ಕ್ರ್ಯಾಶ್ ಟೆಸ್ಟ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ವರ್ಟಸ್!

ಸ್ಕೋಡಾ ಕುಶಾಕ್ ಮತ್ತು ಫೋಕ್ಸ್ ವ್ಯಾಗನ್ ವರ್ಟಸ್ ಸೆಡಾನ್ ಕಾರು ಮಾದರಿಗಳು ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡಿವೆ.

ಕ್ರ್ಯಾಶ್ ಟೆಸ್ಟ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ವರ್ಟಸ್!
ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ವರ್ಟಸ್
Follow us
Praveen Sannamani
|

Updated on:Apr 04, 2023 | 4:38 PM

ದೇಶಿಯ ಮಾರುಕಟ್ಟೆಯಲ್ಲಿ 2.0 ಇಂಡಿಯಾ ಯೋಜನೆಯ ಅಡಿ ವಿವಿಧ ಕಾರು ಮಾದರಿಗಳನ್ನ ಪರಿಚಯಿಸಿರುವ ಫೋಕ್ಸ್ ವ್ಯಾಗನ್(Volkswagen) ಮತ್ತು ಸ್ಕೋಡಾ(Skoda) ಕಂಪನಿಗಳು ಹೊಸ ಕಾರುಗಳ ಸುರಕ್ಷತೆಯಲ್ಲಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿವೆ. ಹೊಸ ಯೋಜನೆ ಅಡಿಯಲ್ಲಿ ಒಟ್ಟು ನಾಲ್ಕು ಕಾರು ಮಾದರಿಗಳನ್ನ ಪರಿಚಯಿಸಿರುವ ಫೋಕ್ಸ್ ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು ನಾಲ್ಕು ಕಾರು ಮಾದರಿಗಳಿಗೂ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿವೆ.

ಹೌದು, ಹೊಸ ಕುಶಾಕ್, ಟೈಗುನ್ ಕಾರುಗಳ ಬಿಡುಗಡೆಯ ನಂತರ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಸ್ಲಾವಿಯಾ(Slavia), ವರ್ಟಸ್(Virtus) ಕಾರುಗಳು ಕೂಡಾ ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಗರಿಷ್ಠ ಸುರಕ್ಷಾ ಫೀಚರ್ಸ್ ಗಳೊಂದಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿವೆ.

ಎಂಕ್ಯೂಬಿ-ಎo ಇನ್ ಪ್ಲ್ಯಾಟ್ ಫಾರ್ಮ್ ಆಧರಿಸಿರುವ ಹೊಸ ಸ್ಲಾವಿಯಾ ಮತ್ತು ವರ್ಟಸ್ ಕಾರು ಮಾದರಿಗಳು ಹೆಚ್ಚಿನ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಶೇ.90 ರಷ್ಟು ಸ್ಥಳೀಯ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಂಡಿವೆ. ಜೊತೆಗೆ ಎರಡು ಕಾರು ಮಾದರಿಗಳಲ್ಲೂ ಹೆಚ್ಚಿನ ಮಟ್ಟದ ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ನೀಡಲಾಗಿದ್ದು, ಅಪಘಾತದ ವೇಳೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸುತ್ತವೆ.

ಗ್ಲೋಬಲ್ ಎನ್ ಸಿಎಪಿ ಸಂಸ್ಥೆಯು ಭಾರತದಲ್ಲಿ ಉತ್ಪಾದನೆಯಾಗುವ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ #SAFERCARSFORINDIA ಅಭಿಯಾನ ಕೈಗೊಂಡಿದ್ದು, ಹೊಸ ಸುರಕ್ಷಾ ಅಭಿಯಾನದ ನಂತರ ಕಾರುಗಳ ಸುರಕ್ಷತೆಯು ಸಾಕಷ್ಟು ಸುಧಾರಣೆ ಕಂಡಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ಕಾರು ಮಾದರಿಯಾಗಿ ಘೋಷಿಸಲು ಕನಿಷ್ಠ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವ ಅವಶ್ಯಕತೆಯಿದ್ದು, ಮೂರಕ್ಕಿಂತ ಕಡಿಮೆ ರೇಟಿಂಗ್ಸ್ ಪಡೆದುಕೊಳ್ಳುವ ಕಾರುಗಳನ್ನು ಕಳಪೆ ಕಾರುಗಳೆಂದು ಕರೆಯಲಾಗುತ್ತದೆ. ಇದೀಗ ಸ್ಲಾವಿಯಾ ಮತ್ತು ವರ್ಟಸ್ ಕಾರುಗಳು ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್ ಹೊಂದಿದ್ದು, 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿವೆ.

ಇದನ್ನೂ ಓದಿ: ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಿವು..

ಹೊಸ ಸ್ಲಾವಿಯಾ ಕಾರಿನಲ್ಲಿ ಸ್ಕೋಡಾ ಕಂಪನಿಯು ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಹಾಗೆಯೇ ಹೊಸ ವರ್ಟಸ್ ಕಾರಿನಲ್ಲಿ ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳಿದ್ದು, ಮಲ್ಟಿ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವಾರು ಸುಧಾರಿತ ಸೌಲಭ್ಯಗಳಿವೆ.

ಸ್ಲಾವಿಯಾ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ದೆಹಲಿ ಆರಂಭಿಕವಾಗಿ ರೂ. 11.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.45 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಎಲೆಕ್ಟ್ರಿಕ್ ಕಾರುಗಳ ಮೈಲೇಜ್ ಹೆಚ್ಚಿಸಲು ಈ ಟಿಪ್ಸ್ ಫಾಲೋ ಮಾಡಿ..

ಹಾಗೆಯೇ ಹೊಸ ವರ್ಟಸ್ ಕಾರು ಮಾದರಿಯು ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಪರ್ಫಾಮೆನ್ಸ್ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.32 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.42 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಪೋಕ್ಸ್ ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು ಹೊಸ ಕಾರುಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದರಲ್ಲಿ ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್‌ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿವೆ.

Published On - 4:38 pm, Tue, 4 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ