Raksha Bandhan 2022: ಅಲೆಕ್ಸಾಂಡರನ ಜೀವ ಉಳಿಸಿದ್ದು ಈ ರಕ್ಷಾ ಬಂಧನ? ಅಲೆಕ್ಸಾಂಡರನ ಪತ್ನಿ ಪೋರಸ್​ನಲ್ಲಿ ಕೇಳಿದ್ದೇನು ಗೊತ್ತಾ?

ಅಲೆಕ್ಸಾಂಡರನು ಭಾರತದ ಮೇಲೆ ದಂಡೆತ್ತಿ ಬಂದಾಗ ಅವನನ್ನು ಧೈರ್ಯದಿಂದ ಎದುರಿಸಿದವನು ಪೋರಸ್. ಆಗ ಅವರಿಬ್ಬರ ನಡುವೆ ಯುದ್ಧ ಆರಂಭಗೊಂಡಿತು. ಇದೇ ಸಮಯದಲ್ಲಿ ಅಲೆಕ್ಸಾಂಡರನ ಪತ್ನಿ ರೊಕ್ಸಾನಳು ಪೋರಸನಿಗೆ ಒಂದು ಪವಿತ್ರ ದಾರವನ್ನು (ರಾಖಿ) ಕಳುಹಿಸಿದಳು. ಅದರ ಜೊತೆಗೆ ಒಂದು ಮನವಿ ಕೂಡ ಇತ್ತು.

Raksha Bandhan 2022: ಅಲೆಕ್ಸಾಂಡರನ ಜೀವ ಉಳಿಸಿದ್ದು ಈ ರಕ್ಷಾ ಬಂಧನ? ಅಲೆಕ್ಸಾಂಡರನ ಪತ್ನಿ ಪೋರಸ್​ನಲ್ಲಿ ಕೇಳಿದ್ದೇನು ಗೊತ್ತಾ?
Alexander
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 11, 2022 | 8:00 AM

ಭಾರತದಲ್ಲಿ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನ. ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಸುಗ್ಗಿ ಅಂತನೇ ಹೇಳಬಹುದು, ಇಲ್ಲಿ ಒಂದಾದ ಮೇಲೊಂದರಂತೆ ಸಾಲು ಸಾಲಾಗಿ ಬರುವ ಹಬ್ಬಗಳಂತೂ ಸಂತೋಷವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತಾ ಹೋಗುತ್ತವೆ, ಅದರಲ್ಲೂ ಅತ್ಯಂತ ಸಂತೋಷ ತರುವ ಹಬ್ಬವೆಂದರೆ ತಂಗಿಯು ಅಣ್ಣನಿಗೆ ರಾಖಿ ಕಟ್ಟುವ ರಕ್ಷಾಬಂಧನ ಹಬ್ಬ. ಸಹೋದರನ ಬದುಕು ಹಸನಾಗಿರಲಿ ಅವನ ಶ್ರೀರಕ್ಷೆ ಸಹೋದರಿ ಮೇಲಿರಲಿ ಎಂಬುದೇ ಈ ಹಬ್ಬದ ವಿಶೇಷತೆ. ಹೌದು, ಸಹೋದರ-ಸಹೋದರಿಯರಿಯರ ಸಂಬಂಧವನ್ನು ಕೊಂಡಾಡುವ ಮತ್ತು ಅದರ ಸ್ವಾದವನ್ನು ಸವಿಯುವ ಹಬ್ಬವೇ ರಕ್ಷಾ-ಬಂಧನ. ಇದನ್ನು ಭಾರತದಲ್ಲಿ ಅಂತೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಅಷ್ಟೇ ಅಲ್ಲದೆ, ಇದು ಅಣ್ಣ-ತಂಗಿಯರ ಮತ್ತು ಅಕ್ಕ-ತಮ್ಮನ ನಡುವಿನ ಬಾಂಧವ್ಯವನ್ನು ಸಾರುವ ಹಬ್ಬವಾಗಿರುವುದರಿಂದ, ಈ ಹಬ್ಬದಂದು ಸಹೋದರ-ಸಹೋದರಿಯರು ಪರಸ್ಪರರ ಏಳಿಗೆಯನ್ನು, ಸಂತೋಷವನ್ನು ಮತ್ತು ಒಳ್ಳೆಯದಾಗಲಿ ಎಂಬ ಆಸೆಯನ್ನು ವ್ಯಕ್ತಪಡಿಸುತ್ತ ಹಬ್ಬವನ್ನು ಆಚರಿಸುತ್ತಾರೆ. ರಕ್ಷಾ ಬಂಧನವು ಈಗಿನ ಕಾಲದಲ್ಲಿ ಸೋದರ-ಸೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಕೊಂಡಾಡುವ ದಿನವಾಗಿ ಗುರುತಿಸಲ್ಪಟ್ಟಿದೆ. ಇತಿಹಾಸದಲ್ಲಿ ಉಲ್ಲೇಖಗೊಂಡಿರುವಂತೆ ಹಿಂದಿನ ಕಾಲದಲ್ಲಿ ರಾಖಿ ಕೇವಲ ರಕ್ಷಣೆಯ ಪ್ರತೀಕವಾಗಿ ಪರಿಗಣಿಸಲ್ಪಟ್ಟಿತ್ತು. ರೇಷ್ಮೆಯಿಂದ ಮಾಡಲಾಗಿರುವ ದಾರದಿಂದ ತಯಾರಿಸಲಾದ ರಾಖಿಯನ್ನು ಸೋದರರ ಕೈಗೆ ಕಟ್ಟಲಾಗುತ್ತದೆ. ಹೀಗೆ ಕಟ್ಟುವಾಗ ತಮ್ಮ ಸೋದರರಿಗೆ ಒಳ್ಳೆಯದಾಗಲಿ ಎಂಬ ಆಸೆಯನ್ನು ಸೋದರಿಯರು ವ್ಯಕ್ತಪಡಿಸುತ್ತಾರೆ ಮತ್ತು ಸೋದರರು ತಮ್ಮ ಸೋದರಿಗೆ ಯಾವುದೇ ಕಷ್ಟದಲ್ಲಿ ಕೂಡಾ ಸಹಾಯವನ್ನು ಮಾಡುತ್ತೇನೆ ಎಂಬ ಪ್ರಮಾಣವನ್ನು ಕೂಡಾ ಮಾಡುತ್ತಾರೆ.

ಅದೇ ರೀತಿ ಸಹೋದರಿಯರು ದೇವರು ತಮ್ಮ ಸಹೋದರನನ್ನು ದುಷ್ಟಶಕ್ತಿಗಳಿಂದ ಕಾಪಾಡಲಿ ಎಂದು ಅರಸಿಕೊಳ್ಳುತ್ತ ರಕ್ಷಾ ಬಂಧನವನ್ನು ಕಟ್ಟುತ್ತಾರೆ.ಇತಿಹಾಸದಲ್ಲಿ ರಾಖಿಯ ಕುರಿತಾದ ಉಲ್ಲೇಖಗಳಿವೆ. ದಂತಕತೆಗಳ ಪ್ರಕಾರ ಅಲೆಕ್ಸಾಂಡರನು ಭಾರತದ ಮೇಲೆ ದಂಡೆತ್ತಿ ಬಂದಾಗ ಅವನನ್ನು ಧೈರ್ಯದಿಂದ ಎದುರಿಸಿದವನು ಪೋರಸ್. ಆಗ ಅವರಿಬ್ಬರ ನಡುವೆ ಯುದ್ಧ ಆರಂಭಗೊಂಡಿತು. ಇದೇ ಸಮಯದಲ್ಲಿ ಅಲೆಕ್ಸಾಂಡರನ ಪತ್ನಿ ರೊಕ್ಸಾನಳು ಪೋರಸನಿಗೆ ಒಂದು ಪವಿತ್ರ ದಾರವನ್ನು (ರಾಖಿ) ಕಳುಹಿಸಿದಳು. ಅದರ ಜೊತೆಗೆ ಒಂದು ಮನವಿ ಕೂಡ ಇತ್ತು. ತನ್ನ ಪತಿಯನ್ನು ಕೊಲ್ಲದಿರುವಂತೆ ಕೇಳಿಕೊಂಡ ಮನವಿ ಅದಾಗಿತ್ತು. ಮುಂದೆ ನಡೆದ ಯುದ್ಧದಲ್ಲಿ ಪೋರಸ್ ಅಲೆಕ್ಸಾಂಡರನನ್ನು ಕೊಲ್ಲದೆ ಉಳಿಸಿದನು. ಇದಕ್ಕೆ ಕಾರಣ ಆತನ ಕೈಯಲ್ಲಿ ಆತ ಕಟ್ಟಿಕೊಂಡಿದ್ದ ರಾಖಿ ಅವನನ್ನು ತಡೆದು ನಿಲ್ಲಿಸಿತ್ತು ಎಂಬ ಕಥೆಯೂ ಕೂಡ ಇದೆ. ರಕ್ಷಾ ಬಂಧನ ಆಚರಿಸುವ ಪೌರಾಣಿಕ ಕಾರಣಗಳು ಕೂಡ ಇವೆ ಎಂಬುದನ್ನು ನಾವು ಇತಿಹಾಸದಲ್ಲಿ ಗಮನಿಸಬಹುದು.

ಇದನ್ನೂ ಓದಿ
Image
Raksha Bandhan 2022: ರಕ್ಷಾ ಬಂಧನದಂದು ಈ ವಿಶೇಷ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿ?
Image
Raksha Bandhan 2022: ರಕ್ಷಾ ಬಂಧನಕ್ಕೆ ಆಕರ್ಷಕ ಮೆಹಂದಿ ಡಿಸೈನ್​ಗಳು ಇಲ್ಲಿವೆ
Image
ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು
Image
Raksha Bandhan Gift Ideas: ರಕ್ಷಾಬಂಧನದ ದಿನ ನಿಮ್ಮ ಸಹೋದರಿಗೆ ಈ ಗಿಫ್ಟ್​ ಕೊಡಬಹುದಾ ನೋಡಿ

ವ್ರತ್ರ ಅಸುರನಿಂದ ಸೋಲಿಸಲ್ಪಟ್ಟಂತಹ ಇಂದ್ರನಿಗೆ ತನ್ನ ಶತ್ರುಗಳಿಂದ ರಕ್ಷಣೆ ಪಡೆಯಬೇಕಾದರೆ ಕೈಗೆ ರಾಖಿ ಕಟ್ಟಿಕೊಳ್ಳಬೇಕು ಎಂದು ಗುರು ಬ್ರಹಸ್ಪತಿ ಅವರು ಹೇಳಿದರು. ಬ್ರಹಸ್ಪತಿ ಅವರ ಮಾತಿನಂತೆ ಇಂದ್ರನ ಒಡನಾಡಿ ಸಚಿ ದೇವಿಯು ಇಂದ್ರನಿಗೆ ರಾಖಿ ಕಟ್ಟಿದಳು ಎಂದು ಭವಿಷ್ಯ ಪುರಾಣದಲ್ಲಿದೆ. ವರುಣ ದೇವನನ್ನು ಒಲೈಸಿಕೊಳ್ಳುವ ಸಲುವಾಗಿ ರಕ್ಷಾಬಂಧನವನ್ನು ಆಚರಿಸಲಾಗುತ್ತದೆ ಎಂದು ಇನ್ನೊಂದು ಪುರಾಣವು ಹೇಳಿದೆ. ರಕ್ಷಾಬಂಧನ ಹಬ್ಬದಂದು ಹಬ್ಬದ ಸ್ನಾನ, ತೆಂಗಿನ ಕಾಯಿ ಉಡುಗೊರೆ ನೀಡುವುದು ಮತ್ತು ಸಮುದ್ರ ದೇವನಿಗೆ ಪೂಜೆ ಮಾಡುವುದು ಈ ಹಬ್ಬದ ದಿನ ನಡೆಯುತ್ತದೆ. ರಕ್ಷಾಬಂಧನ ಹಬ್ಬವನ್ನು ಮೀನುಗಾರ ಸಮುದಾಯದವರು ತುಂಬಾ ವಿಜೃಂಭಣೆಯಿಂದ ಆಚರಿಸುವರು. ಈ ವೇಳೆ ವರುಣ ದೇವನಿಗೆ ರಾಖಿ ಮತ್ತು ತೆಂಗಿನಕಾಯಿಯನ್ನು ಸಮರ್ಪಿಸುವರು. ಪುರಾಣಗಳ ಪ್ರಕಾರ ಈ ದಿನವನ್ನು ನಾರಿಯಲ್ ಪೂರ್ಣಿಮಾ’ ಎಂದು ಕರೆಯಲಾಗುತ್ತದೆ.

ಪ್ರಣಮ್ಯ.ಟಿ ಯಾದವ್

ಪೆರುವಾಯಿ

ಆಳ್ವಾಸ್ ಕಾಲೇಜು ಮೂಡುಬಿದಿರೆ