New Cars: ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಿವು..

ಭಾರತದಲ್ಲಿ ಹೊಸ ಕಾರುಗಳ ಮಾರಾಟ ಹೆಚ್ಚುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ವಿನೂತನ ಶೈಲಿಯ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಿದ್ದಗೊಳ್ಳುತ್ತಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳು ಸಹ ಬಿಡುಗಡೆಯ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು ಬಿಎಸ್ 6 ಎರಡನೇ ಹಂತದ ಮಾನದಂಡ ಪೂರೈಸಿವೆ.

Follow us
Praveen Sannamani
|

Updated on:Apr 03, 2023 | 4:57 PM

ಹೊಸ ಕಾರು(New Cars) ಮಾದರಿಗಳೊಂದಿಗೆ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಬಿಡುಗಡೆಯ ಸಿದ್ದತೆಯಲ್ಲಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಆವೃತ್ತಿಗಳು ಸಹ ಬಿಡುಗಡೆಯಾಗುತ್ತಿದ್ದು, ಇವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ರಿಯಲ್ ಡ್ರೈವಿಂಗ್ ಎಮಿಷನ್ ಮಾನದಂಡದೊಂದಿಗೆ ಖರೀದಿಗೆ ಲಭ್ಯವಿರಲಿವೆ.

ಮಾರುತಿ ಸುಜುಕಿ ಫ್ರಾಂಕ್ಸ್ ಹೊಸ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ಹೊಚ್ಚ ಹೊಸ ಫ್ರಾಂಕ್ಸ್ ಕಾರು ಪ್ರಮುಖ ಆವೃತ್ತಿಯಾಗಿದೆ. ಇದು ಮುಂದಿನ ಕೆಲವೇ ವಾರಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ ಯುವಿ ವಿಭಾಗಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು 1.0 ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ. ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಇದು ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ 300 ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಂಜಿ ಮೋಟಾರ್ ಕಂಪನಿ ಸಹ ಶೀಘ್ರದಲ್ಲಿ ಮತ್ತಷ್ಟು ಇವಿ ಕಾರುಗಳ ಬಿಡುಗಡೆಗೆ ಸಿದ್ದವಾಗ್ತಿದೆ. ಜೆಡ್ಎಸ್ ಇವಿ ನಂತರ ಇದೀಗ ಕಾಮೆಟ್ ಮೈಕ್ರೊ ಇವಿ ಬಿಡುಗಡೆಯ ಯೋಜನೆಯಲ್ಲಿದೆ. ಪರ್ಸನಲ್ ಮೊಲಿಬಿಟಿ ಉದ್ದೇಶಕ್ಕಾಗಿ ಈ ಹೊಸ ಇವಿ ಕಾರು ಬಿಡುಗಡೆಯಾಗುತ್ತಿದ್ದು, ಇದು 25 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದೆ. ಇದರೊಂದಿಗೆ ಹೊಸ ಇವಿ ಕಾರು ಪ್ರತಿ ಚಾರ್ಜ್ ಗೆ ಗರಿಷ್ಠ 250 ಕಿ.ಮೀ ರೇಂಜ್ ಹೊಂದಿರಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷ ಆರಂಭಿಕ ಬೆಲೆ ಹೊಂದಿರಲಿದೆ.

ಇದನ್ನೂ ಓದಿ: ಹೊಸ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾದ ಸಿಟ್ರನ್ ಇಂಡಿಯಾ

ಹೋಂಡಾ ಹೊಸ ಎಸ್ ಯುವಿ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿ ಸಹ ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ಹೊಸ ಕಾರು ಮಾದರಿಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿ ವಿನೂತನ ಕಾರು ಮಾದರಿಯನ್ನ ಬಿಡುಗಡೆ ಮಾಡುತ್ತಿದೆ. ಹೊಸ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಸ್ ಯುವಿ ಆವೃತ್ತಿಯಾಗಿದ್ದು, ಇದು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಕಾರು ಈ ತಿಂಗಳಾಂತ್ಯಕ್ಕೆ ಅನಾವರಣಗೊಳ್ಳಲಿದ್ದು, ಇದು ವಿವಿಧ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.

ಮರ್ಸಿಡಿಸ್ ಬೆಂಝ್ ಎಎಂಜಿ ಜಿಟಿ 63 ಇ-ಪರ್ಫಾಮೆನ್ಸ್ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಐಷಾರಾಮಿ ಮಾದರಿಗಳು ಸಹ ಗಮನಸೆಳೆಯಲಿವೆ. ಹೊಸ ಐಷಾರಾಮಿ ಕಾರುಗಳ ಪಟ್ಟಿಯಲ್ಲಿ ಮರ್ಸಿಡಿಸ್ ಬೆಂಝ್ ನಿರ್ಮಾಣದ ಎಎಂಜಿ ಜಿಟಿ 63 ಇ-ಪರ್ಫಾಮೆನ್ಸ್ ಭಾರೀ ನೀರಿಕ್ಷೆ ಹುಟ್ಟು ಹಾಕಿದೆ. ಇದು ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಪ್ಲಗ್ ಇನ್ ಹೈಬ್ರಿಡ್ ಎಎಂಜಿ ಕಾರು ಮಾದರಿಯಾಗಿದ್ದು, 4.0 ಲೀಟರ್ ಟ್ವಿನ್ ಟರ್ಬೊ ಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಹೊಂದಿರಲಿದೆ. ಈ ಮೂಲಕ ಇದು 843 ಹಾರ್ಸ್ ಪವರ್ ಹೊಂದಿರಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 3 ಕೋಟಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಹೋಂಡಾ ಸಿಟಿ vs ಹ್ಯುಂಡೈ ವೆರ್ನಾ…ಯಾವುದು ಬೆಸ್ಟ್?

ಲ್ಯಾಂಬೊರ್ಗಿನಿ ಉರುಸ್ ಎಸ್ ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಲ್ಯಾಂಬೊರ್ಗಿನಿ ನಿರ್ಮಾಣದ ಹೊಸ ಉರುಸ್ ಎಸ್ ವೆರಿಯೆಂಟ್ ಕೂಡಾ ಒಂದಾಗಿದೆ. ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮಾದರಿಯಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 4.22 ಕೋಟಿ ಬೆಲೆ ಪಡೆದುಕೊಳ್ಳುವ ನೀರಿಕ್ಷೆಗಳಿವೆ.

Published On - 4:56 pm, Mon, 3 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ