AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಮೊದಲ ಎಥನಾಲ್ ಇಂಧನ ಚಾಲಿತ ಟೊಯೋಟಾ ಇನ್ನೋವಾ ಕಾರು ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

Ethanol Run Toyota Innova: ಟೊಯೊಟಾ ಇನ್ನೋವಾದ ಹೊಸ ಆವೃತ್ತಿಯ ಕಾರು ಎಥನಾಲ್ ಅನ್ನು ಇಂಧನವಾಗಿ ಬಳಸುವ ವಿಶ್ವದ ಮೊದಲ ಬಿಎಸ್-6 ಶ್ರೇಣಿಯ ವಾಹನ ಎನಿಸಿದೆ. ಇದರ ಪ್ರೋಟೋಟೈಪ್ ಸಿದ್ಧವಾಗಿದ್ದು, ಕಾರನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅನಾವರಣಗೊಳಿಸಿದ್ದಾರೆ. ಈ ಕಾರು ತಯಾರಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ.

ವಿಶ್ವದ ಮೊದಲ ಎಥನಾಲ್ ಇಂಧನ ಚಾಲಿತ ಟೊಯೋಟಾ ಇನ್ನೋವಾ ಕಾರು ಬಿಡುಗಡೆ ಮಾಡಿದ ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 29, 2023 | 4:37 PM

Share

ನವದೆಹಲಿ, ಆಗಸ್ಟ್ 29: ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನದಿಂದ ಚಾಲಿತವಾಗುವ ವಾಹನಗಳ (Vehicles Run by Alternative Fuel) ಅಭಿವೃದ್ಧಿಗೆ ಕೇಂದ್ರ ಸರ್ಕಾರ ಆದ್ಯತೆ ಕೊಟ್ಟಿರುವ ಹೊತ್ತಿನಲ್ಲೇ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಂಸ್ಥೆಯ ಜನಪ್ರಿಯ ಇನ್ನೋವಾ ಕಾರಿನ ಹೊಸ ಆವೃತ್ತಿ ಬಿಡುಗಡೆ ಆಗಿದೆ. ಎಥನಾಲ್ ಇಂಧನದಿಂದ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಕಾರು ಇದಾಗಿದೆ. ಟೊಯೊಟಾ ಇನ್ನೊವಾದ ಈ ಹೊಸ ಆವೃತ್ತಿಯ ಕಾರನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಆಗಸ್ಟ್ 29ರಂದು ಬಿಡುಗಡೆ ಮಾಡಿದರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟೊಯೋಟಾ ಇನ್ನೋವಾದ ಈ ಹೊಸ ಆವೃತ್ತಿಯು ಬಿಎಸ್-6 (ಸ್ಟೇಜ್ 2) ಹಂತದ ಕಾರಾಗಿದ್ದು, ಅದರ ಪ್ರೋಟೋಟೈಪ್ ಅನ್ನು ಸಿದ್ಧಪಡಿಸಲಾಗಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ ಇದು ವಿಶ್ವದ ಮೊದಲ ಬಿಎಸ್-6 ಶ್ರೇಣಿಯ ವಿದ್ಯುದೀಕೃತ ಫ್ಲೆಕ್ಸ್ ಫುಯೆಲ್ ವಾಹನವಾಗಿದೆ.

ಇದನ್ನೂ ಓದಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ನಲ್ಲಿ ಭಾರತ ಸ್ವಸಾಮರ್ಥ್ಯ ಬೆಳೆಸಿಕೊಳ್ಳಬೇಕು, ರಾಷ್ಟ್ರೀಯ ಎಐ ಲ್ಯಾಬ್ ಸ್ಥಾಪಿಸಬೇಕು: ಐಬಿಎಂ ಸಿಇಒ ಅರವಿಂದ್ ಕೃಷ್ಣ ಸಲಹೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪರಿಸರಸ್ನೇಹಿಯಾಗಿರುವ ಮತ್ತು ಕಡಿಮೆ ಇಂಗಾಲ ಹೊರಸೂಸುವ ಪರ್ಯಾಯ ಇಂಧನ ಬಳಸುವ ವಾಹನಗಳನ್ನು ಅಭಿವೃದ್ಧಿಪಡಿಸುವಂತೆ ಕಾರುತಯಾರಕ ಸಂಸ್ಥೆಗಳಿಗೆ ಉತ್ತೇಜನ ನೀಡುತ್ತಾ ಬಂದಿದ್ದಾರೆ. ಕಳೆದ ವರ್ಷ ಇದೇ ಟೊಯೊಟಾ ಕಂಪನಿಯ ಮಿರಾಯ್ ಎವಿ ಕಾರನ್ನು ನಿತಿನ್ ಗಡ್ಕರಿ ಅನಾವರಣಗೊಳಿಸಿದ್ದರು. ಟೊಯೋಟಾ ಮಿರಾಯ್ ಇವಿ ಕಾರು ಹೈಡ್ರೋಜನ್ ಸಹಾಯದಿಂದ ಉತ್ಪತ್ತಿಯಾಗುವ ವಿದ್ಯುತ್​ನಿಂದ ಓಡುತ್ತದೆ.

ಇದನ್ನೂ ಓದಿ: Toyota Rumion: ಭರ್ಜರಿ ಮೈಲೇಜ್ ನೀಡುವ ಟೊಯೊಟಾ ರೂಮಿಯಾನ್ ಬಿಡುಗಡೆ

ಪೆಟ್ರೋಲ್ ಆಮದು ವೆಚ್ಚ ವರ್ಷಕ್ಕೆ ಬರೋಬ್ಬರಿ 16 ಲಕ್ಷ ರೂ

ಭಾರತದಲ್ಲಿ ಸದ್ಯ ಪೆಟ್ರೋಲಿಯಂ ಉತ್ಪನ್ನಗಳ ಆಮದು ವೆಚ್ಚ 16 ಲಕ್ಷಕೋಟಿ ರೂ ಇದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಾರ ಇದು ಭಾರತಕ್ಕೆ ಅತೀವ ಆರ್ಥಿಕ ನಷ್ಟ ಉಂಟು ಮಾಡುತ್ತಿದೆ. ಇದನ್ನು ತಪ್ಪಿಸಲು ಇರುವ ಮಾರ್ಗವೆಂದರೆ ಪರ್ಯಾಯ ಇಂಧನ ಬಳಕೆ. ಇದೇ ಕಾರಣಕ್ಕೆ ಪೆಟ್ರೋಲ್​ಗೆ ಪರ್ಯಾಯವಾಗಿರುವ ಇಂಧನ ಬಳಸುವ ಕಾರುಗಳನ್ನು ತಯಾರಿಸುವಂತೆ ವಾಹನ ಕಂಪನಿಗಳಿಗೆ ಸರ್ಕಾರ ಒತ್ತಾಯಿಸುತ್ತಾ ಬಂದಿದೆ. ಪರ್ಯಾಯ ಇಂಧನಗಳಲ್ಲಿ ಜೈವಿಕ ಅನಿಲ ಪ್ರಮುಖ ಎನಿಸಿದೆ.

ಇನ್ನಷ್ಟು ಆಟೊಮೊಬೈಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು