Volvo C40 Recharge: ಪ್ರತಿ ಚಾರ್ಜ್ ಗೆ 530 ಕಿ.ಮೀ ಮೈಲೇಜ್ ನೀಡುವ ವೊಲ್ವೊ ಸಿ40 ರೀಚಾರ್ಜ್ ಬಿಡುಗಡೆ

ವೊಲ್ವೊ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಕೂಪೆ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಅತ್ಯಾಧುನಿಕ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ.

Volvo C40 Recharge: ಪ್ರತಿ ಚಾರ್ಜ್ ಗೆ 530 ಕಿ.ಮೀ ಮೈಲೇಜ್ ನೀಡುವ ವೊಲ್ವೊ ಸಿ40 ರೀಚಾರ್ಜ್ ಬಿಡುಗಡೆ
ವೊಲ್ವೊ ಸಿ40 ರೀಚಾರ್ಜ್ ಬಿಡುಗಡೆ
Follow us
Praveen Sannamani
|

Updated on: Sep 05, 2023 | 5:14 PM

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ವೊಲ್ವೊ ಇಂಡಿಯಾ(Volvo India) ತನ್ನ ಹೊಚ್ಚ ಹೊಸ ಸಿ40 ರೀಚಾರ್ಜ್(C40 Recharge) ಎಲೆಕ್ಟ್ರಿಕ್ ಎಸ್ ಯುವಿ ಕೂಪೆ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಇವಿ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 61.25 ಲಕ್ಷ ಬೆಲೆ ಹೊಂದಿದೆ. ಹೊಸ ಇವಿ ಕಾರು ಒಂದೇ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಖರೀದಿಗಾಗಿ ಇಂದಿನಿಂದಲೇ ಅಧಿಕೃತ ಬುಕಿಂಗ್ ಆರಂಭವಾಗಿದೆ.

ಭಾರತದಲ್ಲಿ ಮೊದಲ ಬಾರಿಗೆ ಎಕ್ಸ್ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್ ಯುವಿ ಬಿಡುಗಡೆ ಮಾಡಿದ್ದ ವೊಲ್ವೊ ಕಂಪನಿಯು ಇದೀಗ ಗ್ರಾಹಕರ ಬೇಡಿಕೆ ಆಧರಿಸಿ ಸಿ40 ರೀಚಾರ್ಜ್ ಕೂಪೆ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೊಸ ಸಿ40 ರೀಚಾರ್ಜ್ ಇವಿ ಕಾರು ತಾಂತ್ರಿಕವಾಗಿ ಎಕ್ಸ್ ಸಿ40 ರೀಚಾರ್ಜ್ ಮಾದರಿಯಲ್ಲೇ ನಿರ್ಮಾಣಗೊಂಡಿದ್ದು, ಹೊಸ ಕಾರು ಆಕರ್ಷಕ ವಿನ್ಯಾಸ ಮತ್ತು ಕೆಲವು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಂಡಿದೆ.

Volvo C40 Recharge

ಪ್ರಸ್ತುತ ಮಾರುಕಟ್ಟೆಯಲ್ಲಿ ವೊಲ್ವೊ ಇಂಡಿಯಾದ ಒಟ್ಟಾರೆ ಕಾರು ಮಾರಾಟದಲ್ಲಿ ಎಕ್ಸ್ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್ ಯುವಿ ಕಾರು ಶೇ. 25 ರಷ್ಟು ಪಾಲು ಹೊಂದಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಸಿ40 ರೀಚಾರ್ಜ್ ಇವಿ ಕಾರು ಮುಂದಿನ ಒಂದು ವರ್ಷದೊಳಗಾಗಿ ಒಟ್ಟಾರೆ ಕಾರು ಮಾರಾಟದಲ್ಲಿ ಇವಿ ಕಾರು ಮಾರಾಟ ಪ್ರಮಾಣವನ್ನು ಶೇ. 35 ಕ್ಕೆ ಹೆಚ್ಚಿಸುವ ನೀರಿಕ್ಷೆಯಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್ ಯುವಿ ಕೂಪೆ ಮಾದರಿಯು ಎಕ್ಸ್ ಸಿ40 ರೀಚಾರ್ಜ್ ವಿನ್ಯಾಸವನ್ನೇ ಆಧರಿಸಿದ್ದರೂ ಸಿ ಪಿಲ್ಲರ್ ಗಳ ಇಳಿಜಾರಿನೊಂದಿಗೆ ಸ್ಪೋರ್ಟಿಯಾಗಿರುವ ರೂಫ್ ಲೈನ್ ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನ ಬಾನೆಟ್ ಕೂಡಾ ಎತ್ತರವಾದ ಗ್ರೌಂಡ್ ಕ್ಲಿಯೆರೆನ್ಸ್ ನೊಂದಿಗೆ ಆಕರ್ಷಕವಾಗಿ ಕಾಣಲಿದ್ದು, ಥೋರ್-ಹ್ಯಾಮರ್ ವಿನ್ಯಾಸದ ಫಿಕ್ಸಲ್ ಎಲ್ಇಡಿ ಹೆಡ್ ಲೈಟ್ ಗಳು ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯುತ್ತವೆ.

ಇದನ್ನೂ ಓದಿ: ಆಕರ್ಷಕ ಬೆಲೆಗೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಎಸ್ ಯುವಿ ಬಿಡುಗಡೆ

Volvo C40 Recharge (2)

ಹಾಗೆಯೇ ಹೊಸ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, ಇದರಲ್ಲಿ 9 ಇಂಚಿನ ಪೋರ್ಟೈರ್ ಸ್ಟೈಲ್ ಹೊಂದಿರುವ ಟಚ್‌ಸ್ಕ್ರೀನ್‌ ಸ್ಲಿಮ್ ಎಸಿ ವೆಂಟ್‌ಗಳು, ವುಡ್ ಇಂಟೇಕ್ ಡ್ಯಾಶ್‌ಬೋರ್ಡ್‌ ಮತ್ತು 12.3-ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ ಹೊಂದಿದೆ. ಜೊತೆಗೆ ಹೊಸ ಕಾರಿನಲ್ಲಿ ನೇರವಾಗಿ ಗೂಗಲ್ ಮ್ಯಾಪ್ ಮತ್ತು ಅಸಿಸ್ಟ್ ಸೌಲಭ್ಯ ಬಳಕೆಗಾಗಿ ಆಂಡ್ರಾಯ್ಡ್-ಆಧಾರಿತ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ನೀಡಲಾಗಿದ್ದು, ಆನ್‌ಬೋರ್ಡ್ ಇ-ಸಿಮ್ ಸಹಾಯದಿಂದ ಪ್ಲೇ ಸ್ಟೋರ್‌ನಿಂದ ಹಲವಾರು ಅಪ್ಲಿಕೇಶನ್‌ಗಳನ್ನು ಒಳಗೊಂಡಿದೆ.

Volvo C40 Recharge (1)

ಇದರೊಂದಿಗೆ ಹೊಸ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್ ಯುವಿ ಕೂಪೆಯಲ್ಲಿ ಪನೊರಮಿಕ್ ಸನ್ ರೂಫ್, ವೈರ್ ಲೆಸ್ ಫೋನ್ ಚಾರ್ಜಿಂಗ್, 360 ಡಿಗ್ರಿ ಕ್ಯಾಮೆರಾ, ಸೆನ್ಸಾರ್ ಆಧರಿತ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ, ಕನೆಕ್ಟೆಡ್ ಕಾರ್ ಟೆಕ್, ಪವರ್ಡ್ ಫ್ರಂಟ್ ಸೀಟ್ಸ್, ಡ್ರೈವರ್ ಸೈಡ್ ಮೊಮೆರಿ ಫಂಕ್ಷನ್, ಹಿಟಿಂಗ್ ಮತ್ತು ಕೂಲಿಂಗ್ ಹೊಂದಿರುವ ಆಸನಗಳು, ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಪ್ರೀಮಿಯಂ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಂನೊಂದಿಗೆ 413 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯಗಳಿವೆ.

ಬ್ಯಾಟರಿ ಪ್ಯಾಕ್ ಮತ್ತು ಮೈಲೇಜ್

ಕಂಪ್ಯಾಕ್ಟ್ ಮಾಡ್ಯೂಲರ್ ಆರ್ಕಿಟೆಕ್ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗಿರುವ ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್ ಯುವಿ ಕೂಪೆಯಲ್ಲಿ 78kWh ಬ್ಯಾಟರಿ ಪ್ಯಾಕ್ ನೀಡಲಾಗಿದ್ದು, ಇದು ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಜೊತೆಗೆ ಪ್ರತಿ ಚಾರ್ಜ್ ಗೆ ಗರಿಷ್ಠ 530 ಕಿ.ಮೀ ಮೈಲೇಜ್ ನೀಡುತ್ತದೆ. ಹೊಸ ಕಾರಿನಲ್ಲಿರುವ ಬ್ಯಾಟರಿ ಪ್ಯಾಕ್ ಚಾರ್ಜ್ ಮಾಡಲು 150kW ಫಾಸ್ಟ್ ಚಾರ್ಜರ್ ಸೌಲಭ್ಯವು ಕೇವಲ 27 ನಿಮಿಷಗಳಲ್ಲಿ ಪೂರ್ತಿ ಚಾರ್ಜ್ ಒದಗಿಸಲಿದ್ದು, ಹೋಂ ಚಾರ್ಜರ್ ಸೌಲಭ್ಯದಿಂದ ಪೂರ್ತಿ ಚಾರ್ಜ್ ಮಾಡಲು ಸುಮಾರು 18 ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

Volvo C40 Recharge (3)

ಇನ್ನು ಹೊಸ ಕಾರಿನಲ್ಲಿರುವ ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಎರಡು ಆಕ್ಸೆಲ್ ಮೇಲೆ ತಲಾ ಒಂದರಂತೆ ಜೋಡಣೆ ಮಾಡಲಾಗಿದ್ದು, ಇದು ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯದೊಂದಿಗೆ 408 ಹಾರ್ಸ್ ಪವರ್ ಮತ್ತು 660 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಇವಿ ಕಾರು 4.7 ಸೆಕೆಂಡುಗಳಲ್ಲಿ ಪ್ರತಿ ಗಂಟೆಗೆ ಸೊನ್ನೆಯಿಂದ 100 ಕಿ.ಮೀ ವೇಗವರ್ದನೆ ಸಾಮರ್ಥ್ಯ ಹೊಂದಿದ್ದು, ಇದು ಎಕ್ಸ್ ಸಿ40 ರೀಚಾರ್ಜ್ ಗಿಂತಲೂ ಹೆಚ್ಚಿನ ವೇಗದೊಂದಿಗೆ ಪ್ರತಿ ಗಂಟೆಗೆ ಗರಿಷ್ಠ 180 ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಂಡಿದೆ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್