ಚಲಿಸುತ್ತಿರುವಾಗಲೇ ಹೊತ್ತಿ ಉರಿದ ವೊಲ್ವೊ ಐಷಾರಾಮಿ ಎಲೆಕ್ಟ್ರಿಕ್ ಕಾರು

ಐಷಾರಾಮಿ ವೊಲ್ವೊ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಕಾರು ಹೊತ್ತಿ ಉರಿದ ಘಟನೆ ನಡೆದಿದ್ದು, ಬೆಂಕಿ ಅವಘಡದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಚಲಿಸುತ್ತಿರುವಾಗಲೇ ಹೊತ್ತಿ ಉರಿದ ವೊಲ್ವೊ ಐಷಾರಾಮಿ ಎಲೆಕ್ಟ್ರಿಕ್ ಕಾರು
ವೊಲ್ವೊ ಐಷಾರಾಮಿ ಎಲೆಕ್ಟ್ರಿಕ್ ಕಾರು
Follow us
|

Updated on: Jan 29, 2024 | 9:56 PM

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ (Electric Vehicles) ಬಳಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಸಾಕಷ್ಟು ಜನಪ್ರಿಯವಾಗುತ್ತಿರುವ ಎಲೆಕ್ಟ್ರಿಕ್ ವಾಹನಗಳು ಭರ್ಜರಿವಾಗಿ ಮಾರಾಟಗೊಳ್ಳುತ್ತಿವೆ. ಆದರೆ ಎಲೆಕ್ಟ್ರಿಕ್ ವಾಹನಗಳಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡ ಪ್ರಕರಣಗಳು ಪ್ರಯಾಣಿಕರಿಗೆ ಎಷ್ಟು ಸುರಕ್ಷತೆ ಎನ್ನುವ ಪ್ರಶ್ನೆಗಳು ಕಾಡತೊಡಗಿವೆ.

ಎಲೆಕ್ಟ್ರಿಕ್ ವಾಹನಗಳು ಸಾಕಷ್ಟು ಸುರಕ್ಷಿತವಾಗಿಲ್ಲ ಎನ್ನುವ ಗೊಂದಲಗಳ ನಡುವೆ ಇತ್ತೀಚೆಗೆ ವೊಲ್ವೊ ಐಷಾರಾಮಿ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಕಾರೊಂದು ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಸುರಕ್ಷಿತಯ ಬಗೆಗಿನ ಗೊಂದಲಗಳಿಗೆ ಮತ್ತಷ್ಟು ಪುಷ್ಠಿ ನೀಡುವಂತಾಗಿದೆ. ಛತ್ತೀಸ್‌ಗಢದ ಹೆದ್ದಾರಿಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿಗೆ ಹೊಸ ಕಾರು ಖರೀದಿಸಿದ್ದೀರಾ? ಹಾಗಾದ್ರೆ ಈ ಟಿಪ್ಸ್ ತಪ್ಪದೇ ಪಾಲಿಸಿ..

ಇತ್ತೀಚೆಗೆ ಖರೀದಿ ಮಾಡಲಾಗಿದ್ದ ಹೊಸ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಕಾರು ಚಲಿಸುತ್ತಿದ್ದ ಸಂದರ್ಭದಲ್ಲಿಯೇ ಅಗ್ನಿಅಪಘಡಕ್ಕೆ ತುತ್ತಾಗಿದ್ದು, ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಸಣ್ಣದಾಗಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಕಾರು ನಿಲ್ಲಿಸಲಾಗಿದೆ. ಬೆಂಕಿ ಹೊತ್ತಿಕೊಂಡಿರುವುದು ಮಾಲೀಕನಿಗೆ ಗೊತ್ತಾದ ತಕ್ಷಣವೇ ಕಾರಿನಿಂದ ಹೊರಬಂದಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಆವರಿಸಿಕೊಂಡಿದೆ.

ಅನಿರೀಕ್ಷಿತ ಘಟನೆಗೆ ನಿಖರವಾದ ಕಾರಣ ಏನು ಎನ್ನುವ ಕುರಿತು ಈಗಾಗಲೇ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಜಾಗತಿಕವಾಗಿ ಸುರಕ್ಷಿತ ಕಾರ್ ಬ್ರಾಂಡ್‌ಗಳಲ್ಲಿ ಒಂದಾಗಿರುವ ವೊಲ್ವೊ ನಿರ್ಮಾಣದ ಇವಿ ಕಾರಿನಲ್ಲಿ ಅಗ್ನಿ ಅವಘಡ ಸಂಭವಿಸಿರುವುದಕ್ಕೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ವೊಲ್ವೊ ಕಂಪನಿಯು ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲವಾದರೂ ಎಲೆಕ್ಟ್ರಿಕ್ ವಾಹನ ಉತ್ಸಾಹಿಗಳು ತಮ್ಮ ವಾಹನಗಳ ಸುರಕ್ಷತಾ ಮಾನದಂಡಗಳ ಬಗ್ಗೆ ಭರವಸೆ ನೀಡಲು ಕಂಪನಿಯಿಂದ ವಿವರಣೆಯನ್ನು ನಿರೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ವಾಹನಗಳಿಂತಲೂ ಎಲೆಕ್ಟ್ರಿಕ್ ವಾಹನಗಳ ಇನ್ಸುರೆನ್ಸ್ ಯಾಕೆ ದುಬಾರಿ ಗೊತ್ತಾ?

ಇನ್ನು ದೇಶಾದ್ಯಂತ ದಾಖಲಾಗಿರುವ ಪ್ರಮುಖ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಪರಿಶೀಲನೆ ಮಾಡಿರುವ ಭಾರತದ ರಕ್ಷಣಾ ಸಂಶೋಧನಾ ಇಲಾಖೆಯು ಬೆಂಕಿ ಹೊತ್ತಿಕೊಂಡ ಹೆಚ್ಚಿನ ಎಲೆಕ್ಟ್ರಿಕ್ ವಾಹನಗಳಲ್ಲಿ ಅವುಗಳ ಬ್ಯಾಟರಿ ನಿರ್ವಹಣಾ ವ್ಯವಸ್ಥೆಯಲ್ಲಿನ ಪ್ರಮುಖ ಸಾಫ್ಟ್‌ವೇರ್ ದೋಷಗಳಿಂದಲೇ ಸಂಭವಿಸಿವೆ ಎನ್ನಲಾಗಿದೆ. ಹೀಗಾಗಿ ವೊಲ್ವೊ ಹೊಸ ಇವಿ ಕಾರಿನಲ್ಲೂ ಇಂತದ್ದೆ ಸಮಸ್ಯೆ ಎದುರಾಗಿರುವ ಸಾಧ್ಯತೆಗಳಿದ್ದು, ಕಂಪನಿಯ ಅಧಿಕೃತ ಹೇಳಿಕೆ ಬಿಡುಗಡೆ ನಂತರವಷ್ಟೇ ಸತ್ಯಾಂಶ ಬಯಲಾಗಲಿದೆ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ