Upcoming SUV’s: ಬಿಡುಗಡೆಯಾಗಲಿರುವ ಟಾಪ್ 5 ಹೊಸ ಎಸ್ ಯುವಿ ಕಾರುಗಳಿವು!

ಭಾರತದಲ್ಲಿ ಹೊಸ ಕಾರುಗಳ ಅಬ್ಬರ ಹೆಚ್ಚುತ್ತಿದ್ದು, ಈ ತಿಂಗಳಾಂತ್ಯಕ್ಕೆ ಹಲವು ಹೊಸ ಕಾರು ಮಾದರಿಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿವೆ.

Upcoming SUV's: ಬಿಡುಗಡೆಯಾಗಲಿರುವ ಟಾಪ್ 5 ಹೊಸ ಎಸ್ ಯುವಿ ಕಾರುಗಳಿವು!
ಹೊಸ ಎಸ್ ಯುವಿ ಕಾರುಗಳು
Follow us
|

Updated on: Feb 19, 2024 | 10:32 PM

ಭಾರತೀಯ ಕಾರು ಮಾರುಕಟ್ಟೆಗಳಲ್ಲಿ ಹೊಸ ಕಾರುಗಳ(New Cars)  ಅಬ್ಬರ ಹೆಚ್ಚುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಎಸ್ ಯುವಿ ಮಾದರಿಗಳು ಸಹ ಪ್ರಮುಖ ಆಕರ್ಷಣೆಯಾಗಿವೆ. ಹೊಸ ಎಸ್ ಯುವಿ ಕಾರುಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲದೆ ಸಿಎನ್ ಜಿ ಮತ್ತು ಎಲೆಕ್ಟ್ರಿಕ್ ಮಾದರಿಗಳು ಸಹ ಬಿಡುಗಡೆಯ ಸಿದ್ದತೆಯಲ್ಲಿವೆ.

ಟಾಟಾ ಕರ್ವ್

ಬಿಡುಗಡೆಯಾಗಲಿರುವ ಹೊಸ ಎಸ್ ಯುವಿ ಕಾರುಗಳಲ್ಲಿ ಟಾಟಾ ಮೋಟಾರ್ಸ್ ನಿರ್ಮಾಣದ ಕರ್ವ್ ಭಾರೀ ನೀರಿಕ್ಷೆ ಹುಟ್ಟುಹಾಕಿದೆ. ಕರ್ವ್ ಕಾರು ಮಾದರಿಯನ್ನು ಟಾಟಾ ಕಂಪನಿಯು ಸದ್ಯಕ್ಕೆ ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆ ಮಾಡುತ್ತಿದ್ದು, ತದನಂತರವಷ್ಟೇ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ. ಹೊಸ ಕಾರು ಕ್ರೆಟಾಗೆ ಪೈಪೋಟಿಯಾಗಿ 1.5 ಲೀಟರ್ ಡೀಸೆಲ್ ಎಂಜಿನ್ ನಲ್ಲಿ ಬಿಡುಗಡೆಯಾಗಲಿದ್ದು, ಇದು ಭರ್ಜರಿ ಮೈಲೇಜ್ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ.

ಇದನ್ನೂ ಓದಿ: 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಫೇಮಸ್ ಎಸ್‌ಯುವಿ ಕಾರುಗಳಿವು!

ಹ್ಯುಂಡೈ ಕ್ರೆಟಾ ಎನ್ ಲೈನ್

ಹೊಸ ಎಸ್ ಯುವಿ ಕಾರುಗಳಲ್ಲಿ ಹ್ಯುಂಡೈ ಕ್ರೆಟಾ ಎನ್ ಲೈನ್ ಆವೃತ್ತಿ ಕೂಡಾ ಪ್ರಮುಖವಾಗಿದೆ. ಇದು ಸಾಮಾನ್ಯ ಆವೃತ್ತಿಗಿಂತ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಗಳನ್ನು ಹೊಂದಿರಲಿದೆ. ಹ್ಯುಂಡೈ ಕ್ರೆಟಾ ಎನ್ ಲೈನ್ ವಿಶೇಷವಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಅಭಿವೃದ್ದಿಗೊಂಡಿದ್ದು, ಇದು ಎನ್ ಲೈನ್ ಬ್ಯಾಡ್ಜ್ ಸೇರಿದಂತೆ ಹಲವಾರು ಸ್ಪೋರ್ಟಿ ಫೀಚರ್ಸ್ ಹೊಂದಿರುತ್ತದೆ. ಜೊತೆಗೆ ಸಾಮಾನ್ಯ ಮಾದರಿಗಿಂತಲೂ ಹೆಚ್ಚು ಹಾರ್ಸ್ ಪವರ್ ಉತ್ಪಾದಿಸಲಿದ್ದು, ಇದು ಸಾಮಾನ್ಯ ಮಾದರಿಗಿಂತಲೂ ರೂ. 1.50 ಲಕ್ಷದಷ್ಟು ದುಬಾರಿಯಾಗಿರಲಿದೆ.

ಹೊಸ ಮಹೀಂದ್ರಾ ಎಕ್ಸ್ ಯುವಿ300

ಕರ್ವ್ ಮತ್ತು ಕ್ರೆಟಾ ಎನ್ ಲೈನ್ ನಂತರ ಬಿಡುಗಡೆಯಾಗಲಿರುವ ಪ್ರಮುಖ ಎಸ್ ಯುವಿಗಳಲ್ಲಿ ಮಹೀಂದ್ರಾ ಎಕ್ಸ್ ಯುವಿ300 ಕೂಡಾ ಗಮನಸೆಳೆಯುತ್ತಿದೆ. ಇದು ಮುಂದಿನ ಕೆಲವೇ ದಿನಗಳಲ್ಲಿ ಭಾರೀ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಆವೃತ್ತಿಯಲ್ಲಿ ಸಂಪೂರ್ಣವಾಗಿ ಬದಲಾವಣೆ ಮಾಡಲಾದ ಫ್ರಂಟ್ ಗ್ರಿಲ್, ಬಂಪರ್ ಮತ್ತು ಸಿ ಸೇಫ್ ಎಲ್ಇಡಿ ಡಿಆರ್ ಎಲ್ ಗಳನ್ನು ನೀಡಲಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಹೊಸ ಇನ್ಪೋಟೈನ್ಮೆಂಟ್ ಸಿಸ್ಟಂ ನೀಡಲಾಗಿದ್ದು, ಇದು 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

ಇದನ್ನೂ ಓದಿ: ಮೊದಲ ಬಾರಿ ಹೊಸ ಕಾರು ಖರೀದಿಸುತ್ತಿದ್ದೀರಾ? ಈ ವಿಚಾರಗಳು ತಪ್ಪದೇ ತಿಳಿದಿರಲಿ..

ಹ್ಯುಂಡೈ ಅಲ್ಕಾಜರ್ ಫೇಸ್ ಲಿಫ್ಟ್ ಮತ್ತು ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಬಿಡುಗಡೆಯಾಗಲಿರುವ ಹೊಸ ಎಸ್ ಯುವಿ ಕಾರುಗಳಲ್ಲಿ ಹ್ಯುಂಡೈ ಅಲ್ಕಾಜರ್ ಫೇಸ್ ಲಿಫ್ಟ್ ಕೂಡಾ ಒಂದಾಗಿದೆ. ಅಲ್ಕಾಜರ್ ಫೇಸ್ ಲಿಫ್ಟ್ ಮಾದರಿಯು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ಕ್ರೆಟಾ ಮಾದರಿಯೆಂತೆ ಎಡಿಎಎಸ್ ಫೀಚರ್ಸ್ ಸಹ ಹೊಂದಿರಲಿದೆ. ಜೊತೆಗೆ ಹೊಸ ಕಾರುಗಳಲ್ಲಿ ಮಹೀಂದ್ರಾ ಫೈವ್ ಡೋರ್ ವರ್ಷನ್ ಸಹ ಬಿಡುಗಡೆಯಾಗುತ್ತಿದೆ. ಇದು ಸದ್ಯ ಮಾರುಕಟ್ಟೆಯಲ್ಲಿ ತ್ರಿ ಡೋರ್ ಮಾದರಿಗಿಂತಲೂ ವಿಭಿನ್ನವಾಗಿರಲಿದ್ದು, ಹೆಚ್ಚಿನ ಮಟ್ಟದ ಕ್ಯಾಬಿನ್ ಸ್ಪೆಸ್ ಹೊಂದಿರಲಿದೆ. ಆದರೆ ಹೊಸ ಕಾರಿನ ಎಂಜಿನ್ ಆಯ್ಕೆಯು ಸಾಮಾನ್ಯ ಮಾದರಿಯಲ್ಲಿರುವಂತೆಯೇ ಮುಂದುವರಿಯಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್