AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VinFast: ಬಿಡುಗಡೆಗೆ ಸಿದ್ದವಾದ ಭರ್ಜರಿ ಮೈಲೇಜ್ ಪ್ರೇರಿತ ವಿನ್‌ಫಾಸ್ಟ್ ಇವಿ ಕಾರುಗಳು!

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನಗುಣವಾಗಿ ಹಲವಾರು ಹೊಸ ಇವಿ ವಾಹನಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ದೇಶಿಯ ಮಾರುಕಟ್ಟೆಯಲ್ಲಿ ಇವಿ ವಾಹನಗಳ ಬೇಡಿಕೆ ಅರಿತಿರುವ ವಿನ್​ಫಾಸ್ಟ್ ಕೂಡಾ ಭಾರತಕ್ಕೆ ವಿವಿಧ ಇವಿ ಕಾರುಗಳೊಂದಿಗೆ ಎಂಟ್ರಿ ನೀಡುತ್ತಿದೆ.

VinFast: ಬಿಡುಗಡೆಗೆ ಸಿದ್ದವಾದ ಭರ್ಜರಿ ಮೈಲೇಜ್ ಪ್ರೇರಿತ ವಿನ್‌ಫಾಸ್ಟ್ ಇವಿ ಕಾರುಗಳು!
ಬಿಡುಗಡೆಗೆ ಸಿದ್ದವಾದ ಭರ್ಜರಿ ಮೈಲೇಜ್ ಪ್ರೇರಿತ ವಿನ್‌ಫಾಸ್ಟ್ ಇವಿ ಕಾರುಗಳು!
Praveen Sannamani
|

Updated on:Apr 18, 2024 | 6:07 PM

Share

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನಗುಣವಾಗಿ ಹಲವಾರು ಹೊಸ ಇವಿ ವಾಹನಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ದೇಶಿಯ ಮಾರುಕಟ್ಟೆಯಲ್ಲಿ ಇವಿ ವಾಹನಗಳ ಬೇಡಿಕೆ ಅರಿತಿರುವ ವಿನ್​ಫಾಸ್ಟ್ (VinFast) ಕೂಡಾ ಭಾರತಕ್ಕೆ ವಿವಿಧ ಇವಿ ಕಾರುಗಳೊಂದಿಗೆ ಎಂಟ್ರಿ ನೀಡುತ್ತಿದೆ. ವಿವಿಧ ಬಗೆಯ ಇವಿ ಕಾರುಗಳ ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ಈಗಾಗಲೇ ಹೊಸ ಸಂಚಲನ ಮೂಡಿಸಿರುವ ವಿನ್​ಫಾಸ್ಟ್ ಕಂಪನಿ ಇದೀಗ ಭಾರತದಲ್ಲೂ ಖರೀದಿಗೆ ಲಭ್ಯವಾಗುತ್ತಿದೆ.

ವಿಯೆಟ್ನಾಂ ಮೂಲದ ಜನಪ್ರಿಯ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾಗಿರುವ ವಿನ್​ಫಾಸ್ಟ್ ಭಾರತದಲ್ಲಿ ಇವಿ ವಾಹನ ಉದ್ಯಮಕ್ಕೆ ಎಂಟ್ರಿ ನೀಡಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆ ಸಿದ್ದಪಡಿಸಿದೆ. ಭಾರತದಲ್ಲಿ ಇವಿ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕಾಗಿ ಈಗಾಗಲೇ ವಿವಿಧ ಹಂತದ ಮಾರುಕಟ್ಟೆ ಅಧ್ಯಯನ ನಡೆಸುತ್ತಿದ್ದು, ಮೊದಲ ಹಂತದಲ್ಲಿಯೇ ಎರಡು ವಿನೂತನ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಸುಳಿವು ನೀಡಿದೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಇರಲಿ ಈ ಬಗ್ಗೆ ಎಚ್ಚರ!

ವಿನ್​ಫಾಸ್ಟ್ ಕಂಪನಿಯು ಮಧ್ಯಮ ಕ್ರಮಾಂಕದ ಇವಿ ಕಾರುಗಳ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಭಾರತದಲ್ಲಿ ಮೊದಲ ಹಂತವಾಗಿ ವಿಎಫ್5 ಮತ್ತು ವಿಎಫ್ ಇ34 ಎಲೆಕ್ಟ್ರಿಕ್ ಎಸ್ ಯುವಿ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ವಿನ್​ಫಾಸ್ಟ್ ವಿಎಫ್5 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಲ್ಲಿರುವ ಟಾಟಾ ನೆಕ್ಸಾನ್ ಇವಿ ಮತ್ತು ಮಹೀಂದ್ರಾ ಎಕ್ಸ್ ಯುವಿ400 ಇವಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ. ಇದು ವಿನೂತನ ಫೀಚರ್ಸ್ ಮತ್ತು ಪರ್ಫಾಮೆನ್ಸ್ ನೊಂದಿಗೆ 320 ರಿಂದ 380 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿದೆ.

ಹಾಗೆಯೇ ವಿನ್​ಫಾಸ್ಟ್ ಕಂಪನಿಯು ಬಿಡುಗಡೆ ಮಾಡಲಿರುವ ವಿಎಫ್ ಇ34 ಎಲೆಕ್ಟ್ರಿಕ್ ಕಾರು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಇದು ಭಾರತದಲ್ಲಿ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಟಾಟಾ ಕರ್ವ್ ಇವಿ, ಹ್ಯುಂಡೈ ಕ್ರೆಟಾ ಇವಿ ಕಾರುಗಳೊಂದಿಗೆ ಸ್ಪರ್ಧಿಸಲಿದೆ.

ವಿಎಫ್ ಇ34 ಎಲೆಕ್ಟ್ರಿಕ್ ಕಾರು ಕೂಡಾ ಹಲವಾರು ವಿನೂತನ ಫೀಚರ್ಸ್ ಗಳನ್ನು ಪಡೆದುಕೊಂಡಿದ್ದು, ಇದು ಪ್ರತಿ ಚಾರ್ಜ್ ಗೆ 400 ರಿಂದ 450 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದುಕೊಳ್ಳಲಿದೆ. ಸದ್ಯಕ್ಕೆ ಹೊಸ ಇವಿ ಕಾರುಗಳನ್ನು ಸಿಬಿಯು ಆಮದು ನೀತಿ ಅಡಿ ಮಾರಾಟಗೊಳಿಸಲು ನಿರ್ಧರಿಸಿರುವ ವಿನ್​ಫಾಸ್ಟ್ ಕಂಪನಿಯ ಮುಂದಿನ ಕೆಲವೇ ದಿನಗಳಲ್ಲಿ ಭಾರತದಲ್ಲಿಯೇ ಪೂರ್ಣ ಪ್ರಮಾಣದ ಉತ್ಪಾದನಾ ಕಾರ್ಯಾಚರಣೆ ನಡೆಸಲಿದೆ.

ಇದನ್ನೂ ಓದಿ: ಸುರಕ್ಷತೆ ವಿಚಾರದಲ್ಲಿ ಗ್ರಾಹಕರ ಆಕ್ರೋಶಕ್ಕೆ ಗುರಿಯಾದ ಸಿಟ್ರನ್ ಇಸಿ3

ಇನ್ನು ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಘೋಷಣೆ ಮಾಡಿರುವ ವಿನ್​ಫಾಸ್ಟ್ ತಮಿಳುನಾಡು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ತಮಿಳುನಾಡಿನ ತೂತುಕುಡಿಯಲ್ಲಿ ವಿನ್​ಫಾಸ್ಟ್ ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ಆರಂಭಿಸಲಾಗಿದ್ದು, ಇದಕ್ಕಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡಿದೆ. ಮೊದಲ ಹಂತದ ಘಟಕದ ಮೂಲಕ ವಾರ್ಷಿಕವಾಗಿ 1.50 ಲಕ್ಷ ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುವ ಗುರಿಹೊಂದಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿಯೇ ರೂ. 4165 ಕೋಟಿ ಹೂಡಿಕೆ ಮಾಡುತ್ತಿದೆ. ಈ ಮೂಲಕ ಸ್ಥಳೀಯವಾಗಿ 3500 ಉದ್ಯೋಗಿಗಳನ್ನು ಸೃಷ್ಠಿಸುವ ಭರವಸೆ ನೀಡಿದ್ದು, ಈ ಮೂಲಕ ಕಂಪನಿಯು ಮಧ್ಯಮ ಕ್ರಮಾಂಕದ ಕಾರುಗಳು ಮಾತ್ರವಲ್ಲದೆ ಐಷಾರಾಮಿ ಇವಿ ಕಾರುಗಳನ್ನು ಸಹ ಪರಿಚಯಿಸುವ ಯೋಜನೆಯಲ್ಲಿದೆ.

Published On - 6:03 pm, Thu, 18 April 24

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ