ಕೋಟಿ ಬೆಲೆಯ ಪವರ್ ಫುಲ್ ಐಷಾರಾಮಿ ಕಾರು ಖರೀದಿಸಿದ ‘ಸಿಂಹಪ್ರಿಯಾ’ ಜೋಡಿ
ಸ್ಯಾಂಡಲ್ವುಡ್ ನ ನವಜೋಡಿ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಹೊಸ ಕಾರು ಖರೀದಿಸಿದ್ದು, ಹೊಸ ಕಾರಿನ ವಿತರಣೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡುತ್ತಿದೆ.
ಕನ್ನಡದ ಸಿನಿರಂಗದಲ್ಲಿ ಚಿಟ್ಟೆ ಅಂತಲೇ ಖ್ಯಾತಿ ಪಡೆದಿರುವ ನಟ ವಸಿಷ್ಠ ಸಿಂಹ (Vasishta Simha) ಮತ್ತು ಪ್ರತಿಭಾನ್ವಿತ ನಟಿ ಹರಿಪ್ರಿಯಾ (Haripriya) ಅವರು ಇತ್ತೀಚೆಗೆ ಹೊಸ ಕಾರು ಖರೀದಿ ಮಾಡಿದ್ದಾರೆ. ಹೊಸ ಕಾರಿನ ವಿತರಣೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಹೊಸ ಕಾರು ಖರೀದಿಯನ್ನು ಸಂಭ್ರಮಿಸಿದ್ದಾರೆ. ಅಭಿಮಾನಿಗಳು ಕೂಡಾ ಇನ್ಸ್ಟಾಗ್ರಾಮ್ನಲ್ಲಿ ಕಾಮೆಂಟ್ ಮೂಲಕ ತಮ್ಮ ನೆಚ್ಚಿನ ನಟ-ನಟಿಗೆ ಶುಭ ಕೋರುತ್ತಿದ್ದಾರೆ.
ಇನ್ನು ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಖರೀದಿ ಮಾಡಿರುವ ಹೊಸ ಕಾರು ಸಾಕಷ್ಟು ವಿಶೇಷತೆಗಳನ್ನು ಹೊಂದಿದ್ದು, ಐಷಾರಾಮಿ ಸೌಲಭ್ಯಗಳೊಂದಿಗೆ ದುಬಾರಿ ಬೆಲೆ ಹೊಂದಿದೆ. ಮರ್ಸಿಡಿಸ್ ಬೆಂಝ್ ನಿರ್ಮಾಣದ ಜಿಎಲ್ಇ 450ಡಿ ಆವೃತ್ತಿಯು ಹಲವಾರು ವಿಶೇಷತೆಗಳನ್ನು ಹೊಂದಿದ್ದು, ಇದು ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಪವರ್ ಫುಲ್ ಎಸ್ ಯುವಿ ಮಾದರಿಯಾಗಿದೆ.
ಮರ್ಸಿಡಿಸ್ ಬೆಂಝ್ ಜಿಎಲ್ಇ 450ಡಿ ಆವೃತ್ತಿಯು ಸದ್ಯ ಬೆಂಗಳೂರಿನಲ್ಲಿ ಆನ್ ರೋಡ್ ಪ್ರಕಾರ ರೂ. 1.44 ಕೋಟಿ ಬೆಲೆ ಹೊಂದಿದ್ದು, ಇದರಲ್ಲಿ 362 ಹಾರ್ಸ್ ಪವರ್ ಮತ್ತು 750 ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲ 3.0 ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. ಇದು ಸಿಕ್ಸ್ ಸಿಲಿಂಡರ್ ವೈಶಿಷ್ಟ್ಯತೆಯೊಂದಿಗೆ 9-ಸ್ಪೀಡ್ ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಜೋಡಣೆ ಹೊಂದಿದ್ದು, ಪರ್ಫಾಮೆನ್ಸ್ ಗಾಗಿ 4 ಮ್ಯಾಟಿಕ್ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಪಡೆದುಕೊಂಡಿದೆ.
ಇದನ್ನೂ ಓದಿ: 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಫೇಮಸ್ ಎಸ್‌ಯುವಿ ಕಾರುಗಳಿವು!
ಜಿಎಲ್ಇ ಎಸ್ ಯುವಿ ಮಾದರಿಯು ಮರ್ಸಿಡಿಸ್ ಬೆಂಝ್ ಎಸ್ ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಬೇಡಿಕೆಯಲ್ಲಿರುವ ಆವೃತ್ತಿಯಾಗಿದ್ದು, ಇದು 5 ಸೀಟರ್ ಸೌಲಭ್ಯದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಹೊಸ ಕಾರು 4926 ಎಂಎಂ ಉದ್ದಳತೆ ಮತ್ತು 2995 ಎಂಎಂ ವ್ಹೀಲ್ ಬೆಸ್ ನೊಂದಿಗೆ ವಿಶಾಲವಾದ ಕ್ಯಾಬಿನ್ ಒದಗಿಸಲಿದ್ದು, ಇದರಲ್ಲಿ 630 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದೆ.
ಇದನ್ನೂ ಓದಿ: ಸಖತ್ ಕ್ಯೂಟ್ ಆಗಿರೋ ಇವಿ ಕಾರು ಖರೀದಿಸಿದ ನಟಿ ನಮ್ರತಾ ಗೌಡ
ಜೊತೆಗೆ ಹೊಸ ಕಾರಿನಲ್ಲಿ ಐಷಾರಾಮಿ ಕಾರು ಅನುಭವ ಹೆಚ್ಚಿಸಲು 12.3 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಲೆದರ್ ಆಸನಗಳು, 64 ಬಗೆಗೆ ವಿವಿಧ ಆ್ಯಂಬಿಯೆಂಟ್ ಲೈಟಿಂಗ್ಸ್, ಪನೊರಮಿಕ್ ಸನ್ ರೂಫ್ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದೆ. ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಟ್ರಾಫಿಕ್ ಸಿಗ್ನಲ್ ರೆಕಾಗ್ನೈಸ್, ಬ್ಲೈಂಡ್ ಸ್ಪಾಟ್ ಮಾನಿಟರ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ ಮತ್ತು ಅಡಾಪ್ಟಿವ್ ಹೈ ಬೀಮ್ ಅಸಿಸ್ಟ್ ಸೌಲಭ್ಯಗಳನ್ನು ಒಳಗೊಂಡಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗಿದೆ.