ಸಿಸಿಬಿ ಪೊಲೀಸರ ಕಾರ್ಯಾಚರಣೆ: 3 ರೌಡಿಶೀಟರ್​ಗಳು ಸೇರಿ 10 ದರೋಡೆಕೋರರ ಬಂಧನ

  • Ayesh Banu
  • Published On - 7:33 AM, 29 Oct 2020

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ.

ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಎರಡೂ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.