ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ(New Cars) ಖರೀದಿ ಪ್ರಕ್ರಿಯೆ ಜೋರಾಗಿದ್ದು, ಹೊಸ ಕಾರಗಳಲ್ಲಿ ಎಸ್ ಯುವಿ(SUV) ಆವೃತ್ತಿಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೊಸದಾಗಿ ಬಿಡುಗಡೆಯಾಗಲಿರುವ ಪ್ರಮುಖ ಎಸ್ ಯುವಿ ಆವೃತ್ತಿಗಳು ಏಪ್ರಿಲ್ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಎಲೆಕ್ಟ್ರಿಕ್ ಕಾರು(Electric Cars) ಮಾದರಿಗಳು ಸಹ ಗಮನಸೆಳೆಯಲಿವೆ.
ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಪ್ರಮುಖ ಆವೃತ್ತಿಯಾಗಿದೆ. ಇದು ಮುಂದಿನ ತಿಂಗಳ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ ಯುವಿ ವಿಭಾಗಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು ಒನ್ ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ. ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಇದು ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ ಯುವಿ ತ್ರಿ ಡಬಲ್ ಒ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.
ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಂಜಿ ಮೋಟಾರ್ ಕಂಪನಿ ಶೀಘ್ರದಲ್ಲಿ ಮತ್ತಷ್ಟು ಇವಿ ಕಾರುಗಳ ಬಿಡುಗಡೆಗೆ ಸಿದ್ದವಾಗ್ತಿದೆ. ಜೆಡ್ಎಸ್ ಇವಿ ನಂತರ ಇದೀಗ ಕಾಮೆಟ್ ಮೈಕ್ರೊ ಇವಿ ಬಿಡುಗಡೆಯ ಯೋಜನೆಯಲ್ಲಿದೆ. ಪರ್ಸನಲ್ ಮೊಲಿಬಿಟಿ ಉದ್ದೇಶಕ್ಕಾಗಿ ಈ ಹೊಸ ಇವಿ ಕಾರು ಬಿಡುಗಡೆಯಾಗುತ್ತಿದ್ದು, ಇದು 25 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದೆ. ಇದರೊಂದಿಗೆ ಹೊಸ ಇವಿ ಕಾರು ಪ್ರತಿ ಚಾರ್ಜ್ ಗೆ ಗರಿಷ್ಠ 250 ಕಿ.ಮೀ ರೇಂಜ್ ಹೊಂದಿರಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 5 ಲಕ್ಷ ಆರಂಭಿಕ ಬೆಲೆ ಹೊಂದಿರಲಿದೆ.
ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿ ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ಹೊಸ ಕಾರು ಮಾದರಿಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿ ವಿನೂತನ ಕಾರು ಮಾದರಿಯನ್ನ ಬಿಡುಗಡೆ ಮಾಡುತ್ತಿದೆ. ಹೊಸ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಸ್ ಯುವಿ ಮಾದರಿಯಾಗಿದ್ದು, ಇದು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಕಾರು ಏಪ್ರಿಲ್ ಅಂತ್ಯಕ್ಕೆ ಅನಾವರಣಗೊಳ್ಳಲಿದ್ದು, ಇದು ವಿವಿಧ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.
ಹೊಸ ಕಾರುಗಳ ಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ನಿರ್ಮಾಣದ ಪಂಚ್ ಇವಿ ಸಹ ಒಂದಾಗಿದೆ. ಸದ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಹೊಂದಿರುವ ಪಂಚ್ ಕಾರು ಮುಂಬರುವ ದಿನಗಳಲ್ಲಿ CNG ಜೊತೆಗೆ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವ ಸಿದ್ದತೆಯಲ್ಲಿದೆ. ಹೊಸ ಪಂಚ್ ಇವಿ ಕಾರು ಟಿಯಾಗೋ ಇವಿ ಕಾರಿನಲ್ಲಿರುವಂತೆ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್ ಗೆ 280 ರಿಂದ 350 ಕಿ.ಮೀ ಮೈಲೇಜ್ ನೀಡಲಿದೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 13 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳು ನೀರಿಕ್ಷೆಯಿದೆ.
Published On - 7:10 pm, Mon, 27 March 23