AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upcoming Cars: ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಹೊಸ ಕಾರುಗಳಿವು!

ಭಾರತದಲ್ಲಿ ಹೊಸ ಕಾರುಗಳ ಮಾರಾಟ ಪ್ರಕ್ರಿಯೆ ಜೋರಾಗಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಮಾದರಿಯ ಕಾರುಗಳು ಬಿಡುಗಡೆಗಾಗಿ ಸಿದ್ದಗೊಂಡಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

Upcoming Cars: ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಹೊಸ ಕಾರುಗಳಿವು!
ಬಿಡುಗಡೆಗೆ ಸಿದ್ದವಾಗಿರುವ ಹೊಸ ಕಾರುಗಳು
Praveen Sannamani
|

Updated on: Jul 01, 2024 | 8:58 PM

Share

ಸಿಟ್ರನ್ ಬಸಾಲ್ಟ್

ಸಿಟ್ರನ್ ಕಂಪನಿಯು ಭಾರತದಲ್ಲಿ ಶೀಘ್ರದಲ್ಲಿಯೇ ತನ್ನ 5ನೇ ಕಾರು ಮಾದರಿಯಾದ ಬಸಾಲ್ಟ್ ಕೂಪೆ ಎಸ್ ಯುವಿ ಬಿಡುಗಡೆ ಮಾಡುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿ3 ಏರ್ ಕ್ರಾಸ್ ಆಧರಿಸಿ ನಿರ್ಮಾಣಗೊಳ್ಳುತ್ತಿದೆ. ಸಿ3 ಏರ್ ಕ್ರಾಸ್ನಲ್ಲಿರುವಂತೆ ಹಲವು ಹೊಸ ತಾಂತ್ರಿಕ ಅಂಶಗಳೊಂದಿಗೆ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದ್ದು, ಕೂಪೆ ಎಸ್‌ಯುವಿ ಶೈಲಿ ಹೊಂದಿರುವುದರಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 12 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಹೊಸ ಕಾರಿನ ಮೂಲಕ ಸಿಟ್ರನ್ ಕಂಪನಿ ತನ್ನ ಮಾರುಕಟ್ಟೆ ಪಾಲು ಹೆಚ್ಚಿಸಿಕೊಳ್ಳುವ ತವಕದಲ್ಲಿದೆ.

ಟಾಟಾ ಕರ್ವ್ ಇವಿ

ನೆಕ್ಸಾನ್ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿರುವ ಹೊಸ ಕರ್ವ್ ಕಾರು ಕೂಪೆ ಎಸ್ ಯುವಿ ವೈಶಿಷ್ಟ್ಯತೆ ಹೊಂದಿದ್ದು, ಇದು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಮಾತ್ರವಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲೂ ಮಾರುಕಟ್ಟೆ ಪ್ರವೇಶಿಸಲಿದೆ. ಇದರಲ್ಲಿ ಎಲೆಕ್ಟ್ರಿಕ್ ಮಾದರಿಯು ಮಾತ್ರ ಈ ವರ್ಷಾಂತ್ಯಕ್ಕೆ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳು 2025ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ. ಹೊಸ ಇವಿ ಆವೃತ್ತಿಯು ಪ್ರತಿಚಾರ್ಜ್ ಗೆ 500 ಕಿ.ಮೀ ಗೂ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಟಾಟಾ ಕಂಪನಿಯ ಎರಡನೇ ತಲೆಮಾರಿನ ಇವಿ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಮಾರುತಿ ಸುಜುಕಿ ಹೊಸ ಡಿಜೈರ್

ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಶೀಘ್ರದಲ್ಲಿಯೇ ತನ್ನ ಬಹುನೀರಿಕ್ಷಿತ ಹೊಸ ತಲೆಮಾರಿನ ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಬಿಡುಗಡೆ ಮಾಡುತ್ತಿದೆ. ಹೊಸ ಡಿಜೈರ್ ಇತ್ತೀಚೆಗೆ ಬಿಡುಗಡೆಯಾದ ಹೊಸ ತಲೆಮಾರಿನ ಸ್ವಿಫ್ಟ್ ಆವೃತ್ತಿಯಿಂದ ಹಲವಾರು ಫೀಚರ್ಸ್ ಮತ್ತು ಎಂಜಿನ್ ಆಯ್ಕೆಯನ್ನು ಎರವಲು ಪಡೆದುಕೊಂಡಿದೆ. ಇದು ತ್ರಿ ಸಿಲಿಂಡರ್ ಪ್ರೇರಿತ 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಭರ್ಜರಿ ಮೈಲೇಜ್ ಖಾತ್ರಿಪಡಿಸುತ್ತಿದ್ದು, ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು ಸೇರಿದಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಮಹೀಂದ್ರಾ ಥಾರ್ ಅರ್ಮಾಡ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಹೀಂದ್ರಾ ಥಾರ್ ಕಾರಿನಲ್ಲಿ 3 ಡೋರ್ ಆವೃತ್ತಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿದ್ದು, ಇದೀಗ ಥಾರ್ ಆರ್ಮಾಡ್ ಆವೃತ್ತಿಯು ಹೆಚ್ಚಿನ ವ್ಹೀಲ್ ಬೆಸ್ ಸೌಲಭ್ಯದೊಂದಿಗೆ 5 ಡೋರ್ ಸೌಲಭ್ಯದೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಇದು ಸದ್ಯ ಖರೀದಿಗೆ ಲಭ್ಯವಿರುವ ಥಾರ್ ಕಾರಿಗಿಂತಲೂ ಹೆಚ್ಚಿನ ಮಟ್ಟದ ಉದ್ದಳತೆಯೊಂದಿಗೆ ಆರಾಮದಾಯಕ ಒಳಾಂಗಣ ಸೌಲಭ್ಯವನ್ನು ಪಡೆದುಕೊಳ್ಳಲಿದೆ. 5 ಡೋರ್ ಸೌಲಭ್ಯದೊಂದಿಗೆ ಹೊಸ ಆವೃತ್ತಿಯು ಎಸ್ ಯುವಿ ಇಷ್ಟಪಡುವ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದ್ದು, ಸಾಮಾನ್ಯ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ನೊಂದಿಗೆ ರೂ. 1 ಲಕ್ಷದಿಂದ ರೂ. 1.50 ಲಕ್ಷದಷ್ಟು ದುಬಾರಿಯಾಗಿರಲಿದೆ.

ನಿಸ್ಸಾನ್ ಎಕ್ಸ್-ಟ್ರಯಲ್

ಹೊಸ ಎಕ್ಸ್-ಟ್ರಯಲ್ ಕಾರು ಈಗಾಗಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಸಾಕಷ್ಟು ಬೇಡಿಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಇದೀಗ ಭಾರತದಲ್ಲೂ ಹೊಸ ಸಂಚಲನ ಮೂಡಿಸುವ ತವಕದಲ್ಲಿದೆ. ಹೊಸ ಕಾರಿನಲ್ಲಿರುವ ಫೀಚರ್ಸ್ ಮತ್ತು ಎಂಜಿನ್ ಪರ್ಫಾಮೆನ್ಸ್ ಆಯ್ಕೆ ಕುರಿತಾದ ಪ್ರಮುಖ ಮಾಹಿತಿಗಳು ಬಹಿರಂಗವಾಗಿದ್ದು, ಇದು ಸಂಪೂರ್ಣವಾಗಿ ಆಮದು (ಸಿಬಿಯು) ಮಾದರಿಯಾಗಿ ಮಾರಾಟಗೊಳ್ಳಲಿದೆ. ಹೊಸ ಕಾರು ದುಬಾರಿ ಬೆಲೆ ಹೊಂದಿರುವ ಟೊಯೊಟಾ ಫಾರ್ಚೂನ್ ಗೆ ಉತ್ತಮ ಪೈಪೋಟಿಯಾಗಲಿದ್ದು, ಇದು ಪವರ್ ಫುಲ್ 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಮ್ಯಾನವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಗಳ ಆಯ್ಕೆ ಮೂಲಕ ಗರಿಷ್ಠ 204 ಹಾರ್ಸ್ ಪವರ್ ಮತ್ತು 305 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದನ್ನೂ ಓದಿ: ಹೈ-ಬೀಮ್ ಹೆಡ್‌ಲೈಟ್ ಬಳಕೆ ಮಾಡುವ ವಾಹನ ಮಾಲೀಕರಿಗೆ ಭಾರೀ ದಂಡ ಫಿಕ್ಸ್

ಹ್ಯುಂಡೈ ಅಲ್ಕಾಜರ್ ಫೇಸ್ ಲಿಫ್ಟ್ 

ಹ್ಯುಂಡೈ ಕಂಪನಿಯು ಕ್ರೆಟಾ ಫೇಸ್ ಲಿಫ್ಟ್ ನಲ್ಲಿ ಪರಿಚಯಿಸಲಾದ ಹೊಸ ಬದಲಾವಣೆಗಳನ್ನು ಇದೀಗ ಅಲ್ಕಾಜರ್ ಫೇಸ್ ಲಿಫ್ಟ್ ಪರಿಚಯಿಸುವುದಕ್ಕೆ ಮುಂದಾಗಿದೆ. ಅಲ್ಕಾಜರ್ ಫೇಸ್ ಲಿಫ್ಟ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಹೊಂದಿರಲಿದ್ದು, ಇದು 7 ಸೀಟರ್ ಇಷ್ಟಪಡುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿರಲಿದೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ