Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ

ಕನ್ನಡ ವರ್ಣಮಾಲೆಯನ್ನಿಟ್ಟುಕ್ಕೊಂಡು ಪ್ರತಿಯೊಂದು ವರ್ಣಮಾಲೆ ಅಕ್ಷರಕ್ಕು ಒಂದೊಂದು ಕವನ ರಚಿಸಿ, ಕವನದ ಎಲ್ಲ ಸಾಲುಗಳ ಪ್ರಥಮ ಅಕ್ಷರ ಒಂದೇ ಬರುವಂತೆ ಜೋಡಿಸಿ ಬಹಳ ವಿಭಿನ್ನವಾಗಿ ಬರೆದ ಅಂತ್ಯ-ಆರಂಭಕ್ಕೊಂದು ಮುನ್ನುಡಿ ಪುಸ್ತಕ ಸಾಹಿತ್ಯ ಲೋಕದ ಅತ್ಯಂತ ವಿಭಿನ್ನ ಪುಸ್ತಕವೆಂದು Indian book of Record ಸಂಸ್ಥೆಯು ಗುರುತಿಸಿದೆ. ಇದೇ ಮೊದಲ ಬಾರಿಗೆ ಇಂತಹ ಪುಸ್ತಕ ಪ್ರಕಟವಾಗಿದೆ.

Indian book of Record:  ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
ಚಂದ್ರಹಾಸ ಬಳಂಜ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 18, 2022 | 1:35 PM

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜರವರ ಸಾಧನೆಯ ಹಾದಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಗೌರವವನ್ನು ನೀಡಿದೆ.‌ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಮಡಿರುವ ಇವರು ಒಬ್ಬ ಯುವ ಸಾಹಿತಿ, ವಾಗ್ಮಿ, ನಿರೂಪಕ, ಹಾಡುಗಾರ, ನೃತ್ಯಪಟು, ನಟ ಮತ್ತು ತರಬೇತುದಾರ. ಸಾಂಸ್ಕ್ರತಿಕ‌ ಕ್ಷೇತ್ರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಇವರು ಹಲವಾರು ಕಾರ್ಯಕ್ರಮಗಳನ್ನ ಸಂಯೋಜಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಈಗಾಗಲೇ ಎರಡು ಪುಸ್ತಕಗಳನ್ನ ಬಿಡುಗಡೆ ಮಾಡಿದ್ದು, ಹಲವಾರು ಲೇಖನಗಳು ಪ್ರಕಟಗೊಂಡಿದೆ.

ಸಾಹಿತ್ಯ ಲೋಕದಲ್ಲಿ ಕನ್ನಡ ವರ್ಣಮಾಲೆಯನ್ನಿಟ್ಟುಕೊಂಡು ಪ್ರತಿಯೊಂದು ವರ್ಣಮಾಲೆ ಅಕ್ಷರಕ್ಕೂ ಒಂದೊಂದು ಕವನ ರಚಿಸಿ, ಕವನದ ಎಲ್ಲ ಸಾಲುಗಳ ಪ್ರಥಮ ಅಕ್ಷರ ಒಂದೇ ಬರುವಂತೆ ಜೋಡಿಸಿ ಬಹಳ ವಿಭಿನ್ನವಾಗಿ ಬರೆದ ಅಂತ್ಯ ಆರಂಭಕ್ಕೊಂದು ಮುನ್ನುಡಿ ಪುಸ್ತಕ ಸಾಹಿತ್ಯ ಲೋಕದ ಅತ್ಯಂತ ವಿಭಿನ್ನ ಪುಸ್ತಕವೆಂದು ಇಂಡಿಯನ್ ಬುಕ್ ಆಫ್ ರೆಕಾರ್ಡ್ (Indian book of Record) ಸಂಸ್ಥೆಯು ಇವರನ್ನು ಗುರುತಿಸಿದೆ, ಇದೇ ಮೊದಲ ಬಾರಿಗೆ ಇಂತಹ ಪುಸ್ತಕ ಪ್ರಕಟವಾಗಿದ್ದು ಈ ಪುಸ್ತಕವನ್ನು ಯುವವಾಹಿನಿ‌ ರಿ ಬೆಳ್ತಂಗಡಿಯು ಪ್ರಕಟಿಸಿದೆ.

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ಮೊದಲ ಸೂರ್ಯ ಮುಳುಗದ ಸಾಮ್ರಾಜ್ಯ: ವಸಾಹತುಶಾಹಿ ಆಡಳಿತ ಆರಂಭಿಸಿದ್ದು, ಕೊನೆಗೊಳಿಸಿದ್ದು ಯಾವ ದೇಶ?

ಇದನ್ನೂ ಓದಿ
Image
ನನ್ನ ಮೊದಲ ಸಂಬಳದಿಂದ ನಾನು ಕಲಿತ ಪಾಠ !
Image
ಒಂದಾದ ಮೇಲೊಂದು ಅನಿರೀಕ್ಷಿತ ತಿರುವುಗಳಿದ್ದ ದಾರಿಯ ತುದಿಯಲ್ಲಿತ್ತು ನೆಮ್ಮದಿಯ ಬದುಕು
Image
Today History : ಈ ದಾರಿಯಲ್ಲಿ ಪ್ರಯಾಣಿಸುವಾಗ ವಾಹನದ ಹೆಡ್ ಲೈಟ್ ಆಫ್ ಮಾಡಬೇಕು ! ಇದು ಕೊರಗಜ್ಜನ ಆದೇಶ?
Image
ನಿಮಗಿದು ಗೊತ್ತೇ?: ಮೊದಲ ಸೂರ್ಯ ಮುಳುಗದ ಸಾಮ್ರಾಜ್ಯ: ವಸಾಹತುಶಾಹಿ ಆಡಳಿತ ಆರಂಭಿಸಿದ್ದು, ಕೊನೆಗೊಳಿಸಿದ್ದು ಯಾವ ದೇಶ?

ಇವರ ಬಹುಮುಖ ಸಾಧನೆಗೆ ಈಗಾಗಲೇ ದ.ಕ ಜಿಲ್ಲಾ ಯುವ ಸಾಧಕ ಪ್ರಶಸ್ತಿ, ಪ್ರಭಾಕರ ನೀರುಮಾರ್ಗ ಯುವ ಸಾಹಿತಿ ಪ್ರಶಸ್ತಿ , ಎ.ಪಿ‌.ಜೆ ಅಬ್ದುಲ್ ಕಲಾಂ ಪುರಸ್ಕಾರ, ಜೆಸಿಐ ಸಾಧನಾ ಶ್ರೀ, ಸಾಂಸ್ಕೃತಿಕ ಚೇತನ ಪುರಸ್ಕಾರ ಮತ್ತು ರಾಜ್ಯ, ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿಗಳು ಲಭಿಸಿವೆ. ಖಾಸಗಿ ಟಿವಿ ಮಾಧ್ಯಮದ ರೀಯಾಲಿಟಿ ಶೋಗಳಲ್ಲಿ ಕ್ರೀಯೆಟಿವ್ ಆಗಿ ಕರ್ತವ್ಯ ನಿರ್ವಾಹಿಸಿರುವ ಇವರು ಜೆಸಿಐ ಮಂಜುಶ್ರೀ, ಯುವವಾಹಿನಿ ಬೆಳ್ತಂಗಡಿ ನಿರ್ದೇಶಕರಾಗಿ ಬಳಂಜ ಬಿಲ್ಲವ ಸಂಘದ ಸಕ್ರೀಯ ಸದಸ್ಯರಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಮನೆಯ ಶ್ರೀಧರ ಪೂಜಾರಿ ಮತ್ತು ಸುಶೀಲ ದಂಪತಿಗಳ ಪುತ್ರ, ಇದೀಗ ಇವರ “ಅಂತ್ಯ ಆರಂಭಕ್ಕೊಂದು ಮುನ್ನುಡಿ” ಎಂಬ ಪುಸ್ತಕ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದೆ.

ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Sat, 18 June 22

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ