ಕೊರೊನಾ ಸಮರಕ್ಕೆ ವಿದ್ಯಾರ್ಥಿ ಬಲ ಪಡೆಯಲು ಮುಂದಾದ ಬಿಬಿಎಂಪಿ

ಬೆಂಗಳೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ಬೆೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣ ಕಾರ್ಯಕ್ಕೆ ಜಯನಗರದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ೯೯೪ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಳ್ಳಲು ಬಿಬಿಎಂಪಿ ತೀರ್ಮಾನಿಸಿದೆ.

ಹೌದು ಈ ಎಲ್ಲ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿಗಳನ್ನು ಕೂಡಲೇ ಪಾಲಿಕೆ ಕಚೇರಿಗೆ ಬಂದು ವರದಿ ಮಾಡಿಕೊಳ್ಳಲು ಕಳಿಸಿಕೊಡುವಂತೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ -೨೦೦೫ ರ ಸೆಕ್ಷನ್ ೬೫ ರ ಅಡಿಯಲ್ಲಿ, ಸೋಂಕು ಹರಡುವಿಕೆ ತಡೆಗಟ್ಟಲು ವೈದ್ಯಕೀಯ ಪದವಿಗೆ ಸಂಬಂದಿಸಿದ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅವಕಾಶವಿದೆ.

ಹೀಗಾಗಿ ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಪ್ಯಾರಾ ಮೆಡಿಕಲ್ ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ೯೯೪ ವಿದ್ಯಾರ್ಥಿಗಳನ್ನು ಕೊರೋನಾ ಸೋಂಕು ನಿಯಂತ್ರಣ ಕಾರ್ಯಕ್ಕೆ ವಿಶ್ವವಿದ್ಯಾಲಯದ ಕುಲ ಸಚಿವರು ನಿಯೋಜನೆ ಮಾಡಬೇಕು. ಜತೆಗೆ ಎಲ್ಲ ವಿದ್ಯಾರ್ಥಿಗಳು ಆ.೩ರ ಒಳಗಾಗಿ ಬಿಬಿಎಂಪಿ ಕೇಂದ್ರ ಕಚೇರಿಯ ಉಪ ಆಯುಕ್ತರ (ಆಡಳಿತ) ಬಳಿ ತಪ್ಪದೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಎನ್ಎಸ್ಎಸ್ ವಿದ್ಯಾರ್ಥಿಗಳ ಬಳಕೆ
ಇಷ್ಟೇ ಅಲ್ಲ, ನಗರದ ವಿವಿಧ ಕಡೆ ಕೊರೋನಾ ಸೋಂಕು ಪರೀಕ್ಷೆಗೆ ಗಂಟಲು ದ್ರವ (ಸ್ವ್ಯಾಬ್) ಸಂಗ್ರಹಣೆಗಾಗಿ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಕಾಲೇಜುಗಳಿಂದ ನಿಯೋಜಿಸುವಂತೆ ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿ ಅವರಿಗೆ ಬಿಬಿಎಂಪಿ ಆಯುಕ್ತರು ಪತ್ರ ಬರೆದಿದ್ದಾರೆ.

ಸ್ವ್ಯಾಬ್ ಸಂಗ್ರಹಣೆಗೆ ನಿಯೋಜನೆಗೊಂಡ ವಿದ್ಯಾರ್ಥಿಗಳಿಗೆ ಮಾಸಿಕ ೧೪ ಸಾವಿರ ರೂ. ಗೌರವ ಧನ ನೀಡಲಾಗುವುದು. ವಿದ್ಯಾರ್ಥಿಗಳು ವಾಸವಿರುವ ವಾರ್ಡಗಳಲ್ಲಿಯೇ ಕಾರ್ಯ ಹಂಚಿಕೆ ಮಾಡಲಾಗುವುದು. ಸ್ಥಳೀಯ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ವಾಹನ ವ್ಯವಸ್ಥೆ ಮಾಡಲಾಗುವುದು ಎಂದು ಪತ್ರದಲ್ಲಿ ಆಯುಕ್ತರು ತಿಳಿಸಿದ್ದಾರೆ.

01-08-20, 12_34 PM Office Lens

Related Tags:

Related Posts :

Category:

error: Content is protected !!