ನೀರಿನ ಬರದ ಮುನ್ನುಡಿ : ನೀರಿನ ಬರವನ್ನು ಓಡಿಸಬಹುದು, ಆದರೆ ಸಾಮೂಹಿಕ ಜನಜಾಗೃತಿಯಾಗಬೇಕು

ಕರಾವಳಿಯ ನೀರಿನ ಬರ’ದ ಅನುಭವವೇ ಇಲ್ಲ! ನೀರಿಂಗಿಸುವ, ಜಲಮರುಪೂರಣ, ಮಳೆಕೊಯ್ಲು.. ವಿಚಾರಗಳನ್ನು ಮಾತನಾಡಿದಾಗ ಎಷ್ಟು ಮಂದಿ ಗೇಲಿ ಮಾಡಿರಬಹುದು! ‘ಕರಾವಳಿಯಲ್ಲೂ ನೀರಿಂಗಿಸುವ ವ್ಯವಸ್ಥೆ ಬೇಕಾ’ ಎಂದು ಕಟುಶಬ್ದಗಳಲ್ಲಿ ದನಿಯೇರಿಸಿ ಮಾತನಾಡಿದವರ ನೆನಪಿದೆ.

ನೀರಿನ ಬರದ ಮುನ್ನುಡಿ : ನೀರಿನ ಬರವನ್ನು ಓಡಿಸಬಹುದು, ಆದರೆ ಸಾಮೂಹಿಕ ಜನಜಾಗೃತಿಯಾಗಬೇಕು
(ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 05, 2022 | 9:06 AM

ಕರಾವಳಿಯಲ್ಲಿ ವಾರ್ಷಿಕವಾಗಿ ಮೂರುವರೆ ಸಾವಿರ ಮಿ.ಮಿ. ಮಳೆಯ ಸಮೃದ್ಧತೆಯಿದೆ. ಉತ್ತರ ಕರ್ನಾಟಕ, ಬಯಲುಸೀಮೆಯಲ್ಲಿ ಆಹಾರ ಬರಕ್ಕಿಂತ ನೀರಿನ ಬರವೇ ಅಧಿಕ. ಮಳೆ ಬಂದರೆ ಬಂತು, ಇಲ್ಲದಿದ್ದರೆ ಇಲ್ಲ. ‘ಎಷ್ಟು ಹಣ ಖರ್ಚಾದರೂ ತೊಂದರೆಯಿಲ್ಲ, ನಾಗರಿಕರಿಗೆ ನೀರು ಒದಗಿಸುತ್ತೇವೆ’ – ಬರದ ಮಾತು ಬಂದಾಗ ಸರಕಾರಗಳು ಹೇಳುವ ತೇಲುಮಾತು. ನೀರನ್ನು ಸೃಷ್ಟಿಸುವುದಕ್ಕೆ ಬರುತ್ತದೋ ಗೊತ್ತಿಲ್ಲ. ಕಡತದಲ್ಲಿ ಮಾತ್ರ ಖರ್ಚಿನ ತಃಖ್ತೆ ಅವಿತಿರುತ್ತದೆ. ನೀರಿನ ಬರವನ್ನು ಅನುಭವಿಸಿದ ಮಂದಿ ಅಲ್ಲಿಲ್ಲಿ ಒಟ್ಟಾಗುತ್ತಿರುವ ಸುದ್ದಿ ಬರುತ್ತಿದೆ. ನೀರಿಂಗಿಸುವ, ಹಸಿರೆಬ್ಬಿಸುವ ಕಾಯಕದಲ್ಲಿ ತೊಡಗಿರುವುದು ವರದಿಯಾಗುತ್ತದೆ. ಶಾಲಾ, ಕಾಲೇಜುಗಳಲ್ಲಿ ನೀರಿನ ಅರಿವನ್ನು ಬಿತ್ತುವ ಕೆಲಸ ನಡೆಯುತ್ತಿದೆ. ಸ್ವಯಂಸೇವಾ ಸಂಸ್ಥೆಗಳು ಕುಳಿತಲ್ಲಿಂದ ಎದ್ದುನಿಂತಿವೆ. ಯುವಕ ಮಂಡಲಗಳ ಅಜೆಂಡಾದಲ್ಲಿ ಪರಿಸರವೂ ಸೇರಿದೆ. ಕಳೆದೆರಡು ದಶಕದಿಂದ ಮಾಧ್ಯಮಗಳಲ್ಲಿ ನೀರಿನ ಕತೆಗಳು, ನೀರಿನ ಉಳಿತಾಯದ ಗಾಥೆಗಳು ಬರುತ್ತಿದ್ದರೂ; ಎಚ್ಚರವಾಗಲು ಇಷ್ಟು ಸಮಯ ಬೇಕಾಯಿತು!

ಸರಿಸುಮಾರು ನಾಲ್ಕು ದಶಕದ ಹಿಂದೆ ಹೊರಳೋಣ. ೧೯೮೩ರಲ್ಲಿ ನೀರಿನ ಬರ ಬಂದಿತ್ತು. ಆ ವರುಷ ಬೇಸಿಗೆಯಲ್ಲಿ ಮಳೆ ಬರಲಿಲ್ಲ. ಮಳೆಗಾಲ ತಡವಾಗಿ ಶುರುವಾಗಿತ್ತು. ಪಶ್ಚಿಮ ಕರಾವಳಿಗೆ ದೊಡ್ಡ ಹೊಡೆತವಾಗಿತ್ತು. ಬಾವಿಗಳೆಲ್ಲಾ ಒಣಗಿದ್ದುವು. ಕುಡಿಯುವ ನೀರಿಗೆ ಹಾಹಾಕಾರವೆದ್ದಿತ್ತು. ತೋಟಗಳೆಲ್ಲಾ ನಿಸ್ತೇಜವಾಗಿದ್ದುವು. ಆಗ ಇಷ್ಟೊಂದು ಕೊಳವೆಬಾವಿಗಳು ಇರಲಿಲ್ಲ. ಮಣ್ಣುಮಾಂದಿ ಯಂತ್ರದ (ಜೆಸಿಬಿ) ಭರಾಟೆ ಇದ್ದಿರಲಿಲ್ಲ. ಅಂತರ್ಜಲದ ಮಟ್ಟ ಸ್ವಲ್ಪ ಕುಸಿದಿತ್ತೇ ವಿನಾ ಪಾತಾಳಕ್ಕೆ ಹೋಗಿಲ್ಲ. ಜನರಲ್ಲಿ ನೆಲ, ನೀರಿನ ಕುರಿತು ಕನಿಷ್ಠ ಅರಿವಿದ್ದು ನಿಭಾಯಿಸಿದ್ದರು. ಜವಾಬ್ದಾರಿಗಳ ಎಚ್ಚರವಿತ್ತು.

ಆಗಿನ ಬರಕ್ಕಿಂತ ಈಚೆಗೆ ಕರಾವಳಿ ತತ್ತರಿಸಿತ್ತು. ಕರಾವಳಿಯನ್ನು ಮಾತ್ರ ಯಾಕೆ ಉಲ್ಲೇಖಿಸುತ್ತೇನೆಂದರೆ, ಇಲ್ಲಿನವರಿಗೆ ‘ನೀರಿನ ಬರ’ದ ಅನುಭವವೇ ಇಲ್ಲ! ನೀರಿಂಗಿಸುವ, ಜಲಮರುಪೂರಣ, ಮಳೆಕೊಯ್ಲು.. ವಿಚಾರಗಳನ್ನು ಮಾತನಾಡಿದಾಗ ಎಷ್ಟು ಮಂದಿ ಗೇಲಿ ಮಾಡಿರಬಹುದು! ‘ಕರಾವಳಿಯಲ್ಲೂ ನೀರಿಂಗಿಸುವ ವ್ಯವಸ್ಥೆ ಬೇಕಾ’ ಎಂದು ಕಟುಶಬ್ದಗಳಲ್ಲಿ ದನಿಯೇರಿಸಿ ಮಾತನಾಡಿದವರ ನೆನಪಿದೆ. ಬಹುಶಃ ಈಗಿರುವುದಕ್ಕಿಂತ ಆಳಕ್ಕೆ ಇನ್ನು ಅಂತರ್ಜಲ ಇಳಿಯಲಾರದು. ಕೊಳವೆ ಬಾವಿಗಳ ವಿಫಲ ಕತೆಗಳ ಸರಣಿ ಶುರುವಾಗಿ ಹಲವು ಕಾಲವಾಯಿತು.

ಬರದ ನಡುವೆಯೂ ಬರವನ್ನು ಆಹ್ವಾನಿಸದ ಮಂದಿ ಎಷ್ಟಿಲ್ಲ? ಭೂಮಿಗೆ ನೀರನ್ನು ಕುಡಿಸಿ ಬದುಕಿನಲ್ಲಿ ನಗುವವರತ್ತ ಚಿತ್ತ ಹರಿಸಬೇಕಾಗಿದೆ. ಏನಿಲ್ಲವೆಂದರೂ ಒಂದೊಂದು ತಾಲೂಕಿನಲ್ಲಿ ನಾಲ್ಕೈದು ಮಂದಿಯಾದರೂ ಜಲಮರುಪೂರಣ ಮಾಡಿಕೊಂಡು ನೆಮ್ಮದಿಯಾಗಿದ್ದವರು ಇದ್ದಾರೆ. ಅವರ ಕೆಲಸಗಳು ಸದ್ದಾಗುವುದಿಲ್ಲ. ಇಂತಹ ಯಶೋಗಾಥೆಗಳಿಗೆ ಬೆಳಕು ಹಾಕುವ, ಅವರೊಂದಿಗೆ ಮಾತುಕತೆ ಮಾಡುವ, ಮಾದರಿಗಳ ಪರಿಣಾಮಗಳತ್ತ ನೋಡುವ ಮನಃಸ್ಥಿತಿ ನಿರ್ಮಾಣವಾಗಬೇಕು. ಪಂಚಾಯತ್‌ಗಳು, ಯುವಕ ಸಂಘಗಳು, ಹಳೆವಿದ್ಯಾರ್ಥಿ ಸಂಘ, ಭಜನಾ ಸಂಘ, ಕಲಾ ಸಂಘಗಳು ಭೂಒಡಲಿಗೆ ನೀರಿಂಗಿಸುವ ಪ್ರಕ್ರಿಯೆಯನ್ನು ಮುಖ್ಯ ಅಜೆಂಡಾವಾಗಿ ಇಟ್ಟುಕೊಳ್ಳಬೇಕು. ‘ನನ್ನ ಭೂಮಿಗೆ ನೀರು ಇಂಗಿಸಿದರೆ ನನಗೆ ಪ್ರಯೋಜನವಾದೀತೇ?’ ಇಂತಹ ಪ್ರಶ್ನೆಗಳನ್ನು ಸಾಕಷ್ಟು ಬಾರಿ ಕೇಳಿದ್ದೇನೆ. ಇಲ್ಲಿ ‘ನಾನು’ ಎನ್ನುವುದರ ಬದಲು ‘ನಾವು’ ಎಂದಾದರೆ ನೀರಿನ ಬರವನ್ನು ಓಡಿಸಬಹುದು. ಸಾಮೂಹಿಕ ಜನಜಾಗೃತಿಯಾಗಬೇಕು. ಎಲ್ಲರೂ ಕೈಜೋಡಿಸದ ಹೊರತು ಅನ್ಯ ಮಾರ್ಗವಿಲ್ಲ.

ಗುಡ್ಡದ ನೀರು ಹರಿದುಹೋಗದೆ ಅಲ್ಲಲ್ಲೇ ಇಂಗುವಂತಾದರೆ ಅದರ ಸುತ್ತುಮುತ್ತಲಿನ ಕೆಳ ಪ್ರದೇಶಗಳಲ್ಲಿ ಸಹಜವಾಗಿ ಅಂತರ್ಜಲ, ನೀರಿನ ಒರತೆ ವೃದ್ಧಿಯಾಗುತ್ತದೆ. ಗುಡ್ಡದಲ್ಲಿ ಬಿದ್ದ ನೀರನ್ನು ಹರಿದುಹೋಗದಂತೆ ಮಾಡುವುದು ಮೊದಲಾದ್ಯತೆಯ ಕೆಲಸವಾಗಬೇಕು. ಮೊದಲು ಪ್ರಕೃತಿಯೇ ಈ ಕೆಲಸ ಮಾಡುತ್ತಿತ್ತು. ಈಗ ಆ ಹೊಣೆಯನ್ನು ಪ್ರಕೃತಿಯೇ ನಮ್ಮ ಮೇಲೆ ಹೊರಿಸಿದೆ. ಗುಡ್ಡದಲ್ಲಿ ನೀರು ಇಂಗದೆ ಆಚೀಚಿಗಿನ ತೋಡು, ನದಿಗಳು ಹೇಗೆ ಹರಿದಾವು? ನದಿಯಲ್ಲಿ ಬೇಸಿಗೆಯಲ್ಲೂ ನೀರಿದೆ ಎಂದಾದರೆ ಅಂತರ್ಜಲ, ಒರತೆಯ ಗಾಢತೆಯಿದೆ ಎಂದರ್ಥ.

ಗುಡ್ಡದ ನೆತ್ತಿಯಲ್ಲಿ ನೀರಿಂಗಿದರೆ ಅದುವೇ ಕೆಳಗಿನವರಿಗೆ ನೀರಿನ ಸೆಲೆ. ಈ ಸೆಲೆಯನ್ನು ಕೊಳವೆ ಬಾವಿ ಕೊರೆದು ಮುಚ್ಚಿದ್ದೇವೆ. ಜಲತಜ್ಞ ಶ್ರೀಪಡ್ರೆ ಸ್ಪಷ್ಟವಾಗಿ, ಅರ್ಥವಾಗುವಂತೆ ಹೇಳುತ್ತಾರೆ, “ಬ್ಯಾಂಕಿನಲ್ಲಿ ಅಕೌಂಟ್ ತೆರೆಯುತ್ತೇವೆ. ಅದಕ್ಕೆ ಹಣ ತುಂಬಿದರೆ ಮಾತ್ರ ಬೇಕಾದಾಗ ಹಣ ತೆಗೆಯಬಹುದು. ತುಂಬದೇ ಇದ್ದರೆ? ಬೇರೆಯವರು ಹಣ ತುಂಬುತ್ತಾರೇನು? ಬ್ಯಾಂಕಿನವರು ಪುಕ್ಸಟೆ ಹಣ ಕೊಡರು. ಕೊನೆಗೆ ಅಕೌಂಟ್ ತೆರೆಯುವಾಗ ಜಮೆ ಮಾಡಿದ ಹಣವೂ ಸಿಗಲಾರದು.” ಮದಕ, ಕಟ್ಟ ಮೊದಲಾದ ಪರಂಪರಿಕ ಜಲ ಸಂರಕ್ಷಣ ವಿಧಾನಗಳಿಗೆ ಮರುಜನ್ಮ ನೀಡಲೇಬೇಕು. ಬೋಳು ಗುಡ್ಡಗಳಲ್ಲಿ ಹಸಿರೆಬ್ಬಿಸುವ ಕೆಲಸ ಸಮರದ ರೀತಿ ನಡೆಯಬೇಕು.

ಮಾಡುವವರಾರು? ನಮ್ಮ ಜನಪ್ರತಿನಿಧಿಗಳಿಗೆ ಪುರುಸೊತ್ತಿಲ್ಲ ಬಿಡಿ. ನಾವು ಬದುಕಲು ಜೀವಜಲ ಬೇಕು. ಅದಕ್ಕಾಗಿ ನಾವೇ ಯತ್ನಿಸಬೇಕು. ನೀರಿಂಗಿಸಿ ಯಶಕಂಡ ಮಾದರಿಗಳು ಎಲ್ಲೆಲ್ಲಿ ಇವೆಯೋ ಅಲ್ಲಿಗೆ ಬೇಟಿ ನೀಡೋಣ. ನಮ್ಮ ನೆಲದಲ್ಲೂ ಅನುಷ್ಠಾನಿಸೋಣ.

ನಾ. ಕಾರಂತ ಪೆರಾಜೆ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು