ಬೈಕ್​ಗೆ ಕಾರ್​ ಡಿಕ್ಕಿ: ಅಸ್ಸಾಂ ಮೂಲದ ಸವಾರ ಸ್ಥಳದಲ್ಲೇ ಸಾವು

ಕಾರ್​ಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಅಸ್ಸಾಂ ಮೂಲದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

  • TV9 Web Team
  • Published On - 22:04 PM, 14 Jan 2021
ಅಸ್ಸಾಂ ಮೂಲದ ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಕಾರ್​ಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಅಸ್ಸಾಂ ಮೂಲದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ಅಸ್ಸಾಂ ಮೂಲದ ರಾಜೀಬ್​ ಗುರುಗನ್​(32) ಮೃತ ಸವಾರ. ಅಪಘಾತದ ನಂತರ ಕಾರು ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು, ಇತ್ತ ಭಿನ್ನಮಂಗಲದ ಬಳಿ ಆಟೋ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ರಾಮಾಂಜಿ(45) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.