Hyundai Exter: ಟಾಟಾ ಪಂಚ್ ಗಿಂತ ಹ್ಯುಂಡೈ ಎಕ್ಸ್ ಟರ್ ಯಾಕೆ ಬೆಸ್ಟ್?

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಹೊಸ ಎಕ್ಸ್ಟರ್ ಮೈಕ್ರೊ ಎಸ್ ಯುವಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರಿನಲ್ಲಿ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಅತ್ಯುತ್ತಮವಾದ ಸುರಕ್ಷಾ ಸೌಲಭ್ಯಗಳನ್ನು ಸಹ ಜೋಡಣೆ ಮಾಡಿದೆ.

Follow us
Praveen Sannamani
|

Updated on: Jun 04, 2023 | 10:00 AM

ಪ್ರಯಾಣಿಕ ಕಾರು ಮಾರಾಟದಲ್ಲಿ ಸದ್ಯ ಎರಡನೇ ಸ್ಥಾನದಲ್ಲಿರುವ ಹ್ಯುಂಡೈ(Hyundai) ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ವಿನೂತನ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ. ಹೊಸ ಎಕ್ಸ್‌ಟರ್(Exter) ಕಾರು ಮಾದರಿಯು ಈ ಹಿಂದಿನ ಸ್ಯಾಂಟ್ರೊ ಕಾರಿನ ಸ್ಥಾನ ತುಂಬಲಿದ್ದು, ಇದು ವಿನೂತನ ವೈಶಿಷ್ಟ್ಯತೆಗಳೊಂದಿಗೆ ಟಾಟಾ ಪಂಚ್ ಮೈಕ್ರೊ ಎಸ್ ಯುವಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಸ್ಯಾಂಟ್ರೋ ಸ್ಥಗಿತ ನಂತರ ಸಣ್ಣ ಕಾರುಗಳ ಮಾರಾಟದಲ್ಲಿ ಹಿನ್ನಡೆ ಅನುಭವಿಸುತ್ತಿರುವ ಹ್ಯುಂಡೈ ಕಂಪನಿಯು ಇದೀಗ ಎಕ್ಸ್‌ಟರ್ ಕಾರಿನ ಮೇಲೆ ಹೊಸ ನೀರಿಕ್ಷೆಯಿಟ್ಟುಕೊಂಡಿದ್ದು, ಇದು ಟಾಟಾ ಮೋಟಾರ್ಸ್ ಜೊತೆಗಿನ ಮಾರಾಟ ಪೈಪೋಟಿ ಎದುರಿಸಲು ಸಹಕಾರಿಯಾಗಲಿದೆ. ಹೀಗಾಗಿ ಹೊಸ ಕಾರನ್ನು ಕಂಪನಿಯು ಈ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಬುಕಿಂಗ್ ಪ್ರಕ್ರಿಯೆ ಕೂಡಾ ಆರಂಭಿಸಿದೆ.

ಇದನ್ನೂ ಓದಿ: ಜೂನ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹೊಸ ಎಕ್ಸ್‌ಟರ್ ಕಾರು ಒಟ್ಟು ಐದು ವೆರಿಯೆಂಟ್ ಗಳೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಇದು 1.2 ಲೀಟರ್ ಪೆಟ್ರೋಲ್ ಮತ್ತು ಸಿಎನ್ ಜಿ ಆವೃತ್ತಿಗಳನ್ನು ಒಳಗೊಂಡಿದೆ. ಹೊಸ ಕಾರಿನಲ್ಲಿರುವ 1.2 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದು, 82 ಹಾರ್ಸ್ ಪವರ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರಲಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಮೈಕ್ರೊ ಎಸ್ ಯುವಿ ವಿನ್ಯಾಸ ಹೊಂದಿರುವ ಹೊಂದಿರುವ ಹೊಸ ಕಾರು ಉತ್ತಮ ಚಾಲನಾ ಅನುಭವ ನೀಡುವ ವಿಶ್ವಾಸದಲ್ಲಿದ್ದು, ಬೆಸ್ ವೆರಿಯೆಂಟ್ ನಲ್ಲೂ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಜೋಡಣೆ ಹೊಂದಿದೆ. ಹೊಸ ಕಾರಿನಲ್ಲಿ ವಿವಿಧ ಫೀಚರ್ಸ್ ಗಳೊಂದಿಗೆ ಸನ್‌ರೂಫ್, 8 ಇಂಚಿನ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಟೆಡ್ ಕಾರ್ ಟೆಕ್, ವೈರ್‌ಲೆಸ್ ಚಾರ್ಜರ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸೌಲಭ್ಯಗಳಿವೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಟಾ ಆಲ್ಟ್ರೊಜ್ ಸಿಎನ್ ಜಿ ಬಿಡುಗಡೆ

ಸುರಕ್ಷಾ ಸೌಲಭ್ಯಗಳು

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಹ್ಯುಂಡೈ ಕಂಪನಿಯು ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳು ಮತ್ತು ಟಿಪಿಎಂಎಸ್(ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ) ನೀಡಿದ್ದು, ಇದರ ಜೊತೆಗೆ ಅತ್ಯುತ್ತಮ ನೋಟ ಹೊಂದಿರುವ ರಿಯರ್ ಪಾರ್ಕಿಂಗ್ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಐಸೋ ಫೀಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿ ಹಲವು ಸುರಕ್ಷಾ ಸೌಲಭ್ಯಗಳಿವೆ.

ನೀರಿಕ್ಷಿತ ಬೆಲೆ

ಹೊಸ ಎಕ್ಸ್‌ಟರ್ ಕಾರು ಟಾಟಾ ಪಂಚ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಇದು ದೆಹಲಿ ಎಕ್ಸ್ ಶೋರಂ ಪ್ರಕಾರ ರೂ. 6 ಲಕ್ಷದಿಂದ ರೂ. 11 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಯಿದೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್