೆ.

ಹೋಂಡಾ ಎಲಿವೇಟ್

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿಯನ್ನು ಸೆಪ್ಟೆಂಬರ್ 4ರಂದು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದ್ದು, ಇದು ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆ ಹೊಂದಿದೆ. ಹೊಸ ಕಾರು ಫೀಚರ್ಸ್ ಗಳಿಗೆ ಅನುಗುಣವಾಗಿ ಎಸ್ ವಿ(SV), ವಿ(V), ವಿಎಕ್ಸ್(VX) ಮತ್ತು ಜೆಡ್ಎಕ್ಸ್(ZX) ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ. ಇದು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.40 ಲಕ್ಷ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಇದನ್ನೂ ಓದಿ: ಹೊಸ ಕಾರುಗಳಿಗೆ ಕಡ್ಡಾಯ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಜಾರಿ

ಟಾಟಾ ನೆಕ್ಸಾನ್ ಫೇಸ್ ಲಿಫ್ಟ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಫೇಸ್ ಲಿಫ್ಟ್ ಆವೃತ್ತಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ನೆಕ್ಸಾನ್ ಕಾರು ಮಾದರಿಯು ಮರುವಿನ್ಯಾಸದೊಂದಿಗೆ ಹಲವಾರು ಹೊಸ ಫೀಚರ್ಸ್ ಹೊಂದಿರಲಿದೆ. 2017ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು ಇದುವರೆಗೆ ಹಲವಾರು ಬಾರಿ ಉನ್ನತೀಕರಣಗೊಂಡಿದ್ದು, ಇದೀಗ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳೊಂದಿಗೆ ಫೇಸ್ ಲಿಫ್ಟ್ ಆವೃತ್ತಿಯನ್ನು ಪಡೆದುಕೊಳ್ಳುತ್ತಿದೆ. ಕರ್ವ್ ಕಾನ್ಸೆಪ್ಟ್ ವಿನ್ಯಾಸ ಪ್ರೇರಿತ ಫ್ರಂಟ್ ಗ್ರಿಲ್, ಸ್ಪೋರ್ಟಿ ಬಂಪರ್, ಹೊಸ ವಿನ್ಯಾಸ ಪ್ರೇರಿತ ಸ್ಪ್ಲಿಟ್ ಹೆಡ್ ಲ್ಯಾಂಪ್ಸ್ ಜೊತೆಗೆ ಪವರ್ ಫುಲ್ ಎಂಜಿನ್ ಹೊಂದಿರಲಿದೆ. ಹೊಸ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಜೊತೆಗೆ ಟರ್ಬೊ ಪೆಟ್ರೋಲ್ ಆವೃತ್ತಿಯು ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದೆ.

ಸಿಟ್ರನ್ ಸಿ3 ಏರ್ ಕ್ರಾಸ್

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಸಿಟ್ರನ್ ಕಂಪನಿ ತನ್ನ ಬಹುನೀರಿಕ್ಷಿತ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಭಾರತದಲ್ಲಿ ಸದ್ಯಕ್ಕೆ ಸಿ3, ಇ ಸಿ3 ಎಲೆಕ್ಟ್ರಿಕ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳ ಮೂಲಕ ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಸಿಟ್ರನ್ ಕಂಪನಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ಕಾರನ್ನ ರಸ್ತೆಗಿಳಿಸುತ್ತಿದೆ. ಹೊಸ ಕಾರು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದ್ದು, ಅತ್ಯಾಧುನಿಕ ವಿನ್ಯಾಸ ಭಾಷೆ ಹೊಂದಿರಲಿದೆ. ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ವೊಲ್ವೊ ಎಕ್ಸ್ ಸಿ40 ರೀಚಾರ್ಚ್

ವೊಲ್ವೊ ಇಂಡಿಯಾ ಕಂಪನಿ ಎಕ್ಸ್ ಸಿ40 ರೀಚಾರ್ಚ್ ನಂತರ ಮತ್ತೊಂದು ಬಹುನೀರಿಕ್ಷಿತ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಕೂಪೆ ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಹೊಸ ಇವಿ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, 78kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್ ಗೆ 418 ಕಿ.ಮೀ ಮೈಲೇಜ್ ನೀಡುತ್ತದೆ. ಡ್ಯುಯಲ್ ಮೋಟಾರ್ ಜೊತೆ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಹೊಂದಿರುವ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 55 ಲಕ್ಷದಿಂದ ರೂ. 60 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಗಳಿವೆ.

ಲೆಕ್ಸಸ್ ಎಲ್ಎಂ

ಲೆಕ್ಸ,ಸ್ ಇಂಡಿಯಾ ಕಂಪನಿಯು ತನ್ನ ಐಷಾರಾಮಿ ಎಲ್ಎಂ ಎಂಪಿವಿ ಆವೃತ್ತಿಯನ್ನು ಭಾರತದಲ್ಲಿ ಅನಾವರಣಗೊಳಿಸುವ ಮೂಲಕ ಬುಕಿಂಗ್ ಆರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟಗೊಳ್ಳುತ್ತಿರುವ ಎಲ್ಎಂ ಕಾರು ಇದೀಗ ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಕಾರು ಟೊಯೊಟಾ ವೆಲ್ ಫೈರ್ ಆಧರಿಸಿದ್ದು, ಹೆಚ್ಚಿನ ಮಟ್ಟದ ಐಷಾರಾಮಿ ಫೀಚರ್ಸ್ ಹೊಂದಿರಲಿದೆ. ದೆಹಲಿ ಎಕ್ಸ್ ಶೋರೂಂ ಪ್ರಕಾರ ಹೊಸ ಕಾರು ರೂ. 1.20 ಕೋಟಿಯಿಂದ ರೂ. 1.40 ಕೋಟಿ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಇದರಲ್ಲಿ 2.5 ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಜೋಡಣೆ ಮಾಡಲಾಗಿದೆ.

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್