ಮಾರ್ಚ್-ಏಪ್ರಿಲ್‌ನಲ್ಲಿ ದೊಡ್ಡ ಮಟ್ಟದ ಸಂಪುಟ ಪುನಾರಚನೆ ಆಗುತ್ತೆ: ರಮೇಶ್ ಜಾರಕಿಹೊಳಿ‌ ಹೊಸ ಬಾಂಬ್

ಮಾರ್ಚ್ ಏಪ್ರಿಲ್‌ನಲ್ಲಿ ದೊಡ್ಡ ಸಂಪುಟ ಪುನಾರಚನೆ ದೊಡ್ಡ ಮಟ್ಟದಲ್ಲಿ ಆಗುತ್ತೆ ಎನ್ನುವ ಮೂಲಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೊಸಬಾಂಬ್ ಸಿಡಿಸಿದ್ದಾರೆ.

  • TV9 Web Team
  • Published On - 13:22 PM, 13 Jan 2021
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಇಂದು ಮಧ್ಯಾಹ್ನ ನೂತನ ಸಚಿವರ ಪದಗ್ರಹಣ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೊಸ ಬಾಂಬ್ ಸಿಡಿಸಿದ್ದಾರೆ. ಮಾರ್ಚ್ ಏಪ್ರಿಲ್‌ನಲ್ಲಿ ದೊಡ್ಡ ಸಂಪುಟ ಪುನಾರಚನೆ ದೊಡ್ಡ ಮಟ್ಟದಲ್ಲಿ ಆಗುತ್ತೆ ಎಂದಿದ್ದಾರೆ.

ಈ ವೇಳೆ ಮಾತನಾಡಿದ ಅವರು ಸಚಿವ ಸ್ಥಾನ ತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ. ಇಂದು ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡ್ತಿದಾರೆ. ಆದ್ರೆ ಮಾರ್ಚ್, ಏಪ್ರಿಲ್‌ನಲ್ಲಿ ದೊಡ್ಡ ಸಂಪುಟ ಪುನಾರಚನೆ ಆಗುತ್ತೇ ಆ ವೇಳೆ ಇಂದು ಸಚಿವ ಸ್ಥಾನ ತಪ್ಪಿದವರಿಗೆ ಅಂದು ಸ್ಥಾನ ಸಿಗುವ ವಿಶ್ವಾಸವಿದೆ. ಮುನಿರತ್ನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ.

ಹೆಚ್.ವಿಶ್ವನಾಥ, ಮಹೇಶ್ ಕುಮಟಳ್ಳಿ, ಮುನಿರತ್ನ ಆಕಾಂಕ್ಷಿಗಳಿದ್ದಾರೆ. ಗುಲಬರ್ಗಾದಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿ ಸೋಲಿಸಿದವರು ಮಾಲೀಕಯ್ಯ ಗುತ್ತೇದಾರ್‌ಗೂ ಸಚಿವ ಸ್ಥಾನ ಸಿಗಬೇಕಿದೆ. ಮಾಲೀಕಯ್ಯ ನನಗಿಂತ ಸ್ಟ್ರಾಂಗ್ ಇದ್ದಾರೆ ಅವರಿಗೆ ಸ್ಥಾನಮಾನ ಸಿಗಬೇಕು ಎಂದರು.

ನಮ್ಮ ಟೀಂನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ:
ಹೆಚ್‌.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶ್‌ರನ್ನು ಸಚಿವ ಸ್ಥಾನದಿಂದ ಕೈ ಬಿಡುತ್ತಿಲ್ಲ. ಸರ್ಕಾರ ಬರಲು ಯೋಗೇಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ.

ಯೋಗೇಶ್ವರ್​ಗೆ ಸ್ಥಾನ ಕೊಟ್ಟಿದ್ದು ಬಹಳ ಸಂತೋಷವಾಗಿದೆ. ಹೆಚ್.ವಿಶ್ವನಾಥ್ ಹಿರಿಯರು ಅವರು ಮಾತನಾಡೋದು ಆಶೀರ್ವಾದ ಅಂದುಕೊಳ್ಳೋಣ. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ಆಗಲಿ. ಇದಾದ ಮೇಲೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆ ಆಗಲಿದೆ ಎಂದು BSY ವಿರುದ್ಧ H.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ಪ್ರತಿಕ್ರಿಯಿಸಿದ್ರು.

ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ‌ ಸರ್ಕಾರ ಕೇವಲ ಬೆಂಗಳೂರು, ಬೆಳಗಾವಿಗೆ ಸೀಮಿತವಾಗಿದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರಕ್ಕೆ ಸಚಿವ ಸ್ಥಾನ ಕೊಟ್ಟಿರುವುದು ಸಂದರ್ಭ ಅನುಗುಣವಾಗಿ ಆಗಿದೆ. ಸಿಎಂ ಎಲ್ಲಾ ಸರಿಪಡಿಸುತ್ತಾರೆ ಎಂದ್ರು.

ಯಡಿಯೂರಪ್ಪನವರೇ.. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನ ಸಿದ್ಧಲಿಂಗೇಶ್ವರನು ಕ್ಷಮಿಸೋಲ್ಲ: H.ವಿಶ್ವನಾಥ್