ಇವಿಎಕ್ಸ್ ಎಲೆಕ್ಟ್ರಿಕ್ ಬಿಡುಗಡೆ ಮಾಹಿತಿ ಹಂಚಿಕೊಂಡ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇವಿಎಕ್ಸ್ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ.

ಇವಿಎಕ್ಸ್ ಎಲೆಕ್ಟ್ರಿಕ್ ಬಿಡುಗಡೆ ಮಾಹಿತಿ ಹಂಚಿಕೊಂಡ ಮಾರುತಿ ಸುಜುಕಿ
ಮಾರುತಿ ಸುಜುಕಿ ಇವಿಎಕ್ಸ್ ಇವಿ ಎಲೆಕ್ಟ್ರಿಕ್
Follow us
Praveen Sannamani
|

Updated on:Dec 07, 2023 | 5:04 PM

ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ (Maruti Suzuki) ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಎಸ್ ಯುವಿ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿದ್ದ ಇವಿಎಕ್ಸ್ (eVX)  ಕಾನ್ಸೆಪ್ಟ್ ಕಾರು ಮಾದರಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವ ಸುಳಿವು ನೀಡಿದೆ. ಮಾಹಿತಿಗಳ ಪ್ರಕಾರ ಹೊಸ ಇವಿ ಕಾರನ್ನು ಕಂಪನಿಯು 2025ರ ಮಾರ್ಚ್ ವೇಳೆಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಇವಿ ಕಾರನ್ನು ಗುಜರಾತ್ ನಲ್ಲಿರುವ ಹಂಸಲಾಪುರ್ ಉತ್ಪಾದನಾ ಘಟಕದಲ್ಲಿ ಉತ್ಪಾದನೆಗೊಳ್ಳಲಿದೆ.

ಎಸ್ ಯುವಿ ಕೂಪೆ ವಿನ್ಯಾಸ ಹೊಂದಿರುವ ಇವಿಎಕ್ಸ್ ಕಾನ್ಸೆಪ್ಟ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಲ್ಲಿರುವ ಟಾಟಾ ನೆಕ್ಸಾನ್ ಇವಿ ಮತ್ತು ಮಹೀಂದ್ರಾ ಎಕ್ಸ್ ಯುವಿ400 ಎಲೆಕ್ಟ್ರಿಕ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಕಾನ್ಸೆಪ್ಟ್ ಮಾದರಿಯಲ್ಲಿರುವ ಹಲವು ತಾಂತ್ರಿಕ ಅಂಶಗಳನ್ನು ಮುಂದುವರೆಸುವ ಸಾಧ್ಯತೆಗಳಿದ್ದು, ಇದು ಹೆಚ್ಚಿನ ಮಟ್ಟದ ಸ್ಥಳೀಕರಣದೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ.

ಇದನ್ನೂ ಓದಿ: ಪೆಟ್ರೋಲ್ ಕಾರುಗಳು Vs ಪೆಟ್ರೋಲ್ ಸಿಎನ್‌ಜಿ ಕಾರುಗಳು.. ಖರೀದಿಗೆ ಯಾವುದು ಬೆಸ್ಟ್?

ಇವಿಎಕ್ಸ್ ಕಾನ್ಸೆಪ್ಟ್ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 40 ಕೆವಿಹೆಚ್ ಮತ್ತು 60 ಕೆವಿಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಇದರಲ್ಲಿ ಆರಂಭಿಕ ಮಾದರಿಯು ಪ್ರತಿ ಚಾರ್ಜ್ ಗೆ 350 ರಿಂದ 400 ಕಿ.ಮೀ ಮೈಲೇಜ್ ನೀಡಿದರೆ ಹೈ ಎಂಡ್ ಮಾದರಿಯು ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡಬಹುದಾಗಿದೆ.

ಹೊಸ ಇವಿಎಕ್ಸ್ ಕಾರು ಭರ್ಜರಿ ಮೈಲೇಜ್ ಜೊತೆಗೆ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲೂ ಗಮನಸೆಳೆಯಲಿದ್ದು, ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರಲಿದೆ. ಜೊತೆಗೆ ಹೊಸ ಕಾರಿನಲ್ಲಿ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಎನ್ನಲಾಗಿದ್ದು, ಇದು 4,200 ಎಂಎಂ ಉದ್ದಳತೆಯೊಂದಿಗೆ ಆರಾಮದಾಯಕ ಒಳಾಂಗಣ ಸೌಲಭ್ಯ ಪಡೆದುಕೊಳ್ಳಲಿದೆ.

ಹೊಸ ಕಾರಿನ ಒಳಭಾಗದಲ್ಲಿ ಆಕರ್ಷಕವಾದ ಡ್ಯಾಶ್ ಬೋರ್ಡ್, ಟ್ವಿನ್ ಸ್ಕ್ರೀನ್ ಸೆಟ್ಅಪ್, ದೊಡ್ಡದಾದ ಇನ್ಪೋಟೈನ್ಮೆಂಟ್ ಸಿಸ್ಟಂ, ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವರ್ಟಿಕಲ್ ಎಸಿ ಮತ್ತು ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವ್ಹೀಲ್ ಸೌಲಭ್ಯಗಳಿದ್ದು, ಇದರೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಲಾಗಿದೆ. ಜೊತಗೆ ಹೊಸ ಕಾರಿಗಾಗಿ ಟೊಯೊಟಾ ಇವಿ ಪ್ಲ್ಯಾಟ್ ಫಾರ್ಮ್ ನಿಂದಲೂ ಹಲವು ಫೀಚರ್ಸ್ ಎರವಲು ಪಡೆದುಕೊಳ್ಳಲಿದ್ದು, ಇವಿಎಕ್ಸ್ ಮಾದರಿಯನ್ನೇ ಟೊಯೊಟಾ ಕೂಡಾ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡಲಿದೆ.

ಹೊಸ ಕಾರುಗಳ ಮಾರಾಟದಲ್ಲಿ ಸದ್ಯ ರೀಬ್ಯಾಡ್ಜ್ ಆವೃತ್ತಿಗಳ ಮೂಲಕ ಗಮನಸೆಳೆಯುತ್ತಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಇವಿಎಕ್ಸ್ ಕಾರು ಮಾದರಿಯನ್ನು ಅರ್ಬನ್ ಕಾನ್ಸೆಪ್ಟ್ ಇವಿ ಹೆಸರಿನಲ್ಲಿ ಮಾರಾಟಗೊಳಿಸಲಿದೆ. ಮೊದಲ ಹಂತದಲ್ಲಿ ಮಾರುತಿ ಸುಜುಕಿ ಕಂಪನಿಯು ಹೊಸ ಕಾರನ್ನು ಬಿಡುಗಡೆ ಮಾಡಲಿದ್ದರೆ ಕೆಲವು ಬದಲಾವಣೆಗಳೊಂದಿಗೆ ಟೊಯೊಟಾ ಸಹ ದೇಶಿಯ ಮಾರುಕಟ್ಟೆಯಲ್ಲಿ ಮತ್ತು ಪ್ರಮುಖ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಭವಾನಿ ರೇವಣ್ಣರ ಒಂದೂವರೆ ಕೋಟಿ ಕಾರಿನಲ್ಲಿ ಏನೆಲ್ಲಾ ಲಗ್ಷುರಿ ಫೀಚರ್ಸ್ ಗಳಿವೆ ನೋಡಿ..

ಮಾಹಿತಿಗಳ ಪ್ರಕಾರ ಮಾರುತಿ ಸುಜುಕಿ ಕಂಪನಿ ಹೊಸ ಕಾರನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆ ಮಾಡಲಿದ್ದು, ಇದು ವಿವಿಧ ವೆರಿಯೆಂಟ್ ಗಳೊಂದಿಗೆ ರೂ. 11 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ. ಈ ಮೂಲಕ ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್ ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದ್ದು, ಇದು ಸ್ಥಳೀಯವಾಗಿ ಉತ್ಪಾದನೆಯಾದ ಬ್ಯಾಟರಿ ಜೋಡಣೆಯೊಂದಿಗೆ ಬೆಲೆಯಲ್ಲಿ ಗಮನಸೆಳೆಯಲಿದೆ.

Published On - 3:57 pm, Thu, 7 December 23

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM